ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಬೈ ಕಟ್ಟಡ ಕುಸಿತ: ಮೃತರ ಸಂಖ್ಯೆ 13ಕ್ಕೆ ಏರಿಕೆ

|
Google Oneindia Kannada News

ಮುಂಬೈ, ಜುಲೈ 17: ಮುಂಬೈನಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಮೃತಪಟ್ಟವರ ಸಂಖ್ಯೆ 13ಕ್ಕೇರಿದೆ. 40ಕ್ಕೂ ಅಧಿಕ ಮಂದಿ ಕಟ್ಟಡದೊಳಗೆ ಸಿಲುಕಿರುವ ಸಾಧ್ಯತೆ ಇದ್ದು ಕಾರ್ಯಾಚರಣೆ ಮುಂದುವರೆದಿದೆ.

ಎಎನ್ಐ ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದ ಬೃಹನ್ ಮುಂಬೈ ಮಹಾನಗರ ಪಾಲಿಕೆ ವಿಪತ್ತು ನಿರ್ವಹಣಾ ಘಟಕದ ಮುಖ್ಯಸ್ಥ, ಡೊಂಗ್ರಿ ಪ್ರದೇಶದ ಟಂಡೆಲ್ ಸ್ಟ್ರೀಟ್ ನಲ್ಲಿರುವ ಕೇಸರ್ಬಾಯಿ ಕಟ್ಟಡ ಇಂದು ಬೆಳಗ್ಗೆ 11.40ರ ಸುಮಾರಿಗೆ ಕುಸಿದು ಬಿದ್ದಿದೆ ಎಂದು ಹೇಳಿದ್ದಾರೆ.

ಮುಂಬೈ ಕಟ್ಟಡ ಕುಸಿತ: 4 ಅಂತಸ್ತಿನ ಕಟ್ಟಡ ಕುಸಿತ, 7 ಮಂದಿ ಮೃತ ಮುಂಬೈ ಕಟ್ಟಡ ಕುಸಿತ: 4 ಅಂತಸ್ತಿನ ಕಟ್ಟಡ ಕುಸಿತ, 7 ಮಂದಿ ಮೃತ

ಘಟನೆ ಕುರಿತು ತನಿಖೆಗೆ ಆದೇಶಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಅವರು, ಸುಮಾರು ನೂರು ವರ್ಷಗಳ ಹಳೆಯ ಕಟ್ಟಡ ಇದಾಗಿದ್ದು, 2012ರಲ್ಲೇ ಕಟ್ಟಡ ತೆರವು ಗೊಳಿಸಲು ಆದೇಶ ನೀಡಲಾಗಿತ್ತು. ಅಲ್ಲದೆ ಅಕ್ರಮವಾಗಿ ಕಟ್ಟಡ ನಿರ್ಮಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಸಂಪೂರ್ಣ ತನಿಖೆ ನಡೆಸಲಾಗುವುದು. 15 ಕುಟುಂಬ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ಹೇಳಿದ್ದಾರೆ.

Death toll rises to 13 in the Kesarbhai building collapse incident in Dongri

ಡೊಂಗ್ರಿಯಲ್ಲಿ ಕುಸಿತ ಕಟ್ಟಡದ ಮಾಲೀಕಾರು ಯಾರು? ಎಂಬುದರ ಬಗ್ಗೆ ಚರ್ಚೆ ಶುರುವಾಗಿದೆ. ಮಹಾರಾಷ್ಟ್ರ ವಸತಿ ಹಾಗೂ ಪ್ರದೇಶಾಭಿವೃದ್ಧಿ ಪ್ರಾಧಿಕಾರ(MHADA) ಕ್ಕೆ ಸೇರಿದ ಕಟ್ಟಡ ಎಂದು ಮೊದಲಿಗೆ ವರದಿ ಬಂದಿತ್ತು. ಕಾಂಗ್ರೆಸ್ ಮುಖಂಡರಾದ ಭಾಯಿ ಜಗತಪ್, ಮಿಲಿಂದ್ ದಿಯೋರಾ ಅವರು ಕೂಡಾ ಈ ಬಗ್ಗೆ ಪ್ರತಿಕ್ರಿಯಿಸುವಂತೆ ಪ್ರಾಧಿಕಾರವನ್ನು ಆಗ್ರಹಿಸಿದ್ದರು.

English summary
Death toll rises to 13 in the Kesarbhai building collapse incident in Dongri, which occurred yesterday. Search and rescue operation is still underway.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X