ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರ: 1ರಿಂದ 8ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆ ಪಾಸ್

|
Google Oneindia Kannada News

ಮುಂಬೈ, ಏಪ್ರಿಲ್ 3: ಮಹಾರಾಷ್ಟ್ರ ಮತ್ತೆ ಕೋವಿಡ್ 19 ಹಾಟ್‌ಸ್ಪಾಟ್ ಆಗುತ್ತಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಲು ಸರ್ಕಾರ ನಿರ್ಧರಿಸಿದೆ.

ಮಹಾರಾಷ್ಟ್ರ ರಾಜ್ಯದಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಒಂದೆರಡು ದಿನಗಳಲ್ಲಿ ಕಠಿಣ ನಿರ್ಬಂಧಗಳನ್ನು ಘೋಷಿಸುವುದಾಗಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶುಕ್ರವಾರ ಹೇಳಿದ್ದರು. ಅಲ್ಲದೇ ಪರಿಸ್ಥಿತಿಯಲ್ಲಿ ಯಾವುದೇ ಸುಧಾರಣೆಯಾಗದಿದ್ದಲ್ಲಿ ಲಾಕ್ ಡೌನ್ ಹೇರುವ ಎಚ್ಚರಿಕೆಯನ್ನು ನೀಡಿದ್ದರು.

ದೇಶದಲ್ಲಿ ಕಳೆದ ವರ್ಷದಂತೆ ಈ ಬಾರಿಯೂ ಆತಂಕಕಾರಿ ಕೊರೊನಾ ಸೋಂಕಿನ ಪ್ರಮಾಣದೇಶದಲ್ಲಿ ಕಳೆದ ವರ್ಷದಂತೆ ಈ ಬಾರಿಯೂ ಆತಂಕಕಾರಿ ಕೊರೊನಾ ಸೋಂಕಿನ ಪ್ರಮಾಣ

ಮಹಾರಾಷ್ಟ್ರದಲ್ಲಿ ಒಂದರಿಂದ 8ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುತ್ತಿದೆ. ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸೆಕಂಡರಿ ಮತ್ತು ಪ್ರೌಢ ಶಿಕ್ಷಣ ಮಂಡಳಿ ನಿರ್ಧರಿಸಿದೆ ಈ ನಿರ್ಧಾರ ಕೈಗೊಂಡಿದೆ.

Covid-19: Maharashtra Promotes Students From Class 1 To 8 Without Exam

ಅಂತಿಮ ವರ್ಷದ ಪರೀಕ್ಷೆ ಇಲ್ಲದೆ ಮುಂದಿನ ತರಗತಿಗೆ ವಿದ್ಯಾರ್ಥಿಗಳನ್ನು ಕಳುಹಿಸಲಾಗುತ್ತಿದೆ. ಮಹಾರಾಷ್ಟ್ರದಲ್ಲಿ 47, 827 ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ರಾಜ್ಯಾದ್ಯಂತ ಒಟ್ಟಾರೆ ಸೋಂಕಿತರ ಸಂಖ್ಯೆ 2, 904,076ಕ್ಕೆ ತಲುಪಿದೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 89,129 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದೆ. 44,202 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇನ್ನು ಸಾವಿನ ಪ್ರಮಾಣದಲ್ಲಿಯೂ ಭಾರಿ ಏರಿಕೆಯಾಗಿದ್ದು, 714 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ದೇಶದಲ್ಲಿ ಇದುವರೆಗೂ ಒಟ್ಟು 1,23,92,260 ಪ್ರಕರಣಗಳು ವರದಿಯಾಗಿವೆ. ಒಟ್ಟು 1,15,69,241 ಮಂದಿ ಚೇತರಿಸಿಕೊಂಡಿದ್ದಾರೆ. ಪ್ರಸ್ತುತ 6,58,909 ಸಕ್ರಿಯ ಪ್ರಕರಣಗಳಿವೆ. ಒಟ್ಟು 1,64,110 ಮಂದಿ ಸಾವಿಗೀಡಾಗಿದ್ದಾರೆ.

English summary
As the Covid-19 pandemic crisis keeps worsening in Maharashtra, the Maha Vikas Aghadi government has decided to promote all students from class 1 to 8 to the next class.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X