ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉದ್ಧವ್ ಠಾಕ್ರೆ ಜೊತೆ ರಾಹುಲ್ ಗಾಂಧಿ ಸೋಶಿಯಲ್ ಡಿಸ್ಟೆನ್ಸ್: ಸ್ಪಷ್ಟನೆ

|
Google Oneindia Kannada News

ನವದೆಹಲಿ, ಮೇ 26: ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗಲಿದೆ ಎನ್ನುವ ಸುದ್ದಿಗೆ ರೆಕ್ಕೆಪುಕ್ಕ ಇದೆಯೋ, ಇಲ್ಲವೋ ಗೊತ್ತಿಲ್ಲ, ಆದರೆ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಾತ್ರ ಸರಣಿ ಸಭೆ ನಡೆಸಿದ್ದೇ ನಡೆಸಿದ್ದು.

Recommended Video

ಕಾಂಗ್ರೆಸ್ ವಿರುದ್ಧ ಸಿಎಂಗೆ ಸಾಫ್ಟ್ ಕಾರ್ನರ್..? | Yediyurappa

ಉದ್ಧವ್ ಠಾಕ್ರೆ ನೇತೃತ್ವದ ಸರಕಾರದ ಜೊತೆ ರಾಹುಲ್ ಗಾಂಧಿ ಅಂತರ ಕಾಯ್ಡುಕೊಳ್ಳುತ್ತಿದ್ದಾರೆ ಎನ್ನುವ ಸುದ್ದಿ ಈ ಎಲ್ಲಾ ಗೊಂದಲಕ್ಕೆ ಕಾರಣವಾಗಿದೆ. ಈ ಬಗ್ಗೆ ರಾಹುಲ್ ಗಾಂಧಿ ಸ್ಪಷ್ಟನೆಯನ್ನು ನೀಡಿದ್ದಾರೆ.

ಶಿವಸೇನಾ-ಎನ್‌ಸಿಪಿ ಭೇಟಿ: ಮಹಾರಾಷ್ಟ್ರ ಸರ್ಕಾರ ಗಟ್ಟಿಯಾಗಿದೆಶಿವಸೇನಾ-ಎನ್‌ಸಿಪಿ ಭೇಟಿ: ಮಹಾರಾಷ್ಟ್ರ ಸರ್ಕಾರ ಗಟ್ಟಿಯಾಗಿದೆ

"ಠಾಕ್ರೆ ಸರಕಾರಕ್ಕೆ ಕಾಂಗ್ರೆಸ್ ಬೆಂಬಲವನ್ನು ಮಾತ್ರ ನೀಡುತ್ತಿದೆ. ಸರಕಾರದ ಪ್ರಮುಖ ನಿರ್ಧಾರಗಳಲ್ಲಿ ಕಾಂಗ್ರೆಸ್ ತಲೆ ಹಾಕುವುದಿಲ್ಲ"ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Congress Leader Rahul Gandhi Keeping Distance From Uddhav Thackeray, Given Clarfication

"ಪಂಜಾಬ್, ಛತ್ತೀಸಗಢ, ರಾಜಸ್ಥಾನ ಮತ್ತು ಪುದುಚೇರಿಯಲ್ಲಿ ಕಾಂಗ್ರೆಸ್ ಪಕ್ಷ ತಾನೇ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ. ಆದರೆ, ಮಹಾರಾಷ್ಟ್ರದ ವಿಚಾರದಲ್ಲಿ ಹಾಗಲ್ಲ"ಎಂದು ರಾಹುಲ್ ಗಾಂಧಿ ಸ್ಪಷ್ಟ ಪಡಿಸಿದ್ದಾರೆ.

"ನಾನು ಮತ್ತೆ ಮತ್ತೆ ಹೇಳುತ್ತಿದ್ದೇನೆ. ಮಹಾರಾಷ್ಟ್ರ ದೇಶದ ಪ್ರಮುಖ ರಾಜ್ಯಗಳಲ್ಲೊಂದು, ಮುಂಬೈ ಈ ದೇಶದ ವಾಣಿಜ್ಯ ರಾಜಧಾನಿ. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಕೇಂದ್ರ ಸರಕಾರ, ರಾಜ್ಯ ಸರಕಾರಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಬೇಕಿದೆ"ಎಂದು ರಾಹುಲ್ ಅಭಿಪ್ರಾಯ ಪಟ್ಟಿದ್ದಾರೆ.

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತದ ಪ್ರಶ್ನೆಯೇ ಇಲ್ಲ: ಸಂಜಯ್ ರಾವತ್ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತದ ಪ್ರಶ್ನೆಯೇ ಇಲ್ಲ: ಸಂಜಯ್ ರಾವತ್

'ಸರಕಾರ ನಡೆಸುವುದು ಮತ್ತು ಸರಕಾರಕ್ಕೆ ಬೆಂಬಲ ನೀಡುವುದು ಈ ಪದಕ್ಕೆ ಬೇರೆ ಬೇರೆ ಅರ್ಥವಿದೆ" ಎಂದು ರಾಹುಲ್ ಹೇಳಿದ್ದಾರೆ. "ರಾಹುಲ್ ಅವರ ಹೇಳಿಕೆ ಸರಿಯಾಗಿಯೇ ಇದೆ" ಎಂದು ಎನ್ಸಿಪಿ ನಾಯಕಿ ಸುಪ್ರಿಯಾ ಸುಳೆ ಹೇಳಿದ್ದಾರೆ.

English summary
Congress Leader Rahul Gandhi Keeping Distance From Maharasthra CM Uddhav Thackeray, Given Clarification.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X