ಮಹಾರಾಷ್ಟ್ರದಲ್ಲಿ 10 ದಿನಗಳ ಸಂಪೂರ್ಣ ಲಾಕ್ ಡೌನ್
ಮುಂಬೈ, ಜುಲೈ 10 : ದೇಶದಲ್ಲಿ ಅತಿ ಹೆಚ್ಚು ಕೊರೊನಾ ವೈರಸ್ ಸೋಂಕಿತರು ಇರುವ ರಾಜ್ಯ ಮಹಾರಾಷ್ಟ್ರ. ರಾಜ್ಯ ಸರ್ಕಾರ ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯಲು 10 ದಿನಗಳ ಸಂಪೂರ್ಣ ಲಾಕ್ ಡೌನ್ ಜಾರಿಗೆ ತರುತ್ತಿದೆ.
Recommended Video
ಶುಕ್ರವಾರ ಮಹಾರಾಷ್ಟ್ರ ಸರ್ಕಾರ ಈ ಕುರಿತು ಆದೇಶ ಹೊರಡಿಸಿದೆ. ಜುಲೈ 13 ರಿಂದ 23ರ ತನಕ ಸಂಪೂರ್ಣ ಲಾಕ್ ಡೌನ್ ಜಾರಿಗೆ ಬರಲಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಇತರ ಯಾವುದೇ ಸೇವೆಗಳಿಗೆ ಅವಕಾಶವಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಪುಣೆ ಮತ್ತು ಪುಣೆ ಸಮೀಪದ ಪಿಂಪರಿ ಚಿಂಚ್ವಾಡ್ ಪ್ರದೇಶಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಗೆ ಬರಲಿದೆ. ಪುಣೆಯಲ್ಲಿ ಪ್ರಸ್ತುತ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 33,394.
ಪುಣೆ ಗ್ರಾಮಾಂತರ ಪ್ರದೇಶದ ಕೆಲವು ಭಾಗಗಳಲ್ಲಿಯೂ ಸಂಪೂರ್ಣ ಲಾಕ್ ಡೌನ್ ಇರಲಿದೆ. ಆಸ್ಪತ್ರೆ, ಮೆಡಿಕಲ್ ಶಾಪ್ ಸೇರಿದಂತೆ ಇತರ ಅಂಗಡಿಗಳನ್ನು ಮಾತ್ರ ತರೆಯಲು ಅವಕಾಶ ನೀಡಲಾಗುತ್ತದೆ ಎಂದು ಪುಣೆ ಜಿಲ್ಲಾಡಳಿತ ತನ್ನ ಆದೇಶದಲ್ಲಿ ತಿಳಿಸಿದೆ.
ದೇಶಾದ್ಯಂತ ಜುಲೈ 31ರ ತನಕ ಲಾಕ್ ಡೌನ್ ಜಾರಿಯಲ್ಲಿರಲಿದೆ. ಆದರೆ, ಹಲವು ವಿನಾಯಿತಿಗಳನ್ನು ಕೇಂದ್ರ ಗೃಹ ಸಚಿವಾಲಯ ನೀಡಿದೆ. ಈಗ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ರಾಜ್ಯಗಳಲ್ಲಿ ಲಾಕ್ ಡೌನ್ ಜಾರಿಗೆ ತರಲಾಗುತ್ತಿದೆ.












Click it and Unblock the Notifications