ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೌರತ್ವ ತಿದ್ದುಪಡಿ ಮಸೂದೆ ಪಾಸ್; ಐಪಿಎಸ್ ಅಧಿಕಾರಿ ರಾಜೀನಾಮೆ

|
Google Oneindia Kannada News

ನವದೆಹಲಿ, ಡಿಸೆಂಬರ್ 11 : ಪೌರತ್ವ ತಿದ್ದುಪಡಿ ಮಸೂದೆಗೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಮಸೂದೆ ಜಾರಿ ವಿರೋಧಿಸಿ ಮುಂಬೈನಲ್ಲಿ ಐಪಿಎಸ್ ಅಧಿಕಾರಿಯೊಬ್ಬರು ರಾಜೀನಾಮೆ ನೀಡಿದ್ದಾರೆ.

ಬುಧವಾರ ರಾಜ್ಯಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆಗೆ ಒಪ್ಪಿಗೆ ಸಿಕ್ಕಿದೆ. ಮಸೂದೆ ಪರವಾಗಿ 125, ವಿರುದ್ಧವಾಗಿ 105 ಮತ ಚಲಾವಣೆ ಆಯಿತು. ಮಸೂದೆಗೆ ಒಪ್ಪಿಗೆ ಸಿಕ್ಕಿದ್ದಕ್ಕೆ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

ಡಿಸಿಪಿ ರವಿ ಚನ್ನಣ್ಣನವರ್ ಹೇಳಿದ ಮಹಿಳಾ ಐಪಿಎಸ್ ಅಧಿಕಾರಿಯ ಯಶೋಗಾಥೆ! ಡಿಸಿಪಿ ರವಿ ಚನ್ನಣ್ಣನವರ್ ಹೇಳಿದ ಮಹಿಳಾ ಐಪಿಎಸ್ ಅಧಿಕಾರಿಯ ಯಶೋಗಾಥೆ!

ಐಪಿಎಸ್ ಅಧಿಕಾರಿ ಅಬ್ದುರ್ ರೆಹಮಾನ್ ಮಸೂದೆ ಜಾರಿಗೊಳಿಸುವುದನ್ನು ವಿರೋಧಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಹಾರಾಷ್ಟ್ರ ಕೆಡರ್‌ನ ಅಧಿಕಾರಿ ಅಬ್ದುರ್ ರೆಹಮಾನ್ ಐಜಿಪಿಯಾಗಿ ಮುಂಬೈನಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು.

Citizenship Amendment Bill Passed IPS Officer Abdur Rahman Resigns

ಈ ಕುರಿತು ಟ್ವೀಟ್ ಮಾಡಿರುವ ಅಬ್ದುರ್ ರೆಹಮಾನ್, "ಪೌರತ್ವ ತಿದ್ದುಪಡಿ ಮಸೂದೆ ಭಾರತದ ಜಾತ್ಯಾತೀತ ಹಾಗೂ ಬಹುಸಂಸ್ಕೃತಿಗೆ ಧಕ್ಕೆ ಉಂಟು ಮಾಡಲಿದ್ದು, ಸಂವಿಧಾನದ ವಿರೋಧಿಯಾಗಿದೆ" ಎಂದು ಹೇಳಿದ್ದಾರೆ. "ಎಲ್ಲರೂ ಕಾನೂನು ಚೌಕಟ್ಟಿನಲ್ಲಿ ಇದರ ವಿರುದ್ಧ ಹೋರಾಟಬೇಕು" ಎಂದು ಕರೆ ನೀಡಿದ್ದಾರೆ.

Breaking: ಪೌರತ್ವ ಮಸೂದೆ ರಾಜ್ಯಸಭೆಯಲ್ಲೂ ಅಂಗೀಕಾರ: ಬಿದ್ದ ಮತಗಳೆಷ್ಟು?Breaking: ಪೌರತ್ವ ಮಸೂದೆ ರಾಜ್ಯಸಭೆಯಲ್ಲೂ ಅಂಗೀಕಾರ: ಬಿದ್ದ ಮತಗಳೆಷ್ಟು?

"ಆರ್ಟಿಕಲ್ 14, 15 ಹಾಗೂ 25ರ ಪ್ರಕಾರ ಈ ಮಸೂದೆ ಸಂವಿಧಾನ ವಿರುದ್ಧವಾಗಿದ್ದು ಧರ್ಮದ ಆಧಾರದಲ್ಲಿ ದೇಶವನ್ನು ವಿಭಜನೆ ಮಾಡುತ್ತದೆ. ಮುಸ್ಲಿಂ ಸಮುದಾಯದಲ್ಲಿ ಮಸೂದೆ ಜಾರಿ ಭಯವನ್ನು ಉಂಟು ಮಾಡುತ್ತದೆ" ಎಂದು ಅಬ್ದುರ್ ರೆಹಮಾನ್ ಆತಂಕ ವ್ಯಕ್ತಪಡಿಸಿದ್ದಾರೆ.

"ಪೌರತ್ವ ತಿದ್ದುಪಡಿ ಮಸೂದೆ ಕೇವಲ ಮುಸ್ಲಿಮರು ಮಾತ್ರವಲ್ಲ ದಲಿತ, ಆದಿವಾಸಿ, ಬಡವರ ವಿರೋಧಿಯಾಗಿದ್ದು, ಈ ಕಾರಣಕ್ಕಾಗಿ ಇದನ್ನು ವಿರೋಧಿಸಿ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ" ಎಂದು ಪತ್ರದಲ್ಲಿ ಹೇಳಿದ್ದಾರೆ.

English summary
The Citizenship (Amendment) Bill is discussed and passed in rajya sabha. IPS officer Abdur Rahman resigned for the post and said bill is against the religious pluralism of India. I request all justice loving people to oppose the bill in a democratic manner.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X