ಕೊರೊನಾ ಪೀಡಿತರು ಮೃತಪಟ್ಟರೆ ಅಂತ್ಯ ಸಂಸ್ಕಾರಕ್ಕೂ ಮಾರ್ಗಸೂಚಿ!

ಮುಂಬೈ, ಮಾರ್ಚ್ 30 : ಕೊರೊನಾ ಸೋಂಕಿತರು ಮೃತಪಟ್ಟರೆ ಅಂತ್ಯ ಸಂಸ್ಕಾರಕ್ಕೆ ಮಾರ್ಗಸೂಚಿ ರಚಿಸಲಾಗಿದೆ. ಮೃತಪಟ್ಟವರು ಯಾವುದೇ ಧರ್ಮಕ್ಕೆ ಸೇರಿದ್ದರೂ ಅವರನ್ನು ಸುಡಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.

ಮುಂಬೈ ಮಹಾನಗರ ಪಾಲಿಕೆ ಈ ಕುರಿತು ಸುತ್ತೋಲೆ ಹೊರಡಿಸಿದೆ. ವೈರಸ್ ಹರಡದಂತೆ ತಡೆಯಲು ಈ ಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಮಹಾರಾಷ್ಟ್ರದಲ್ಲಿ ಸೋಂಕು ಪೀಡಿತರ ಸಂಖ್ಯೆ 200ರ ಗಡಿ ದಾಟಿದೆ. ಇದುವರೆಗೂ 10 ಜನರು ಮೃತಪಟ್ಟಿದ್ದಾರೆ.

ಮೃತಪಟ್ಟವರು ಯಾವುದೇ ಧರ್ಮಕ್ಕೆ ಸೇರಿದ್ದರೂ ಶವವನ್ನು ಸುಡಲಾಗುತ್ತದೆ. ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಲು 5 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಅವರು ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಪಾಡಬೇಕು ಎಂದು ತಿಳಿಸಲಾಗಿದೆ.

Circular To Cremation Of Persons Who Died Due To COVID 19

ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳುವವರು ಶವವನ್ನು ಮುಟ್ಟುವಂತಹ ಯಾವುದೇ ಸಂಪ್ರದಾಯವನ್ನು ನಡೆಸಬಾರದು ಎಂದು ಸುತ್ತೋಲೆ ತಿಳಿಸಿದೆ. ಶವ ಮುಟ್ಟಿದರೆ ವೈರಸ್ ಮತ್ತೊಬ್ಬರಿಗೆ ಹರಡುವ ಸಾಧ್ಯತೆ ಇರುವುದರಿಂದ ಇಂತಹ ತೀರ್ಮಾನವನ್ನು ಕೈಗೊಳ್ಳಲಾಗಿದೆ.

ಮಹಾರಾಷ್ಟ್ರ ರಾಜ್ಯದಲ್ಲಿ ಕೊರೊನಾ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಆದ್ದರಿಂದ, ಸೋಂಕು ಹರಡದಂತೆ ತಡೆಯಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಆದೇಶವನ್ನು ಕಟ್ಟು ನಿಟ್ಟಾಗಿ ಪಾಲನೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.

ಭಾರತದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಒಂದು ಸಾವಿರದ ಗಡಿ ದಾಟಿದೆ. ದೇಶದಲ್ಲಿ ಇದುವರೆಗೂ 30 ಜನರು ಮೃತಪಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+