ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

5 ತಿಂಗಳ ಮಗುವಿನ ಜೀವ ರಕ್ಷಣೆಗೆ ಪ್ರಧಾನಿಯಿಂದ 6 ಕೋಟಿ ರೂ. ತೆರಿಗೆ ವಿನಾಯಿತಿ

|
Google Oneindia Kannada News

ಮುಂಬೈ,ಫೆಬ್ರವರಿ 11: ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ 5 ತಿಂಗಳ ಮಗುವಿನ ರಕ್ಷಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಔಷಧಿ ಆಮದಿನ ಮೇಲಿನ ತೆರಿಗೆಯನ್ನು ಮನ್ನಾ ಮಾಡಿದೆ.

ಅಪರೂಪದ ಅನುವಂಶಿಕ ಕಾಯಿಲೆಯಿಂದ ಬಳಲುತ್ತಿರುವ ಮಗುವಿಗೆ ಗೆ 16 ಕೋಟಿ ರೂ. ಮೌಲ್ಯದ ಔಷಧಿಯನ್ನು ಆಮದು ಮಾಡಿಕೊಳ್ಳುತ್ತಿದ್ದು ಇದರ ಮೇಲಿನ 6 ಕೋಟಿ ರೂ.ಗಳ ಜಿಎಸ್ಟಿ ಮೊತ್ತವನ್ನು ಪಿಎಂ ಮೋದಿ ಮನ್ನಾ ಮಾಡಿದ್ದಾರೆ.

ಕೋವಿಡ್ ಲಸಿಕೆ ಕಳಿಸಿಕೊಡಿ: ಮೋದಿಗೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಮನವಿಕೋವಿಡ್ ಲಸಿಕೆ ಕಳಿಸಿಕೊಡಿ: ಮೋದಿಗೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಮನವಿ

ಇನ್ನು ಈ ಔಷಧಿಯನ್ನು ಅಮೆರಿಕಾದಿಂದ ಆಮದು ಮಾಡಿಕೊಳ್ಳಬೇಕಾಗಿತ್ತು. ಇದಕ್ಕಾಗಿ ಆಮದು ಸುಂಕವನ್ನು ಪಾವತಿ ಮಾಡಬೇಕಾಗಿತ್ತು. ಮಗುವಿನ ಜೀನ್ ಬದಲಿ ಚಿಕಿತ್ಸೆಯಿಂದ ಗುಣಪಡಿಸಬಹುದಾದ ಔಷಧಿಯನ್ನು ಕ್ರೌಡ್-ಫಂಡಿಂಗ್ ಮೂಲಕ 16 ಕೋಟಿ ರೂಪಾಯಿಯನ್ನು ಸಂಗ್ರಹಿಸಿದ್ದರು.

Centre Waives Tax, Import Duty To Tune Of Rs 6 Crore On Infants Imported Medicines

ಇದಕ್ಕಾಗಿ ಪ್ರತಿಪಕ್ಷದ ನಾಯಕ ಮತ್ತು ಬಿಜೆಪಿ ಶಾಸಕ ದೇವೇಂದ್ರ ಫಡ್ನವೀಸ್ ಅವರು ಪ್ರಧಾನಿ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮಗುವಿನ ಪೋಷಕರು ಪತ್ರ ಬರೆದು ಔಷಧಿಗಳ ಆಮದಿಗೆ ಅನ್ವಯವಾಗುವ ಎಲ್ಲ ತೆರಿಗೆಗಳನ್ನು ವಿನಾಯಿತಿ ನೀಡುವಂತೆ ಕೋರಿದ್ದರು.

ಇದೇ ವಿಷಯವಾಗಿ 6 ಕೋಟಿ ರೂ. ಆಮದು ಸುಂಕವನ್ನು ಕಡಿತ ಮಾಡಬೇಕು ಎಂದು ಫಡ್ನವೀಸ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಮೋದಿ ಅವರು ಆಮದು ಸುಂಕ ವಿನಾಯಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

English summary
The Union government has waived import duty and GST of Rs 6 crore on medicines for a five-month-old girl suffering from a rare medical condition, BJP leader Devendra Fadnavis said on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X