• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪಾಕಿಸ್ತಾನ ವಿರುದ್ಧ ಭಾರತದ ಜಲಾಸ್ತ್ರ ಪ್ರಯೋಗ

|

ಮುಂಬೈ, ಆಗಸ್ಟ್ 21:ಪಾಕಿಸ್ತಾನಕ್ಕೆ ಹರಿಯುತ್ತಿರುವ ನೀರನ್ನು ನಿಲ್ಲಿಸುವ ಕೆಲಸ ಆರಂಭಗೊಂಡಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ತಿಳಿಸಿದ್ದಾರೆ.

ಭಾರತದ ಮೇಲೆ ದಾಳಿ ಮಾಡಲು ಹಿಂಬಾಗಿಲಿನಿಂದ ಪಾಕಿಸ್ತಾನವು ಪ್ರಯತ್ನಿಸುತ್ತಿದೆ. ಗಡಿಯಲ್ಲಿ ಕದನ ವಿರಾಮ ಲ್ಲಂಘಿಸಿ ಹಲವು ಬಾರಿ ಯೋಧರ ಮೇಲೆ ದಾಳಿ ನಡೆದಿದೆ.

ಭಾರತ ನಮ್ಮ ವಿರುದ್ಧ ಈಗಾಗಲೇ 'ಜಲಯುದ್ಧ' ಆರಂಭಿಸಿದೆ: ಪಾಕಿಸ್ತಾನ

ಇದೀಗ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಧಿ 370 ನಿಷೇಧಿಸಿದ ಹಿನ್ನೆಲೆಯಲ್ಲಿ ಭಾರತದ ಮೇಲೆ ಪಾಕಿಸ್ತಾನಕ್ಕಿದ್ದ ರೋಷ ಇನ್ನಷ್ಟು ಹೆಚ್ಚಾಗಿದೆ.

ರೈಲುಗಳನ್ನು ಸ್ಥಗಿತಗೊಳಿಸಿದೆ, ವಿಮಾನ ಸೇವೆಯನ್ನು ಕೂಡ ಸ್ಥಗಿತಗೊಳಿಸಿದೆ. ಇದೀಗ ಪಾಕ್‌ಗೆ ಪಾಠ ಕಲಿಸಲು ಭಾರತ ಸಿದ್ಧವಾಗಿದೆ.

ಪಾಕ್‌ನ ಈ ರಹಸ್ಯ ಪಿಒಕೆ ಜನರನ್ನು 59 ವರ್ಷದಿಂದ ಮೋಸದ ಜಾಲದಲ್ಲಿಟ್ಟಿತ್ತು

ಪುಲ್ವಾಮಾ ದಾಳಿಯ ಬಳಿಕ ಪಾಕಿಸ್ತಾನಕ್ಕೆ ನೀಡಿದ್ದ ಪರಮಾಪ್ತ ರಾಷ್ಟ್ರ ಸ್ಥಾನಮಾನವನ್ನು ಕಿತ್ತೆಸೆದು ಅಲ್ಲಿಂದ ದೇಶಕ್ಕೆ ರಫ್ತಾಗುತ್ತಿದ್ದ ಉತ್ಪನ್ನಗಳ ಮೇಲೆ ಶೇ.200 ರಷ್ಟು ಆಮದು ಸುಂಕವನ್ನು ಭಾರತ ವಿಧಿಸಿದೆ.

ಮಾಜಿ ಪ್ರಧಾನಿ ಜವಾಹರಲಾಲ್ ಮತ್ತು ಪಾಕಿಸ್ತಾನದ ಅಧ್ಯಕ್ಷ ಅಯುಬ್ ಖಾನ್ ನಡುವೆ 1960 ರಲ್ಲಿ ಇಂಡಸ್ ನದಿ ಯೋಜನೆ ಒಪ್ಪಂದ ನಡೆದಿತ್ತು. ಈ ಒಪ್ಪಂದದ ಪ್ರಕಾರ ಮೂರು ನದಿಗಳು ಭಾರತಕ್ಕೆ ಹಂಚಿಕೆಯಾದರೆ ಮೂರು ನದಿಗಳು ಪಾಕಿಸ್ತಾನಕ್ಕೆ ಹಂಚಿಕೆಯಾಗಿದೆ.

ಇಂಡಸ್ ಒಪ್ಪಂದ ಉಲ್ಲಂಘನೆ ಇಲ್ಲ ಆದರೂ ನಾವು ನೀರು ಕೊಡಲ್ಲ

ಇಂಡಸ್ ಒಪ್ಪಂದ ಉಲ್ಲಂಘನೆ ಇಲ್ಲ ಆದರೂ ನಾವು ನೀರು ಕೊಡಲ್ಲ

ನಾವು ಇಂಡಸ್ ಒಪ್ಪಂದವನ್ನು ಉಲ್ಲಂಘಿಸದೇ ಪಾಕಿಸ್ತಾನಕ್ಕೆ ಹರಿಯುತ್ತಿರುವ ನೀರನ್ನು ನಿಲ್ಲಿಸುವ ಕಾರ್ಯ ಈಗಾಗಲೇ ಆರಂಭಗೊಂಡಿದೆ ಎಂದು ಶೇಖಾವತ್ ತಿಳಿಸಿದ್ದಾರೆ.ನೀರನ್ನು ಸಂಗ್ರಹಿಸಲು ನಾವು ಜಲಾಶಯವನ್ನು ನಿರ್ಮಿಸುತ್ತಿದ್ದೇವೆ. ನಂತರ ಕಾಲುವೆಗಳ ಮೂಲಕ ನೀರನ್ನು ಹರಿಸಲಾಗುತ್ತದೆ ಎಂದು ವಿವರಿಸಿದರು.

ನಾನು ಪಾಕಿಸ್ತಾನಕ್ಕೆ ಹರಿಯುವ ನೀರನ್ನು ನಿಲ್ಲಿಸುತ್ತಿರುವ ಬಗ್ಗೆ ಮಾತನಾಡುತ್ತೇನೆಯೇ ಹೊರತು ಇಂಡಸ್ ಒಪ್ಪಂದ ಉಲ್ಲಂಘನೆ ಮಾಡುತ್ತಿರುವ ಬಗ್ಗೆ ಅಲ್ಲ. ಪಾಕಿಸ್ತಾನಕ್ಕೆ ನಮ್ಮ ನೆಲದಿಂದ ಜಾಸ್ತಿ ನೀರು ಹರಿದು ಹೋಗುತ್ತದೆ.

ವಿದ್ಯುತ್ ಉತ್ಪಾದನೆಗೆ ಮಾತ್ರ ಜಲಾಶಯ ನಿರ್ಮಿಸುತ್ತಿಲ್ಲ

ವಿದ್ಯುತ್ ಉತ್ಪಾದನೆಗೆ ಮಾತ್ರ ಜಲಾಶಯ ನಿರ್ಮಿಸುತ್ತಿಲ್ಲ

ವಿದ್ಯುತ್ ಉತ್ಪಾದನೆಗೆ ಮಾತ್ರ ಜಲಾಶಯ ನಿರ್ಮಿಸುತ್ತಿಲ್ಲ. ಮಳೆ ಕಡಿಮೆಯಾದ ಸಂದರ್ಭದಲ್ಲಿ ನೀರನ್ನು ಹರಿಸಲು ಈ ಜಲಾಶಯ ನಿರ್ಮಾಣ ಮಾಡುತ್ತಿದ್ದೇವೆ ಎಂದು ಸರ್ಕಾರದ ಕ್ರಮಕ್ಕೆ ಅವರು ಸಮರ್ಥನೆ ನೀಡಿದರು.

ಎಲ್ಲೆಲ್ಲೂ ಮುಖಭಂಗ, ICJ ಯಲ್ಲಿ ಯುದ್ಧಸಾರಲು ಹೊರಟ ಪಾಕಿಸ್ತಾನ!

2016ರಲ್ಲಿಯೇ ಪಾಕಿಸ್ತಾನಕ್ಕೆ ಹರಿಯುವ ನೀರನ್ನು ಭಾರತಕ್ಕೆ ತಿರುಗಿಸಲು ಯೋಜನೆ

2016ರಲ್ಲಿಯೇ ಪಾಕಿಸ್ತಾನಕ್ಕೆ ಹರಿಯುವ ನೀರನ್ನು ಭಾರತಕ್ಕೆ ತಿರುಗಿಸಲು ಯೋಜನೆ

ಈ ವಿಚಾರದ ಬಗ್ಗೆ ಮೊದಲ ಬಾರಿಗೆ ಮಾತನಾಡಿದ್ದ ಅಂದಿನ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ, ಉಗ್ರರಿಗೆ ಸಹಕಾರ ನೀಡುವುದನ್ನು ಮುಂದುವರಿಸಿದರೆ ಮುಂದೆ ಸಂಪೂರ್ಣವಾಗಿ ಭಾರತದಿಂದ ಪಾಕಿಸ್ತಾನಕ್ಕೆ ನೀರು ಹರಿಸುವುದನ್ನು ನಿಲ್ಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.

2016ರಲ್ಲಿ ಉರಿ ಸೇನಾ ನೆಲೆಯ ಮೇಲೆ ದಾಳಿ ನಡೆದ ಬಳಿಕ ಕೇಂದ್ರ ಸರ್ಕಾರ ಪಾಕಿಸ್ತಾನಕ್ಕೆ ಹರಿಯುತ್ತಿರುವ ನೀರನ್ನು ಭಾರತದತ್ತ ತಿರುಗಿಸಲು ಯೋಜನೆ ರೂಪಿಸಿತ್ತು.

ಪಾಕಿಸ್ತಾನ ನಿರಂತರವಾಗಿ ಉಗ್ರರಿಗೆ ಸಹಕಾರ ನೀಡುತ್ತಾ ಬಂದಿದೆ. ಇನ್ನು ಮುಂದೆಯೂ ಸಹಕಾರ ನೀಡಿದರೆ ಭಾರತದಿಂದ ಹರಿಯುವ ನೀರನ್ನು ನಿಲ್ಲಿಸುತ್ತೇವೆ. ಪಾಕಿಸ್ತಾನಕ್ಕೆ ಹರಿಯುವ ನೀರನ್ನು ಹರ್ಯಾಣ, ಪಂಜಾಬ್, ರಾಜಸ್ಥಾನಕ್ಕೆ ಹರಿಸಲಾಗುವುದು. ಈ ಸಂಬಂಧ ಈಗಾಗಲೇ ಅಧ್ಯಯನ ಆರಂಭಗೊಂಡಿದೆ ಎಂದು ತಿಳಿಸಿದ್ದರು.

ಮೂರು ನದಿಗಳ ನೀರು ಪಾಕಿಸ್ತಾನಕ್ಕೆ ಹರಿಯುತ್ತಿದೆ

ಮೂರು ನದಿಗಳ ನೀರು ಪಾಕಿಸ್ತಾನಕ್ಕೆ ಹರಿಯುತ್ತಿದೆ

ಮೂರು ನದಿಗಳ ನೀರು ಪಾಕಿಸ್ತಾನಕ್ಕೆ ಹರಿಯುತ್ತಿದೆ. ಈ ನೀರನ್ನು ನಿಲ್ಲಸಬೇಕು ಎನ್ನುವ ಇಚ್ಛೆ ನಮಗಿಲ್ಲ. ನದಿ ನೀರಿನ ವಿಚಾರದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಸ್ನೇಹಯುತ ಸಂಬಂಧ ಇದ್ದ ಕಾರಣ ಈ ನದಿ ಒಪ್ಪಂದ ನಡೆದಿದೆ. ಆದರೆ ಈಗ ಎರಡು ದೇಶಗಳ ನಡುವಿನ ಸಂಬಂಧ ಮುರಿದು ಬಿದ್ದಿದೆ. ಹೀಗಾಗಿ ಈ ಒಪ್ಪಂದವನ್ನು ಪಾಲನೆ ಮಾಡಬೇಕಾದ ಅಗತ್ಯ ನಮಗಿಲ್ಲ ಎಂದು ಗಡ್ಕರಿ ಹೇಳಿದ್ದರು.

ಇಂಡಸ್ ನದಿ ನೀರಿನ ಒಪ್ಪಂದದ ಪ್ರಕಾರ ರಾವಿ, ಸಟ್ಲೇಜ್, ಬೀಯಾಸ್ ನದಿ ನೀರಿನ ಬಳಕೆ ಭಾರತಕ್ಕೆ ಮೀಸಲಾಗಿದ್ದರೆ, ಜೇಲಂ, ಚೀನಾಬ್ ಮತ್ತು ಇಂಡಸ್ ನದಿ ನೀರು ಪಾಕಿಸ್ತಾನಕ್ಕೆ ಹಂಚಿಕೆಯಾಗಿದೆ. ಈ ಒಪ್ಪಂದದ ಪ್ರಕಾರ ಭಾರತಕ್ಕೆ ಮೀಸಲಾಗಿರುವ ಮೂರು ನದಿಗಳ ನೀರನ್ನು ನೀರಾವರಿ ಮತ್ತು ವಿದ್ಯುತ್ ಉತ್ಪಾದನೆಗೆ ಬಳಸಬಹುದಾಗಿದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Jal Shakti Minister Gajendra Singh Shekhawat sais that,Centre has started the process of stopping water from flowing into Pakistan without breaking the Indus Waters Treaty.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more