ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಮುಂಬೈನಲ್ಲಿ ಕೊರೊನಾ ವೈರಸ್ ಹೊಸ ದಾಖಲೆ

|
Google Oneindia Kannada News

ಮುಂಬೈ, ಮೇ 18: ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿತು ಎನ್ನುವಷ್ಟರಲ್ಲೇ ಮುಂಬೈನಲ್ಲಿ ದಾಖಲೆ ಏರಿಕೆ ಕಂಡು ಬಂದಿದೆ. ಫೆಬ್ರವರಿ 19ರ ನಂತರದಲ್ಲಿ ಅತಿಹೆಚ್ಚು ಸೋಂಕಿತ ಪ್ರಕರಣಗಳು ನಗರದಲ್ಲಿ ವರದಿಯಾಗಿವೆ.

ಮುಂಬೈನಲ್ಲಿ ಬುಧವಾರವೊಂದೇ ದಿನ 194 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ಆ ಮೂಲಕ ನಗರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,000 ಗಡಿ ದಾಟಿದೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ತಿಳಿಸಿದೆ.

ಮೇ 18 ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?ಮೇ 18 ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?

ಆದರೆ ದೇಶದ ವಾಣಿಜ್ಯ ನಗರಿ ಎನಿಸಿರುವ ಮುಂಬೈನಲ್ಲಿ ಕೊರೊನಾ ವೈರಸ್ ಸೋಂಕಿನಿಂದ ಕಳೆದ 24 ಗಂಟೆಗಳಲ್ಲಿ ಯಾವುದೇ ಸಾವಿನ ಪ್ರಕರಣಗಳು ವರದಿಯಾಗಿಲ್ಲ. ಮಂಗಳವಾರ, ನಗರದಲ್ಲಿ 158 ಸೋಂಕಿತ ಪ್ರಕರಣಗಳು ವರದಿಯಾಗಿದ್ದರೆ, ಸೋಮವಾರ 74 ಪ್ರಕರಣಗಳು ಪತ್ತೆಯಾಗಿದ್ದವು. ಆದರೆ ಸಾವಿನ ಪ್ರಕರಣಗಳು ಮಾತ್ರ ಶೂನ್ಯವಾಗಿತ್ತು. ಮೇ ತಿಂಗಳಿನಲ್ಲಿ ಇದುವರೆಗೂ ಒಟ್ಟು 14 ದಿನಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಮೂರಂಕಿ ದಾಟಿದೆ.

 Coronavirus News: Mumbai records highest single-day surge after February 19 with 194 cases

ಮುಂಬೈನಲ್ಲಿ ಕೋವಿಡ್-19 ಅಂಕಿ-ಸಂಖ್ಯೆ: ಮುಂಬೈ ನಗರದ ಕೋವಿಡ್ -19 ಪ್ರಕರಣಗಳ ಸಂಖ್ಯೆ ಬುಧವಾರ 10,62,040ಕ್ಕೆ ಏರಿಕೆಯಾಗಿದೆ, ಆದರೆ ಸಾವಿನ ಸಂಖ್ಯೆ 19,566ರಲ್ಲಿ ಸ್ಥಿರವಾಗಿದೆ. ಇನ್ನು ಕೋವಿಡ್ -19 ಸಕ್ರಿಯ ರೋಗಿಗಳ ಸಂಖ್ಯೆ ಮಂಗಳವಾರ 932 ರಿಂದ 1,002ಕ್ಕೆ ಏರಿದೆ. ಹಿಂದಿನ ಸಂಜೆಯಿಂದ 8,736 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ನಗರದಲ್ಲಿ ನಡೆಸಿದ ಒಟ್ಟು ಕೊರೊನಾ ಪರೀಕ್ಷೆಗಳ ಸಂಖ್ಯೆ 1,70,33,677ಕ್ಕೆ ಹೆಚ್ಚಿದೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,829 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ದೇಶದಲ್ಲಿ ಒಂದು ದಿನದಲ್ಲಿ ಕೊರೊನಾ ವೈರಸ್ ಮಹಾಮಾರಿಯಿಂದ 33 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 2,549 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಇದುವರೆಗೂ 43,127,199 ಕೊರೊನಾ ವೈರಸ್ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಶೇಕಡಾವಾರು ಪ್ರಮಾಣ ಶೇ.98.74ರಷ್ಟಿದೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 524,293 ಮಂದಿ ಪ್ರಾಣ ಬಿಟ್ಟಿದ್ದು, ಮೃತರ ಪ್ರಮಾಣ ಶೇ.1.22ರಷ್ಟಿದೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 15,647 ಆಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.0.04ರಷ್ಟಿದೆ.

Recommended Video

ನಾನೋ ಕಾರ್ ಡ್ರೈವ್ ಮಾಡ್ಕೊಂಡು ಬಂದ ರತನ್ ಟಾಟಾ | Oneindia Kannada

English summary
Coronavirus News: Mumbai records highest single-day surge after February 19 with 194 cases.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X