ತೌಕ್ತೆ ಚಂಡಮಾರುತ: ಮುಂಬೈ ಏರ್‌ಪೋರ್ಟ್ ಕಾರ್ಯಾಚರಣೆ ಮೂರು ಗಂಟೆ ಸ್ಥಗಿತ

ಮುಂಬೈ, ಮೇ 17: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಸೋಮವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸ್ಥಗಿತಗೊಳಿಸಲಾಗಿದೆ. ತೌಕ್ತೆ ಚಂಡಮಾರುತ ಪ್ರಭಾವ ಹೆಚ್ಚಾಗುವ ಭೀತಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮುಂಬೈ ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್(ಎಂಐಎಎಲ್) ಮಾಹಿತಿ ನೀಡಿದೆ.

"ಚಂಡಮಾರುತದ ಮುನ್ನೆಚ್ಚರಿಕೆಯ ಕಾರಣದಿಂದಾಗಿ ಮುಂಬೈ ಏರ್‌ಪೋರ್ಟ್‌ನ ಕಾರ್ಯಾಚರಣೆಯನ್ನು ಮೇ 17ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸ್ಥಗಿತಗೊಳ್ಳುವ ಅಗತ್ಯವಿದೆ" ಎಂದು ಎಂಐಎಎಲ್ ಮಾಹಿತಿಯನ್ನು ನೀಡಿದೆ.

ಮಹಾರಾಷ್ಟ್ರದಲ್ಲಿಯೂ ತೌಕ್ತೆ ಚಂಡಮಾರುತದ ಆರ್ಭಟ ಸೋಮವಾರ ಹೆಚ್ಚಾಗಿದೆ. ಮುಂಬೈನ ಗೇಟ್‌ವೇ ಆಫ್ ಇಂಡಿಯಾ ಸನಿಹ ಭಾರೀ ಗಾಳಿಯೊಂದಿಗೆ ಮಳೆಯಾಗಿದೆ. ತೌಕ್ತೆ ಚಂಡಮಾರುತದ ಪರಿಣಾಮದಿಂದಾಗಿ ಬಾಂದ್ರಾ-ವರ್ಲಿ ಸಮುದ್ರ ಸಂಪರ್ಕವನ್ನು ಕೂಡ ಮುಚ್ಚಲಾಗಿದೆ.

Cyclone Tauktae: Mumbai Airport operations closed for three hours

ರಾಯ್‌ಘಡ್, ಪಾಲ್ಘರ್, ಮುಂಬೈ, ಥಾಣೆ ಮತ್ತು ರತ್ನಗಿರಿ ಜಿಲ್ಲೆಗಳಲ್ಲಿ ಚಂಡಮಾರುತದ ಕಾರಣದಿಂದಾಗಿ 90-100 ಕಿಮೀ ವೇಗದಲ್ಲಿ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+