• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಅತಿ ಹೆಚ್ಚು ಲಸಿಕೆ ನೀಡಲಾಗಿರುವ ರಾಜ್ಯಗಳ ಪಟ್ಟಿ ಇಲ್ಲಿದೆ

|
Google Oneindia Kannada News

ಮುಂಬೈ, ಮೇ 25: ಮಹಾರಾಷ್ಟ್ರ, ಉತ್ತರಪ್ರದೇಶ, ರಾಜಸ್ಥಾನ ಮತ್ತು ಗುಜರಾತ್ ರಾಜ್ಯದಲ್ಲಿ ಅತಿ ಹೆಚ್ಚು ಕೋವಿಡ್ -19 ಲಸಿಕೆಗಳನ್ನು ನೀಡಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ. ಈ ಬಗ್ಗೆ ಪಟ್ಟಿಯೊಂದನ್ನು ಸರ್ಕಾರ ಬಿಡುಗಡೆ ಮಾಡಿದೆ.

ಕೇಂದ್ರ ಸರ್ಕಾರದ ಪ್ರಕಾರ ಈವರೆಗೆ 19,55,06,779 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಈ ಪೈಕಿ 4,19,95,400 ಮಂದಿ ಎರಡು ಡೋಸ್‌ ಕೊರೊನಾ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಇದರನ್ವಯ ದೇಶದಲ್ಲಿ ಶೇ. 3.1 ಮಂದಿಗೆ ಕೊರೊನಾ ಲಸಿಕೆ ಲಭಿಸಿದೆ. 15,35,11,379 ಮಂದಿ ಮೊದಲ ಡೋಸ್‌, 4,19,95,400 ಎರಡನೇ ಡೋಸ್‌ ಪಡೆದುಕೊಂಡಿದ್ದಾರೆ.

ಟ್ರಂಪ್‌ಗೆ ಕೊರೊನಾ ಸೋಂಕಿಗೆ ಕೊಟ್ಟಿದ್ದ ಕಾಕ್ ಟೇಲ್ ಈಗ ಭಾರತದಲ್ಲೂ ಲಭ್ಯಟ್ರಂಪ್‌ಗೆ ಕೊರೊನಾ ಸೋಂಕಿಗೆ ಕೊಟ್ಟಿದ್ದ ಕಾಕ್ ಟೇಲ್ ಈಗ ಭಾರತದಲ್ಲೂ ಲಭ್ಯ

ಪಟ್ಟಿಯ ಪ್ರಕಾರ ಮಹಾರಾಷ್ಟ್ರದಲ್ಲಿ 21013742 ಡೋಸ್‌ ಕೊರೊನಾ ಲಸಿಕೆ ನೀಡಲಾಗಿದ್ದು ದೇಶದಲ್ಲೇ ಅತೀ ಹೆಚ್ಚು ಕೊರೊನಾ ಲಸಿಕೆ ಹಾಕಿಸಿದ ರಾಜ್ಯ ಮಹಾರಾಷ್ಟ್ರವಾಗಿದೆ. ದೇಶದಲ್ಲೇ ಅಧಿಕ ಕೊರೊನಾ ಪ್ರರಕಣಗಳು ಮಹಾರಾಷ್ಟ್ರದಲ್ಲೇ ದಾಖಲಾಗಿದೆ. ರಾಜ್ಯದಲ್ಲಿ ಈವರೆಗೆ 56,02,019 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು ಈ ಪೈಕಿ 89,212 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

ಮಹಾರಾಷ್ಟ್ರದ ನಂತರದ ಸ್ಥಾನದಲ್ಲಿರುವ ಉತ್ತರಪ್ರದೇಶದಲ್ಲಿ 16543234 ಡೋಸ್‌ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಈ ರಾಜ್ಯದಲ್ಲಿ ಈವರೆಗೆ 16,73,785 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು 19,362 ಮಂದಿ ಸಾವನ್ನಪ್ಪಿದ್ದಾರೆ.

ಇನ್ನು ವ್ಯಾಕ್ಸಿನೇಷನ್‌ ವಿಚಾರದಲ್ಲಿ ಉತ್ತರಪ್ರದೇಶದ ನಂತರದ ಅಂದರೆ ಮೂರನೇ ಸ್ಥಾನದಲ್ಲಿರುವ ರಾಜಸ್ಥಾನದಲ್ಲಿ 16183750 ಡೋಸ್‌ ಕೊರೊನಾ ಲಸಿಕೆ ಹಾಕಲಾಗಿದೆ. ಈ ರಾಜ್ಯದಲ್ಲಿ 9,20,456 ಮಂದಿಗೆ ಕೊರೊನಾ ಪಾಸಿಟಿವ್‌ ಆಗಿದ್ದು ಈ ಪೈಕಿ ಈವರೆಗೆ 7,806 ಮಂದಿ ಮೃತಪಟ್ಟಿದ್ದಾರೆ.

"ಭಾರತವು ಕಡಿಮೆ ಬೆಲೆಯಲ್ಲಿ ಕೊರೊನಾ ಲಸಿಕೆ ಪಡೆಯಲು ಏನು ಮಾಡಬೇಕು"

ಈ ನಡುವೆ ಕೊರೊನಾ ಪ್ರಕರಣಗಳಲ್ಲಿ ದೇಶದಲ್ಲೇ ಎರಡನೇ ಸ್ಥಾನದಲ್ಲಿರುವ ಕರ್ನಾಟಕ ರಾಜ್ಯವು ಈವರೆಗೆ 12243473 ಡೋಸ್‌ ಲಸಿಕೆ ನೀಡಲಾಗಿದೆ. ಹಾಗೆಯೇ ಕೊರೊನಾ ಪ್ರಕರಣದ ವಿಚಾರದಲ್ಲಿ ಮೂರನೇ ಸ್ಥಾನದಲ್ಲಿರುವ ಕೇರಳದಲ್ಲಿ 8701163 ಡೋಸ್‌ ಲಸಿಕೆ ನೀಡಲಾಗಿದೆ.

(ಒನ್ಇಂಡಿಯಾ ಸುದ್ದಿ)

English summary
Covid vaccination list: Maharashtra in First place, UP, Rajasthan and Gujarat administer highest number of Covid-19 vaccines in the country.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X