ಮಹಾರಾಷ್ಟ್ರದಲ್ಲಿ ತಲೆಕೆಳಗಾದ ಪ್ಲಾನ್: ತುರ್ತು ಸಭೆ ಕರೆದ ಕಾಂಗ್ರೆಸ್

ಮುಂಬೈ, ನವೆಂಬರ್ 23: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್, ಎನ್‌ಸಿಪಿ, ಶಿವಸೇನಾ ಸೇರಿ ಸರ್ಕಾರ ರಚನೆ ಮಾಡುವ ಕನಸು ಕಾಣುತ್ತಿದ್ದ ಕಾಂಗ್ರೆಸ್‌ಗೆ ಭಾರಿ ಆಘಾತವಾಗಿದೆ ಹೀಗಾಗಿ ಕೆಸಿ ವೇಣುಗೋಪಾಲ್ ನೇತೃತ್ವದಲ್ಲಿ ತುರ್ತು ಸಭೆ ಕರೆದಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಕೂಡ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಬಿಜೆಪಿಯ ದೇವೇಂದ್ರ ಫಡ್ನವಿಸ್ ಸತತ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರೆ, ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದರು.

ಕಾಂಗ್ರೆಸ್, ಎನ್ ಸಿಪಿ ಮತ್ತು ಶಿವಸೇನೆ ಸರ್ಕಾರ ರಚಿಸಲು ಅಂತಿಮ ಘಟ್ಟಕ್ಕೆ ಬಂದ ಹೊತ್ತಿನಲ್ಲಿ ಈ ದಿಢೀರ್ ಬೆಳವಣಿಗೆ ನಡೆದಿದೆ. ಅಕ್ಟೋಬರ್ 24ರಂದು ಫಲಿತಾಂಶ ಹೊರಬಂದ ಮೇಲೆ ಬಿಜೆಪಿಗೆ ಸ್ವಂತ ಬಲದಿಂದ ಸರ್ಕಾರ ರಚಿಸಲು ಸಾಧ್ಯವಾಗಿರಲಿಲ್ಲ. ಶಿವಸೇನೆ ಮುಖ್ಯಮಂತ್ರಿ ಹುದ್ದೆಗೆ ಪಟ್ಟು ಹಿಡಿದಿತ್ತು.

Congress Calls Urgent Meeting

ಈ ಬಾರಿಯ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ 105 ಸ್ಥಾನಗಳನ್ನು, ಶಿವಸೇನೆ 56, ಎನ್ ಸಿಪಿ 54 ಮತ್ತು ಕಾಂಗ್ರೆಸ್ 44 ಸ್ಥಾನಗಳನ್ನು ಗೆದ್ದುಕೊಂಡಿದೆ.

ಹೊಂದಾಣಿಕೆ ಬಾರದ ಹಿನ್ನಲೆಯಲ್ಲಿ ಸರ್ಕಾರ ರಚಿಸಲು ಸಾಧ್ಯವಾಗದೆ ರಾಷ್ಟ್ರಪತಿ ಆಡಳಿತ ಜಾರಿಗೆ ಬಂದಿತ್ತು. ಬೆಳಗ್ಗೆ 5.47ಕ್ಕೆ ರಾಷ್ಟ್ರಪತಿ ಆಡಳಿತ ಕೊನೆಗೊಂಡಿದ್ದು, ದೇವೇಂದ್ರ ಫಡ್ನವಿಸ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+