• search
 • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಹಾರಾಷ್ಟ್ರದಲ್ಲಿ ಒಂದೇ ದಿನದಲ್ಲಿ 11,447 ಕೊರೊನಾ ಸೋಂಕಿತರು ಪತ್ತೆ

|

ಮುಂಬೈ, ಅಕ್ಟೋಬರ್ 17:ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಆರಂಭವಾಗಿದೆ. ಕಳೆದ 24 ಗಂಟೆಗಳಲ್ಲಿ 11,447 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಇಂದು 306 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಈ ವರೆಗೂ ಸೋಂಕಿಗೆ ಬಲಿಯಾದವರ ಸಂಖ್ಯೆ 41,502ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಲ್ಲಿ ಶುಕ್ರವಾರ ಒಟ್ಟು 11,447 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 15,76,062ಕ್ಕೆ ಏರಿಕೆಯಾಗಿದೆ.

Corona
Photo Credit:

ಹಾಗೆಯೇ 13,885 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಒಟ್ಟಾರೆ ಗುಣಮುಖರ ಸಂಖ್ಯೆ 13,44,368ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಪ್ರಸ್ತುತ 1,89,715 ಸಕ್ರಿಯ ಪ್ರಕರಣಗಳಿವೆ.

ಕೊವಿಡ್ 19: ಭಾರತದಲ್ಲಿ ಮುಂದಿನ ಎರಡೂವರೆ ತಿಂಗಳು ನಿರ್ಣಾಯಕ

ಇನ್ನು ಮುಂಬೈನಲ್ಲಿ ಶುಕ್ರವಾರ 1,823 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ. ಆ ಮೂಲಕ ಮುಂಬೈನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,38,548ಕ್ಕೆ ಏರಿಕೆಯಾಗಿದೆ. ಶುಕ್ರವಾರ ಮುಂಬೈನಲ್ಲಿ 1,644 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಮುಂಬೈನಲ್ಲಿ ಗುಣಮುಖರಾದವರ ಸಂಖ್ಯೆ 2,05,111ಕ್ಕೆ ಏರಿಕೆಯಾಗಿದೆ.

   Royals ಗಳ ಕದನದಲ್ಲಿ RCB ಗೆಲ್ಲಲು ಮುಖ್ಯ ಕಾರಣ ಇಲ್ಲಿದೆ | Oneindia Kannada

   ಮುಂಬೈನಲ್ಲಿ ಪ್ರಸ್ತುತ 19,608 ಸಕ್ರಿಯ ಪ್ರಕರಣಗಳಿವೆ ಎಂದು ಗ್ರೇಟರ್ ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ ಮಾಹಿತಿ ನೀಡಿದೆ. ಮುಂಬೈನಲ್ಲಿ 37 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೊನಾ ಸೋಂಕಿಗೆ ಮುಂಬೈನಲ್ಲಿ 9,635 ಬಲಿಯಾತಂತಾಗಿದೆ.

   English summary
   Maharashtra's COVID-19 tally on Friday increased to 15,76,062 with 11,447 new cases coming to light.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X