ಕೋವಿಡ್19ಗೆ ಹೆದರಿ ಬಾವಿಗೆ ಹಾರಿ ಮೃತಪಟ್ಟ ಮಹಿಳೆ

ಮುಂಬೈ, ಮಾರ್ಚ್ 26: ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೊರೊನಾವೈರಸ್ ಭೀತಿ ಸಾರ್ವಜನಿಕರಲ್ಲಿ ಹೆಚ್ಚಾಗುತ್ತಿದೆ. ಬುಧವಾರದಂದು ಕೊರೊನಾವೈರಸ್ ಸೋಂಕಿತರ ಸಂಖ್ಯೆ 116ಕ್ಕೇರಿದೆ ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ.

ಮುಂಬೈನಲ್ಲಿ 65 ವರ್ಷ ವಯಸ್ಸಿನ ವೃದ್ಧೆಯೊಬ್ಬರು ಮೃತರಾಗಿದ್ದಾರೆ. ಭಾರತದಲ್ಲಿ 11 ಸಾವು ಸಂಭವಿಸಿದೆ. ಈ ನಡುವೆ ಕೊರೊನಾ ಸೋಂಕಿತರ ಸಂಖ್ಯೆ ಮಹಾರಾಷ್ಟ್ರದಲ್ಲಿ ಹೆಚ್ಚಾಗುತ್ತಿದೆ. ಮಹಾರಾಷ್ಟ್ರದ ಅಹ್ಮದ್ ನಗರದ ನಿವಾಸಿಯೊಬ್ಬರು ಕೊರೊನಾಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಅಹ್ಮದ್ ನಗರದ 50 ವರ್ಷ ವಯಸ್ಸಿನ ಮಹಿಳೆಯೊಬ್ಬರು ಬಾವಿಗೆ ಹಾರಿ ಪ್ರಾಣ ಬಿಟ್ಟಿದ್ದಾರೆ. ಮಹಿಳೆ ಬರೆದಿದ್ದಾರೆ ಎನ್ನಲಾದ ಡೆತ್ ನೋಟ್ ಸಿಕ್ಕಿದೆ. ಡೆತ್ ನೋಟ್ ನಲ್ಲಿ ಕೊರೊನಾ ವೈರಸ್ ಭೀತಿಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆಯಲಾಗಿದೆ. ಮೃತ ಮಹಿಳೆಯ ಪುತ್ರ ಡೆತ್ ನೋಟ್ ಹಾಗೂ ವಿವರಗಳನ್ನು ಪೊಲೀಸರಿಗೆ ನೀಡಿದ್ದಾರೆ. ಈ ಪತ್ರ ಆಕೆ ಬರೆದಿದ್ದಾರೆ ಎಂಬುದರ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

COVID-19 fear, Maharashtra woman commits suicide; leaves suicide note

ಲಾಕ್ ಡೌನ್ ಸಂದರ್ಭದಲ್ಲಿ ಮನೆಯಲ್ಲಿ ಇರಿ ಎಂದು ಸಿಎಂ ಉದ್ಧವ್ ಠಾಕ್ರೆ ಮನವಿ ಮಾಡಿದ್ದಾರೆ. ಕೊವಿಡ್19 ಮೊದಲ ಕೇಸ್ ಆಗಿದ್ದ ಪುಣೆ ದಂಪತಿ ಬುಧವಾರದಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+