• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಹಾರಾಷ್ಟ್ರದ ಅಮರಾವತಿಯಲ್ಲಿ ವಾರಾವಧಿ ಲಾಕ್‌ಡೌನ್ ಜಾರಿ

|

ಮುಂಬೈ, ಫೆಬ್ರವರಿ 23: ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಅಧಿಕ ದಾಖಲಾಗುತ್ತಿರುವ ಪ್ರಮುಖ ನಗರಗಳಲ್ಲಿ ಮತ್ತೆ ಲಾಕ್‌ಡೌನ್ ಮಾಡುವತ್ತ ಮಹಾರಾಷ್ಟ್ರ ಸರ್ಕಾರ ಚಿಂತನೆ ನಡೆಸಿದೆ.

ಸದ್ಯಕ್ಕೆ ಅಮರಾವತಿಯಲ್ಲಿ ಹೆಚ್ಚು ಪ್ರಕರಣಗಳು ಕಂಡುಬಂದಿದ್ದು, ಇಲ್ಲಿ ಸೋಮವಾರ ರಾತ್ರಿ ಎಂಟು ಗಂಟೆಯಿಂದ ವಾರಾವಧಿ ಲಾಕ್‌ಡೌನ್ ವಿಧಿಸಲಾಗಿದೆ. ಜನರ ಓಡಾಟವನ್ನು ನಿರ್ಬಂಧಿಸಲಾಗಿದ್ದು, ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಅನುವು ಮಾಡಿಕೊಡಲಾಗಿದೆ. ಸದ್ಯಕ್ಕೆ ಅಮರಾವತಿಯಲ್ಲಿ ಲಾಕ್‌ಡೌನ್ ವಿಧಿಸಲಾಗಿದ್ದು, ವಿದರ್ಭದಲ್ಲಿಯೂ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ.

ಮಹಾರಾಷ್ಟ್ರದಲ್ಲಿ ಹೀಗೆ ಏಕಾಏಕಿ ಕೊರೊನಾ ಸೋಂಕು ಹೆಚ್ಚಾಗಲು ಕಾರಣವೇನು?

ಈ ಸಂಬಂಧ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮಂಗಳವಾರ ಬೃಹತ್ ಮುಂಬೈ ಮಹಾನಗರ ಪಾಲಿಕೆಯೊಂದಿಗೆ ಸಭೆ ನಡೆಸಲಿದ್ದು, ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಲಿದ್ದಾರೆ. ಮುಂದಿನ ಎಂಟು ದಿನಗಳಲ್ಲಿ ರಾಜ್ಯದಲ್ಲಿ ಪರಿಸ್ಥಿತಿ ಪರಿಶೀಲಿಸಿ ನಂತರ ಲಾಕ್‌ಡೌನ್ ಕುರಿತು ನಿರ್ಧರಿಸಲಾಗುತ್ತದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಯಾವುದೇ ಗುಣಲಕ್ಷಣಗಳಿಲ್ಲದೇ ಸೋಂಕು ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಸೋಂಕಿನ ನಿಯಂತ್ರಣಕ್ಕೆ ಸರ್ಕಾರ ಸರ್ವಸನ್ನದ್ಧವಾಗಿದೆ. ಕೊರೊನಾ ಮಾರ್ಗಸೂಚಿಗಳನ್ನು ಇಲ್ಲಿನ ಜನರು ನಿರ್ಲಕ್ಷಿಸಿರುವುದು ಕೊರೊನಾ ಈ ಮಟ್ಟದಲ್ಲಿ ಹರಡಲು ಪ್ರಮುಖ ಕಾರಣ ಎಂದು ರಾಜ್ಯ ಆರೋಗ್ಯ ಇಲಾಖೆ ಸೋಮವಾರ ತಿಳಿಸಿತ್ತು.

ಮಹಾರಾಷ್ಟ್ರದಲ್ಲಿ ಸದ್ಯಕ್ಕೆ 54,306 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೂ 19,99,982ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 51,806 ಮಂದಿ ಸಾವನ್ನಪ್ಪಿದ್ದಾರೆ.

English summary
Amravati which recorded more coronavirus cases in Maharashtra is placed under a week-long curfew from 8 pm on Monday,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X