• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಭಾರತದಲ್ಲಿ ಇಬ್ಬರು ಕೊರೊನಾ ವೈರಸ್ ಸೋಂಕಿತರು ಗುಣಮುಖ

|

ಮುಂಬೈ, ಮಾರ್ಚ್.25: ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಒಂದು ಕಡೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ. ಇದರ ನಡುವೆ ವೈದ್ಯರ ಪರಿಶ್ರಮಯಿಂದ ಇಬ್ಬರು ಕೊರೊನಾ ಸೋಂಕಿತರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.

ಮಹಾರಾಷ್ಟ್ರದಲ್ಲಿ ಎರಡು ವಾರಗಳ ಹಿಂದೆ ಕೊರೊನಾ ವೈರಸ್ ಪಾಸಿಟಿವ್ ಫಲಿತಾಂಶ ಬಂದಿದ್ದ ಇಬ್ಬರು ಸೋಂಕಿತರನ್ನು ಚಿಕಿತ್ಸೆಗೆ ಒಳಪಡಿಸಲಾಯಿತು. ಬುಧವಾರ ಅದೇ ಸೋಂಕಿತರನ್ನು ಮರು ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ವೈರಸ್ ನೆಗಟಿವ್ ಎಂದು ತಿಳಿದು ಬಂದಿದೆ.

ವುಹಾನ್ ನಲ್ಲಿ ಹೊಸ ಸೋಂಕಿತ ಪ್ರಕರಣಗಳು 'ಸೊನ್ನೆ': ಹಿಂದಿದೆ ಕರಾಳ ಸತ್ಯ!

ರಾಜ್ಯದಲ್ಲಿ ಮೊದಲಿನ ಇಬ್ಬರು ಕೊರೊನಾ ವೈರಸ್ ಸೋಂಕಿತರಿಗೆ ನೀಡಿದ ವೈದ್ಯಕೀಯ ಚಿಕಿತ್ಸೆ ಯಶಸ್ವಿಯಾಗಿದ್ದು, ಹೊಸ ಭರವಸೆಯನ್ನು ಮೂಡಿಸಿದೆ. ಕೊರೊನಾ ಸೋಂಕಿತರು ಗುಣಮುಖರಾದ ಹಿನ್ನೆಲೆಯಲ್ಲಿ ಇಬ್ಬರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ಮಹಾರಾಷ್ಟ್ರದಲ್ಲಿ ಅತಿಹೆಚ್ಚು ಕೊರೊನಾ ಸೋಂಕಿತರು:

ಮಹಾರಾಷ್ಟ್ರದಲ್ಲಿ ಮಂಗಳವಾರ ಹೊಸದಾಗಿ 6 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ರಾಜ್ಯದಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆಯು 107ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 26 ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆಯು 562ಕ್ಕೆ ಏರಿಕೆಯಾಗಿದೆ. ಇನ್ನು, ಭಾರತದಲ್ಲಿ ಈವರೆಗೂ 11 ಮಂದಿ ಕೊರೊನಾ ವೈರಸ್ ಮಹಾಮಾರಿಗೆ ಪ್ರಾಣ ಬಿಟ್ಟಿದ್ದಾರೆ.

English summary
Coronavirus: Two Infected People Cure After Two Weeks Treatment In Maharashtra.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X