ಸುಶಾಂತ್ ಕೇಸ್: ಸಿಬಿಐನಿಂದ ಎಫ್ಐಆರ್, ರಿಯಾಗೆ ಇಡಿ ಸಮನ್ಸ್

ಮುಂಬೈ, ಆ.5: ಹಿಂದಿ ಚಿತ್ರರಂಗದ ಜನಪ್ರಿಯ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಪ್ರಮುಖ ಬೆಳವಣಿಗೆಗಳು ನಡೆದಿವೆ. ಪ್ರಕರಣವನ್ನು ಕೈಗೆತ್ತಿಕೊಂಡಿರುವ ಸಿಬಿಐ ಎಫ್ಐಆರ್ ಹಾಕಿದೆ.

ಇನ್ನೊಂದೆಡೆ ತನಿಖೆ ಮುಂದುವರೆಸಿರುವ ಜಾರಿ ನಿರ್ದೇಶನಾಲಯವು ವಿಚಾರಣೆಗೆ ಹಾಜರಾಗಲು ನಟಿ ರಿಯಾ ಚಕ್ರವರ್ತಿಗೆ ಸಮನ್ಸ್ ಜಾರಿ ಮಾಡಿದೆ. ಆಗಸ್ಟ್ 7ರಂದು ಮುಂಬೈನ ಕಚೇರಿಗೆ ಖುದ್ದು ಹಾಜರಾಗಲು ತಿಳಿಸಲಾಗಿದೆ. ಸುಶಾಂತ್ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕೂಡಾ ತನಿಖೆ ತೀವ್ರಗೊಳಿಸಿದೆ.

ಸುಶಾಂತ್ ಸಿಂಗ್ ಅವರ ಖಾತೆಯಿಂದ 40 ಕೋಟಿ ರೂಪಾಯಿ ವ್ಯವಹಾರ ನಡೆದಿದ್ದು ಈ ಪೈಕಿ 15 ಕೋಟಿ ರು ವಹಿವಾಟಿಗೆ ಲೆಕ್ಕ ಸಿಕಿಲ್ಲ ಎಂದು ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸುಶಾಂತ್ ಬ್ಯಾಂಕ್ ಖಾತೆಗಳನ್ನು ರಿಯಾ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದ್ದು, ಈ ಬಗ್ಗೆ ಪ್ರಶ್ನಿಸಲು ವಿಚಾರಣೆಗೆ ಸಮನ್ಸ್ ಜಾರಿಗೊಳಿಸಲಾಗಿದೆ.

CBI registers FIR in Sushant Singh Rajput’s case; ED summons Rhea Chakraborty

ಸುಶಾಂತ್ ಸಿಂಗ್ ರಜಪೂತ್ ಗೆಳತಿ ರಿಯಾ ಚಕ್ರವರ್ತಿ ಮತ್ತು ಅವರ ಸಹೋದರನಿಗೆ ಸಂಬಂಧಿಸಿದ ಕಂಪನಿಗಳ ವಹಿವಾಟು ಮತ್ತು ಹೂಡಿಕೆಗಳ ಬಗ್ಗೆ ಸುಶಾಂತ್ ಅವರ ಸಿಎ ಅವರನ್ನು ವಿಚಾರಣೆಗೊಳಪಡಿಸಿದ್ದಾರೆ.

ಜೂನ್ 14 ರಂದು ಸುಶಾಂತ್ ಸಿಂಗ್ ರಜಪೂತ್ ಸಿಂಗ್ ಬಾಂದ್ರಾದಲ್ಲಿರುವ ತಮ್ಮ ಫ್ಲ್ಯಾಟ್‌ನಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಈ ಸಂಬಂಧ ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಿಹಾರ ಪೊಲೀಸರು ಕೂಡಾ ತನಿಖೆ ಕೈಗೆತ್ತಿಕೊಂಡಿದ್ದರು. ಈ ನಡುವೆ ಮಹಾರಾಷ್ಟ್ರ ಹಾಗೂ ಬಿಹಾರ ಸರ್ಕಾರದ ನಡುವೆ ತನಿಖೆ ಪೈಪೋಟಿ, ಸುಶಾಂತ್ ಆಪ್ತರ ಆಗ್ರಹಪೂರ್ವಕ ಮನವಿಯಂತೆ ಕೇಂದ್ರ ಸರ್ಕಾರವು ಪ್ರಕರಣವನ್ನು ಸಿಬಿಐಗೆ ವಹಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+