Breaking: ಜೀವ ಬೆದರಿಕೆ; ಶಸ್ತ್ರಾಸ್ತ್ರ ಪರವಾನಗಿ ಪಡೆದ ಸಲ್ಮಾನ್

ಮುಂಬೈ, ಆ.01: ನಟ ಸಲ್ಮಾನ್ ಖಾನ್ ಅವರಿಗೆ ಇತ್ತೀಚೆಗೆ ಬಂದ ಬೆದರಿಕೆ ಪತ್ರಗಳ ಹಿನ್ನೆಲೆಯಲ್ಲಿ ಸ್ವಯಂ ರಕ್ಷಣೆಗಾಗಿ ಅರ್ಜಿ ಸಲ್ಲಿಸಿದ ನಂತರ ಶಸ್ತ್ರಾಸ್ತ್ರ ಪರವಾನಗಿಯನ್ನು ನೀಡಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಮೇ 29 ರಂದು ಪಂಜಾಬ್‌ನ ಮಾನ್ಸಾ ಬಳಿ ಗಾಯಕ ಸಿಧು ಮೂಸ್ ವಾಲಾ ಅವರನ್ನು ಗುಂಡಿಕ್ಕಿ ಕೊಂದ ಕೆಲವೇ ದಿನಗಳ ಅಂತರದಲ್ಲಿ ಜೂನ್ ಆರಂಭದಲ್ಲಿ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆಗೆ ಕೊಲೆ ಬೆದರಿಕೆ ಬಂದಿತ್ತು.

ಈ ಹಿನ್ನೆಲೆಯಲ್ಲಿ ಕಳೆದ ತಿಂಗಳು ಸಲ್ಮಾನ್ ಖಾನ್ ಮುಂಬೈ ಪೊಲೀಸ್ ಆಯುಕ್ತರನ್ನು ಭೇಟಿಯಾಗಿದ್ದರು. ನಂತರ ಶಸ್ತ್ರಾಸ್ತ್ರ ಪರವಾನಗಿ ನೀಡಿಕೆ ಪ್ರಾಧಿಕಾರವು ಅಗತ್ಯ ತನಿಖೆಯನ್ನು ಪ್ರಾರಂಭಿಸಿತ್ತು.

Death Threats: Actor Salman Khan Gets Arms Licence

ಗನ್ ಲೈಸೆನ್ಸ್‌ಗಾಗಿ ಮುಂಬೈ ಪೊಲೀಸ್ ಕಮಿಷನರ್ ವಿವೇಕ್ ಫನ್ಸಾಲ್ಕರ್ ಅವರನ್ನು ಭೇಟಿ ಮಾಡಲು ಜೂನ್ ತಿಂಗಳ ಕೊನೆಯಲ್ಲಿ ನಟ ಮುಂಬೈ ಪೊಲೀಸ್ ಪ್ರಧಾನ ಕಚೇರಿಗೆ ಭೇಟಿ ನೀಡಿದ್ದರು. ತನ್ನನ್ನು ಮತ್ತು ತನ್ನ ಕುಟುಂಬವನ್ನು ರಕ್ಷಿಸಿಕೊಳ್ಳಲು ಗನ್ ಬೇಕು ಎಂದು ತಿಳಿಸಿದ್ದರು ಎಂದು ಮೂಲಗಳು ತಿಳಿಸಿವೆ.

1998ರ ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿ ಸಲ್ಮಾನ್ ಖಾನ್‌ಗೆ ಲಾರೆನ್ಸ್ ಬಿಷ್ಣೋಯ್ ಜೀವ ಬೆದರಿಕೆ ಹಾಕಿದ್ದರು. ಇದರಲ್ಲಿ ಕೃಷ್ಣಮೃಗ ಬೇಟೆ ಪ್ರಕರಣದ ಆರೋಪಿಗಳಲ್ಲಿ ಸಲ್ಮಾನ್ ಖಾನ್‌ ಕೂಡ ಒಬ್ಬರಾಗಿದ್ದರು.

ನಟ ಸಲ್ಮಾನ್ ಖಾನ್ ಮತ್ತು ಚಿತ್ರ ಸಾಹಿತಿ, ಸಲ್ಮಾನ್ ತಂದೆ ಸಲೀಂ ಖಾನ್ ಅವರ ಹತ್ಯೆ ಬಗ್ಗೆ ಬೆದರಿಕೆ ಪತ್ರ ಬಂದಿತ್ತು. ಮೇ ತಿಂಗಳಲ್ಲಿ ಹತ್ಯೆಯಾದ ಪಂಜಾಬಿ ಗಾಯಕ ಸಿಧು ಮೂಸೆವಾಲಾ ರೀತಿಯಲ್ಲೇ ತಂದೆ-ಮಗ ಇಬ್ಬರನ್ನು ಮುಗಿಸಲಾಗುತ್ತದೆ ಎಂದು ಬೆದರಿಕೆ ಪತ್ರದಲ್ಲಿ ಎಚ್ಚರಿಸಲಾಗಿತ್ತು. ನಂತರ ಖಾನ್ ಮನೆಯ ಭದ್ರತೆಯನ್ನು ಹೆಚ್ಚಿಸಲಾಗಿತ್ತು.

ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಆರೋಪಿ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರನ್ನು 2021 ರಲ್ಲಿ ಪೊಲೀಸರು ವಿಚಾರಣೆಗೊಳಪಡಿಸಿದಾಗ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲಲು ಸಂಚು ರೂಪಿಸಿದ್ದಾಗಿ ಒಪ್ಪಿಕೊಂಡಿದ್ದರು. ಲಾರೆನ್ಸ್ ಬಿಷ್ಣೋಯ್ ಅವರ ವಿಚಾರಣೆಯ ವರದಿಯ ಪ್ರತಿಯಲ್ಲಿ ಅವರು ಸಲ್ಮಾನ್ ಖಾನ್ ಅವರನ್ನು ಕೊಲ್ಲಲು ರಾಜಸ್ಥಾನ ಮೂಲದ ಗ್ಯಾಂಗ್‌ಸ್ಟರ್ ಸಂಪತ್ ನೆಹ್ರಾ ಅವರನ್ನು ಕೇಳಲಾಗಿತ್ತು ಎಂದು ಬಹಿರಂಗಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+