ಮಾ.28ರಿಂದ ರಾತ್ರಿ ಕರ್ಫ್ಯೂ ಜಾರಿಗೊಳಿಸಲು 'ಮಹಾ' ಸಿಎಂ ಆದೇಶ
ಮುಂಬೈ, ಮಾರ್ಚ್ 26: ಪಕ್ಕದ ಮಹಾರಾಷ್ಟ್ರದಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ (ಮಾ.28)ದಿಂದ ರಾತ್ರಿ ಕರ್ಫ್ಯೂ ಜಾರಿಗೊಳಿಸುವುದಕ್ಕೆ ಸಿಎಂ ಉದ್ಧವ್ ಠಾಕ್ರೆ ನಿರ್ಧಾರ ಮಾಡಿದ್ದಾರೆ.
ಮಾರ್ಚ್ 28ರ ಭಾನುವಾರ ರಾತ್ರಿಯಿಂದ ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗುವುದು. ಈ ನಿಟ್ಟಿನಲ್ಲಿ ವಿಪತ್ತು ನಿರ್ವಹಣೆ ಮತ್ತು ಪುನರ್ವಸತಿ ಇಲಾಖೆಯಿಂದ ಶೀಘ್ರದಲ್ಲೇ ಪ್ರತ್ಯೇಕ ಆದೇಶ ಹೊರಡಿಸಲಾಗುವುದು ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಅದೇ ರೀತಿ ಎಲ್ಲಾ ಮಾಲ್ ಗಳು ರಾತ್ರಿ 8 ರಿಂದ ಬೆಳಿಗ್ಗೆ 7 ರವರೆಗೆ ಬಂದ್ ಮಾಡಲು ಮುಖ್ಯಮಂತ್ರಿ ಕಚೇರಿ ಆದೇಶ ಹೊರಡಿಸಿದೆ. ಇನ್ನು ಕೊರೊನಾ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆ ಜನರು ಸರಳವಾಗಿ ಹೋಳಿ ಹಾಗೂ ಯುಗಾದಿ ಹಬ್ಬವನ್ನು ಆಚರಿಸಬೇಕು ಮತ್ತು ಜನಸಂದಣಿಯನ್ನು ತಪ್ಪಿಸಬೇಕು ಎಂದು ಮಹಾರಾಷ್ಟ್ರ ರಾಜ್ಯ ಸರ್ಕಾರ ಶುಕ್ರವಾರ ತಿಳಿಸಿದೆ.












Click it and Unblock the Notifications