ದೆಹಲಿ ಮುಂಬೈ ನಡುವೆ ರೈಲು ಹಾಗೂ ವಿಮಾನ ಸೇವೆ ಸ್ಥಗಿತಕ್ಕೆ ನಿರ್ಧಾರ
ಮುಂಬೈ, ನವೆಂಬರ್ 21: ದೆಹಲಿ ಹಾಗೂ ಮುಂಬೈ ನಡುವೆ ರೈಲು ಹಾಗೂ ವಿಮಾನ ಸೇವೆಯನ್ನು ಸ್ಥಗಿತಗೊಳಿಸಲು ಮಹಾರಾಷ್ಟ್ರ ಸರ್ಕಾರ ಚಿಂತನೆ ನಡೆಸುತ್ತಿದೆ.
ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಕುರಿತು ಆಲೋಚಿಸಲಾಗಿದೆ.ಸರ್ಕಾರದ ಪ್ರಧಾನ ಕಾರ್ಯದರ್ಶಿ ಸಂಜಯ್ ಕುಮಾರ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಶುಕ್ರವಾರದ ವೇಳೆಗೆ 1768695 ಕೊವಿಡ್ ಪ್ರಕರಣಗಳು ದಾಖಲಾಗಿವೆ. ಒಂದು ದಿನದಲ್ಲಿ 5460 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಸಾವಿನ ಪ್ರಮಾಣ 46,511ಕ್ಕೆ ಏರಿಕೆಯಾಗಿದೆ.

ದೆಹಲಿಯಲ್ಲಿ ಶುಕ್ರವಾರ 6608 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 5.17 ಲಕ್ಷಕ್ಕೇರಿದೆ. ಇದೇ ಅವಧಿಯಲ್ಲಿ 118 ಸಾವಿನ ಪ್ರಕರಣಗಳು ವರದಿಯಾಗಿವೆ.
ದೆಹಲಿಯಲ್ಲಿ ಕೊರೊನಾ ಅಲೆ ಮುಂದುವರೆದಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆ ಉಂಟಾಗಿದೆ.
ಇದೀಗ ಆ ಕೊರತೆ ನೀಗಿಸಲು ಅಧಿಕಾರಿಗಳು 205 ಐಸಿಯು ಹಾಗೂ 116 ಆಕ್ಸಿಜನ್ ಹಾಸಿಗೆಗಳನ್ನು ಸೇರ್ಪಡೆ ಮಾಡಲಾಗಿದೆ.
ಬೆಂಗಳೂರಿನ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಿಂದ 120 ವೆಂಟಿಲೇಟರ್‌ಗಳ ಆಗಮನವಾಗಿದೆ. ಯಾವ ಆಸ್ಪತ್ರೆಯಲ್ಲಿ ನಿತ್ಯ 32 ಸಾವಿರಕ್ಕೂ ಹೆಚ್ಚು ಆರ್‌ಟಿ-ಪಿಸಿಆರ್ ಪರೀಕ್ಷೆಗಳನ್ನು ಮಾಡುವ ಆಸ್ಪತ್ರೆಗಳಿಗೆ ನೀಡಲಿದ್ದಾರೆ.
ನವೆಂಬರ್ 1ರವರೆಗೆ ಆಸ್ಪತ್ರೆಗಳಲ್ಲಿ ಹೆಚ್ಚುವರಿಯಾಗಿ 205 ಐಸಿಯು ಹಾಸಿಗೆಗಳ ವ್ಯವಸ್ಥೆ ಮಾಡಲಾಗಿತ್ತು. ಹಾಗೆಯೇ ಖಾಸಗಿ ಆಸ್ಪತ್ರೆಗಳಲ್ಲೂ ಇದೇ ಮಾದರಿಯಲ್ಲಿ ಹೆಚ್ಚುವರಿ ಹಾಸಿಗಳ ವ್ಯವಸ್ಥೆ ಮಾಡಲಾಗಿದೆ.












Click it and Unblock the Notifications