ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರದಲ್ಲಿ ಕೊವಿಡ್-19 ಭೀತಿ ನಡುವೆ ಜ.24 ರಿಂದ ಶಾಲೆಗಳು ಓಪನ್

|
Google Oneindia Kannada News

ಮುಂಬೈ, ಜನವರಿ 20: ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಹಾವಳಿ ಹೆಚ್ಚುತ್ತಿರುವುದರ ಮಧ್ಯೆ ಮುಂದಿನ ವಾರದಿಂದ ಎಲ್ಲಾ ಶಾಲೆಗಳನ್ನು ಪುನರಾರಂಭ ಮಾಡಲಾಗುವುದು ಎಂದು ಶಿಕ್ಷಣ ಸಚಿವೆ ವರ್ಷಾ ಗಾಯಕ್ವಾಡ್ ಗುರುವಾರ ತಿಳಿಸಿದ್ದಾರೆ. ರಾಜ್ಯದಲ್ಲಿ ಸೋಮವಾರದಿಂದ ಶಾಲೆಗಳು ಪುನಾರಂಭವಾಗಲಿದ್ದು, ಕೊವಿಡ್-19 ಶಿಷ್ಟಾಚಾರ ಪಾಲನೆ ಮಾಡುವಂತೆ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

"ಜನವರಿ 24 ರಿಂದ ನಾವು ಕೊವಿಡ್-19 ಪ್ರೋಟೋಕಾಲ್ ಜೊತೆ 1 ರಿಂದ 12ನೇ ತರಗತಿಗಳ ಶಾಲೆಗಳನ್ನು ತೆರೆಯುತ್ತೇವೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕೂಡ ನಮ್ಮ ಪ್ರಸ್ತಾವನೆಗೆ ಒಪ್ಪಿಗೆ ನೀಡಿದ್ದಾರೆ ಎಂದು ಸಚಿವೆ ವರ್ಷಾ ಗಾಯಕ್ವಾಡ್ ಹೇಳಿದ್ದಾರೆ.

ಮುಂಬೈನಲ್ಲಿ ಕೊರೊನಾ ಪ್ರಕರಣಗಳು ಸತತ 4 ದಿನಗಳಿಂದ ಸ್ಥಿರಮುಂಬೈನಲ್ಲಿ ಕೊರೊನಾ ಪ್ರಕರಣಗಳು ಸತತ 4 ದಿನಗಳಿಂದ ಸ್ಥಿರ

ರಾಜ್ಯದಲ್ಲಿ ಶಾಲೆಗಳನ್ನು ಪುನರಾರಂಭಿಸಲು ಬೇಡಿಕೆ ಹೆಚ್ಚುತ್ತಿದೆ ಎಂದು ಕಳೆದ ವಾರವಷ್ಟೇ ಆರೋಗ್ಯ ಸಚಿವ ರಾಜೇಶ್ ತೋಪೆ ಹೇಳಿದ್ದರು. 'ಮಕ್ಕಳು ಶಿಕ್ಷಣವನ್ನು ಕಳೆದುಕೊಳ್ಳುವ ಅಪಾಯ ಹೆಚ್ಚಾಗುತ್ತಿರುವುದರ ಹಿನ್ನೆಲೆ ಶಾಲೆಗಳ ಪುನರಾರಂಭಕ್ಕೆ ಹಲವು ಕಡೆಗಳಿಂದ ಬೇಡಿಕೆ ಹೆಚ್ಚುತ್ತಿವೆ,' ಎಂದು ತೋಪೆ ಹೇಳಿದ್ದರು.

Covid-19: Maharashtra Govt will reopen Schools for all classes from Jan 24

ಓಮಿಕ್ರಾನ್ ಆತಂಕದಲ್ಲಿ ಶಾಲೆಗಳು ಬಂದ್:

ಕೊರೊನಾವೈರಸ್ ಹೊಸ ರೂಪಾಂತರಿ ಒಮಿಕ್ರಾನ್ ಸೋಂಕು ಹರಡುವಿಕೆ ಪ್ರಮಾಣ ಡಿಸೆಂಬರ್ ಅಂತ್ಯದ ವೇಳೆಗೆ ಅತಿವೇಗ ಪಡೆದುಕೊಂಡಿತ್ತು. ಜನವರಿ ತಿಂಗಳ ಆರಂಭದಲ್ಲೂ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬಂದಿತ್ತು. ಈ ಹಿನ್ನೆಲೆ ರಾಜ್ಯ ಸರ್ಕಾರವು ಮುನ್ನೆಚ್ಚರಿಕೆ ಕ್ರಮವಾಗಿ ಫೆಬ್ರವರಿ 15ರವರೆಗೂ ಶಾಲಾ-ಕಾಲೇಜುಗಳನ್ನು ಬಂದ್ ಮಾಡುವಂತೆ ಆದೇಶ ಹೊರಡಿಸಿತ್ತು.

ಕೊವಿಡ್ ಕಡಿಮೆಯಿರುವ ಪ್ರದೇಶಗಳಲ್ಲಿ ಶಾಲೆ ಓಪನ್:

"ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಹೆಚ್ಚಾಗಿರುವ ಪ್ರದೇಶಗಳಲ್ಲಿ ಶಾಲೆಗಳನ್ನು ತೆರೆಯದಿರುವುದಕ್ಕೆ ಸರ್ಕಾರ ನಿರ್ಧರಿಸಿದೆ. ಈ ಕುರಿತು ತಜ್ಞರೊಂದಿಗೆ ಚರ್ಚಿಸಿ ನಂತರ ಸ್ಥಳೀಯ ಪರಿಸ್ಥಿತಿಯನ್ನು ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಕೊವಿಡ್-19 ಅಪಾಯ ಕಡಿಮೆಯಿರುವ ಪ್ರದೇಶಗಳಲ್ಲಿ ಮಾತ್ರ ಶಾಲೆಗಳನ್ನು ತೆರೆಯುವುದಕ್ಕೆ ಅನುಮತಿ ನೀಡಲಾಗುವುದು," ಎಂದು ಸಚಿವೆ ವರ್ಷಾ ಗಾಯಕ್ವಾಡ್ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಕೊವಿಡ್-19 ಪ್ರಕರಣ:

ಮಹಾರಾಷ್ಟ್ರದಲ್ಲಿ ಬುಧವಾರವೊಂದೇ ದಿನ 43,697 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ಪೈಕಿ 214 ಒಮಿಕ್ರಾನ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಂಗಳವಾರಕ್ಕೆ ಹೋಲಿಸಿದರೆ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಶೇ.10ರಷ್ಟು ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ ಕೊವಿಡ್-19 ಸೋಂಕಿನಿಂದ ರಾಜ್ಯದಲ್ಲಿ 49 ಮಂದಿ ಪ್ರಾಣ ಬಿಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ ಈವರೆಗೂ 73,25,825 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿ ಸೋಂಕಿಗೆ ಪ್ರಾಣ ಕಳೆದುಕೊಂಡವರ ಸಂಖ್ಯೆ 1,41,934ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

English summary
Covid-19: Maharashtra Govt will reopen Schools for all classes from Jan 24.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X