• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊರೊನಾ ಭೀತಿ: ಈ ರಾಜ್ಯದಲ್ಲಿ ಇಂದಿನಿಂದ ಸಂಪೂರ್ಣ ಲಾಕ್‌ಡೌನ್‌

|

ಮುಂಬೈ, ಏಪ್ರಿಲ್ 22: ಮಹಾರಾಷ್ಟ್ರ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಇಂದಿನಿಂದ (ಏ.22) ಸಂಪೂರ್ಣ ಲಾಕ್​ಡೌನ್ ಘೋಷಣೆ ಮಾಡಲಾಗಿದೆ.

ಮೇ.1ವರೆಗೂ ಈ ಲಾಕ್‌ಡೌನ್‌ ನಿಯಮ ಜಾರಿಯಲ್ಲಿರಲಿದ್ದು, ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಶೇ.15ರಷ್ಟು ಹಾಜರಾತಿಗೆ ಅವಕಾಶ ನೀಡಲಾಗಿದೆ. ಮದುವೆ, ಮುಂಜಿಯಂತಹ ಕಾರ್ಯಕ್ರಮಗಳಿಗೆ 25 ಜನರು ಮಾತ್ರ ಭಾಗಿಯಾಗಲು ಅವಕಾಶ ನೀಡಿಲಾಗಿದೆ.

ಕೊರೊನಾ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಉದ್ಧವ್ ಠಾಕ್ರೆ ಸರ್ಕಾರ ಮುಂದಾಗಿದ್ದು, 50 ಸಾವಿರದವರೆಗೂ ದಂಡ ವಿಧಿಸಿದೆ. ತುರ್ತು ಪರಿಸ್ಥಿತಿ ಹೊರತುಪಡಿಸಿ ಇತರ ಸಮಯದಲ್ಲಿ ಖಾಸಗಿ ವಾಹಗಳನ್ನು ಬಳಕೆ ಮಾಡಿದರೆ 10 ಸಾವಿರ ದಂಡ ವಿಧಿಸಿದೆ.

ಮಹಾರಾಷ್ಟ್ರದಲ್ಲಿ ಬುಧವಾರ ಒಂದೇ ದಿನ 67,468 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, 500ಕ್ಕೂ ಹೆಚ್ಚು ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

English summary
The Complete lockdown has been announced from today (April 22) in the state of Maharashtra due to number of coronavirus increasing day by day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X