ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಬೈ ಹಾಫ್ ಕಿನ್ ಸಂಸ್ಥೆಗೆ ಕೊರೊನಾ ಲಸಿಕೆ ಉತ್ಪಾದಿಸಲು ಅನುಮತಿ

|
Google Oneindia Kannada News

ಮುಂಬೈ, ಏಪ್ರಿಲ್ 16: ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಏರಿಕೆ ಮತ್ತು ಲಸಿಕೆ ಕೊರತೆ ನಿಭಾಯಿಸುವ ಉದ್ದೇಶದಿಂದ ಮುಂಬೈ ಮೂಲದ ಹಾಫ್ ಕಿನ್ ಸಂಸ್ಥೆಯಲ್ಲಿ ಕೊವ್ಯಾಕ್ಸಿನ್ ಲಸಿಕೆ ಉತ್ಪಾದಿಸುವುದಕ್ಕೆ ಕೇಂದ್ರ ಸರ್ಕಾರ ಗುರುವಾರ ಅನುಮತಿ ನೀಡಿದೆ.

ಮಹಾರಾಷ್ಟ್ರದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಹಾಫ್ ಕಿನ್ ಸಂಸ್ಥೆಯಲ್ಲಿ ಲಸಿಕೆ ಉತ್ಪಾದಿಸುವುದಕ್ಕೆ ಅನುಮತಿ ನೀಡಬೇಕೆಂದು ಕೋರಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪತ್ರ ಬರೆದಿದ್ದರು.

ಮಹಾರಾಷ್ಟ್ರದಲ್ಲಿ ಕೈಮೀರಿದ ಕೊರೊನಾ; ಪ್ರಧಾನಿಗೆ ಸಿಎಂ ಪತ್ರಮಹಾರಾಷ್ಟ್ರದಲ್ಲಿ ಕೈಮೀರಿದ ಕೊರೊನಾ; ಪ್ರಧಾನಿಗೆ ಸಿಎಂ ಪತ್ರ

ಕೇಂದ್ರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ರೇಣು ಸ್ವರೂಪ್ ಅವರು ಮಹಾರಾಷ್ಟ್ರ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಕುಂಟೆ ಅವರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ದೇಶದ ಹಳೆಯ ಸಂಸ್ಥೆಗಳಲ್ಲಿ ಒಂದಾಗಿರುವ ಹಾಫ್ ಕಿನ್ ಇನ್ಸ್ ಟಿಟ್ಯೂಟ್ ನಲ್ಲಿ ಕೊವ್ಯಾಕ್ಸಿನ್ ಲಸಿಕೆ ಉತ್ಪಾದಿಸುವುದಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Central Govt Gives Permission To Mumbai-Based Haffkine Institute For Produce Corona Vaccine

ಪ್ರಧಾನಿಗೆ ಸಿಎಂ ಉದ್ಧವ್ ಠಾಕ್ರೆ ಧನ್ಯವಾದ:

ಒಂದು ವರ್ಷದ ಅವಧಿಗೆ ಕೇಂದ್ರ ಸರ್ಕಾರವು ಕೊವ್ಯಾಕ್ಸಿನ್ ಲಸಿಕೆ ಉತ್ಪಾದಿಸುವುದಕ್ಕೆ ಹಾಫ್ ಕಿನ್ ಸಂಸ್ಥೆಗೆ ಅನುಮತಿ ನೀಡಿದೆ. ಲಸಿಕೆ ಉತ್ಪಾದನೆಯ ಮೇಲುಸ್ತುವಾರಿ ನೋಡಿಕೊಳ್ಳುವುದಕ್ಕೆ ಹಿರಿಯ ಸರ್ಕಾರಿ ಅಧಿಕಾರಿಯನ್ನು ನೇಮಿಸುವಂತೆ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೂಚನೆ ನೀಡಿದ್ದಾರೆ. ಇದರ ಜೊತೆ ತಮ್ಮ ಪತ್ರಕ್ಕೆ ತಕ್ಷಣ ಸಕಾರಾತ್ಮಕವಾಗಿ ಸ್ಪಂದಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ದಾಖಲೆ:

ಮಹಾರಾಷ್ಟ್ರದಲ್ಲಿ ಒಂದೇ ದಿನ 61,695 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 53,335 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಒಂದೇ ದಿನ 349 ಮಂದಿ ಪ್ರಾಣ ಬಿಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 36,39,855ಕ್ಕೆ ಏರಿಕೆಯಾಗಿದೆ. ಈವರೆಗೂ 29,59,056 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಒಟ್ಟು 59,153 ಮಂದಿ ಪ್ರಾಣ ಬಿಟ್ಟಿದ್ದಾರೆ. ಉಳಿದಂತೆ ರಾಜ್ಯದಲ್ಲಿ 6,20,060 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

English summary
Central Govt Gives Permission To Mumbai-Based Haffkine Institute For Produce Corona Vaccine.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X