• search
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಹಾರಾಷ್ಟ್ರ: ಮಕ್ಕಳ ಕಳ್ಳರೆಂದು ಐವರಿಗೆ ಥಳಿತ: ಸಾರ್ವಜನಿಕರಿಂದಲೇ ರಕ್ಷಣೆ

By Nayana
|

ಮುಂಬೈ, ಜು.3: ಮಹಾರಾಷ್ಟ್ರದ ಧುಲೆ ಎಂಬಲ್ಲಿ ಮಕ್ಕಳನ್ನು ಕಳ್ಳತನ ಮಾಡುತ್ತಾರೆ ಎಂಬ ವದಂತಿ ಹಿನ್ನೆಲೆಯಲ್ಲಿ ಐವರನ್ನು ಸಾರ್ವಜನಿಕರು ಕಲ್ಲಿನಿಂದ ಹೊಡೆದು ಹತ್ಯಮಾಡಿದ 10 ಗಂಟೆಯ ಒಳಗೆ ಮಹಾರಾಷ್ಟ್ರದ ಮಾಲೆಗಾಂವ್‌ ಹತ್ತಿರ ಐವರ ಗುಂಪಿನ ಸಾರ್ವಜನಿಕರು ದಾಳಿ ಮಾಡುತ್ತಿದ್ದಾಗ ಸಾರ್ವಜನಿಕರೇ ರಕ್ಷಿಸಿರುವ ಘಟನೆ ವರದಿಯಾಗಿದೆ.

ಮಹಾರಾಷ್ಟ್ರದ ನಾಸಿಕ್‌ ಜಿಲ್ಲೆಯ ಮಾಲೆಗಾಂವ್‌ ಬಳಿ ಮಕ್ಕಳನ್ನು ಕಳ್ಳತನ ಮಾಡುತ್ತಿದ್ದಾರೆ ಎನ್ನುವ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಹಿನ್ನೆಲೆಯಲ್ಲಿ ಎರಡು ವರ್ಷದ ಬಾಲಕ ಮತ್ತು ಇಬ್ಬರು ಮಹಿಳೆಯರು ಸೇರಿದಂತೆ ಐವರ ಮೇಲೆ ಸಾರ್ವಜನಿಕರು ಹಲ್ಲೆ ಮಾಡಿದ್ದರು, ಆದರೆ ಇದೊಂದು ವದಂತಿ ಎಂದು ತಿಳಿದ ಸ್ಥಳೀಯರಿಬ್ಬರು ಸಾರ್ವಜನಿಕರ ಮನವೊಲಿಸಿ ಅವರು ಕಳ್ಳರಲ್ಲ ಎಂದು ಹೇಳಿ ಅವರನ್ನು ರಕ್ಷಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಮಕ್ಕಳ ಕಳ್ಳರೆಂದು ಐವರ ಭೀಕರ ಹತ್ಯೆ

ಇಬ್ಬರು ಮಹಿಳೆಯರು ಸೇರಿದಂತೆ ಐವರ ತಂಡದ ಮೇಲೆ ಸಾರ್ವಜನಿಕರು ಹಲ್ಲೆ ನಡುತ್ತಿದ್ದಾಗ ಸ್ಥಳೀಯರೊಬ್ಬರು ತಮ್ಮ ಸ್ನೇಹಿತರ ಜೊತೆ ಸೇರಿ ಸಾರ್ವಜನಿಕರ ಮನವೊಲಿಸಲು ಯತ್ನಿಸಿದರು, ಆದರೆ ಜನರು ಐವರು ತಂಡದ ಮೇಲೆ ದಾಳಿಯನ್ನು ಮುಂದುವರೆಸಿದಾಗ ಮಿಲ್‌ ಓನರ್‌ ಐವರನ್ನು ರಕ್ಷಿಸಲು ಕೋಣೆಯೊಳಗೆ ಕೂಡಿ ಹಾಕಿ ಪೊಲೀಸರಿಗೆ ಮಾಹಿತಿ ನೀಡಿದರು.

ಬಳಿಕ 130 ಜನರ ಪೊಲೀಸ್‌ ತಂಡ ಸ್ಥಳಕ್ಕೆ ಧಾವಿಸಿ ಸಾರ್ವಜನಿಕರನ್ನು ಮನವೊಲಿಸಲು ಪ್ರಯತ್ನಿಸಿತ್ತು, ಈ ಮಧ್ಯೆ ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಘರ್ಷಣೆ ಸಂಭವಿಸಿ ಸಾರ್ವಜನಿಕರ ಆಸ್ತಿಪಾಸ್ತಿ ಹಾನಿ ಉಂಟಾಗಿದ್ದು, ಪೊಲೀಸ್‌ ವ್ಯಾನ್‌ನ್ನು ಉದ್ರಿಕ್ತ ಸಾರ್ವಜನಿಕರು ಉರುಳಿಸಿದ್ದಾರೆ. ಪ್ರಕರಣ ಕುರಿತಂತೆ ಪೊಲೀಸರು 250ಕ್ಕೂ ಹೆಚ್ಚು ಜನರ ವಿರುದ್ಧ ದೂರು ದಾಖಲಿಸಿದ್ದಾರೆ.

ಹಲ್ಲೆಗೊಳಗಾದ ಐವರ ತಂಡ ಮಾಲೆಗಾಂವ್‌ ಬಳಿ ರೈಲ್ವೆ ಟಿಕೆಟ್‌ ಕಾಯ್ದಿರಿಸುವ ಸಲುವಾಗಿ ಬಂದಿತ್ತು. ಮೂಲತಃ ಪರ್ಭಾನಿ ಜಿಲ್ಲೆಯ ಗ್ರಾಮವೊಂದರ ನಿವಾಸಿಗಳು ಮಾಲೆಗಾಂವ್‌ಗೆ ಕೆಲಸಕ್ಕೆಂದು ಬಂದಿದ್ದರು. ಸಾಮಾಜಿಕ ಜಾಲತಾಣದಲ್ಲಿ ಹರಡಿಸಿರುವ ಮಕ್ಕಳ ಕಳ್ಳರ ವದಂತಿ ಹಿನ್ನೆಲೆ ಈ ಐವರನ್ನು ಮಕ್ಕಳ ಕಳ್ಳರೆಂದು ಭಾವಿಸಿ ಸಾರ್ವಜನಿಕರು ಅವರ ಮೇಲೆ ಹಲ್ಲೆ ನಡೆಸಿದ್ದರು.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ಇನ್ನಷ್ಟು ಮುಂಬೈ ಸುದ್ದಿಗಳುView All

English summary
Including a two-year-old boy and two women, five persons were attacked by a mob in Malegaon in neighbouring Nashik district after rumors on social media that they were trying to kidnap a child.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more