• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಹಾರಾಷ್ಟ್ರದಲ್ಲಿ ಕೈಮೀರಿದ ಕೊರೊನಾ; ಪ್ರಧಾನಿಗೆ ಸಿಎಂ ಪತ್ರ

|

ಮುಂಬೈ, ಏಪ್ರಿಲ್ 15: ಏಪ್ರಿಲ್ ಕೊನೆಯ ವೇಳೆಗೆ ಮಹಾರಾಷ್ಟ್ರವೊಂದರಲ್ಲೇ 11.9 ಲಕ್ಷ ಸಕ್ರಿಯ ಕೊರೊನಾ ಪ್ರಕರಣಗಳು ದಾಖಲಾಗುತ್ತವೆ ಎಂದು ಉಲ್ಲೇಖಿಸಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಸದ್ಯಕ್ಕೆ ರಾಜ್ಯದಲ್ಲಿ 5.64 ಲಕ್ಷ ಸಕ್ರಿಯ ಪ್ರಕರಣಗಳಿದ್ದು, ಕಳೆದ ಸೆಪ್ಟೆಂಬರ್ ತಿಂಗಳಿಗಿಂತ ರಾಜ್ಯದಲ್ಲಿ 88% ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದ್ದಾರೆ.

"ನಿಮಗೇ ತಿಳಿದಿರುವಂತೆ ದೇಶದಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಅತಿ ಹೆಚ್ಚು ದಾಖಲಾಗಿದ್ದು, ಇಡೀ ದೇಶದಲ್ಲಿ 10.5 ಲಕ್ಷ ಸಕ್ರಿಯ ಪ್ರಕರಣಗಳು ಇದ್ದವು. ಆದರೆ ಮಹಾರಾಷ್ಟ್ರವೊಂದರಲ್ಲೇ ಏಪ್ರಿಲ್ ತಿಂಗಳ ಕೊನೆಯಲ್ಲಿ 11.9 ಲಕ್ಷ ಸಕ್ರಿಯ ಪ್ರಕರಣಗಳು ಇರುತ್ತವೆ" ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಮುಂದೆ ಓದಿ...

"ಎರಡನೇ ಅಲೆಗೆ ಮಹಾರಾಷ್ಟ್ರ ತತ್ತರಿಸಿದೆ"

ಬುಧವಾರ ಮಹಾರಾಷ್ಟ್ರದಲ್ಲಿ 58952 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಇದುವರೆಗೂ ಸೋಂಕಿನಿಂದ ರಾಜ್ಯದಲ್ಲಿ 58,804 ಮಂದಿ ಸಾವನ್ನಪ್ಪಿದ್ದಾರೆ. ಕೊರೊನಾ ಪ್ರಕರಣಗಳು ಏರುಗತಿಯಲ್ಲಿಯೇ ಸಾಗುತ್ತಿವೆ. ಕೊರೊನಾ ಎರಡನೇ ಅಲೆಗೆ ಮಹಾರಾಷ್ಟ್ರ ತತ್ತರಿಸಿದೆ. ಈ ಸೋಂಕಿನಿಂದ ಹೊರಬರಲು ಕೇಂದ್ರ ಸಹಕಾರ ನೀಡಬೇಕು ಎಂದು ಕೋರಿ ಪ್ರಧಾನಿಗೆ ಪತ್ರ ಬರೆದಿದ್ದಾರೆ.

ಮಹಾರಾಷ್ಟ್ರದಲ್ಲಿ ಕೊರೊನಾ 2ನೇ ಅಲೆ: ಸಂಕಷ್ಟದಲ್ಲಿ ಡಬ್ಬಾವಾಲಾಗಳುಮಹಾರಾಷ್ಟ್ರದಲ್ಲಿ ಕೊರೊನಾ 2ನೇ ಅಲೆ: ಸಂಕಷ್ಟದಲ್ಲಿ ಡಬ್ಬಾವಾಲಾಗಳು

"ಸೋಂಕನ್ನು ನೈಸರ್ಗಿಕ ವಿಕೋಪ ಎಂದು ಘೋಷಿಸಿ"

ಕೊರೊನಾ ಸೋಂಕನ್ನು ಪ್ರಾಕೃತಿಕ ವಿಕೋಪ ಎಂದು ಘೋಷಣೆ ಮಾಡುವಂತೆಯೂ ಪತ್ರದ ಮೂಲಕ ಉದ್ಧವ್ ಠಾಕ್ರೆ ಕೇಂದ್ರಕ್ಕೆ ಮನವಿ ಮಾಡಿದ್ದಾರೆ. ಕೊರೊನಾ ಸೋಂಕನ್ನು ನೈಸರ್ಗಿಕ ವಿಕೋಪ ಎಂದು ಘೋಷಣೆ ಮಾಡಿದರೆ, ರಾಜ್ಯ ಸರ್ಕಾರ ಎಸ್‌ಡಿಆರ್‌ಎಫ್ ನಿಧಿಯನ್ನು ಬಳಸಿಕೊಳ್ಳಬಹುದು. ಸೋಂಕಿತರಿಗೆ ಈ ಮೂಲಕ ನೆರವಾಗಬಹುದು. ಇದಕ್ಕೆ ಕೇಂದ್ರದ ಅನುಮತಿ ಬೇಕಾಗಿದೆ ಎಂದು ಕೇಳಿಕೊಂಡಿದ್ದಾರೆ.

 ವೈದ್ಯಕೀಯ ಆಮ್ಲಜನಕಕ್ಕೆ ಬೇಡಿಕೆ

ವೈದ್ಯಕೀಯ ಆಮ್ಲಜನಕಕ್ಕೆ ಬೇಡಿಕೆ

ಏರುತ್ತಿರುವ ಪ್ರಕರಣಗಳೊಂದಿಗೆ, ಮಹಾರಾಷ್ಟ್ರದಲ್ಲಿ ವೈದ್ಯಕೀಯ ಸೌಲಭ್ಯಗಳ ಕೊರತೆಯೂ ಹೆಚ್ಚಾಗಿದೆ. ವೈದ್ಯಕೀಯ ಆಮ್ಲಜನಕ ಅಭಾವ ಎದುರಾಗಿದ್ದು, 2000 ಎಂಟಿ ದ್ರವರೂಪದ ಆಮ್ಲಜನಕವನ್ನು ಪೂರೈಸಬೇಕೆಂದು ಪ್ರಧಾನಿಯನ್ನು ಕೇಳಿಕೊಂಡಿದ್ದಾರೆ. ಸದ್ಯಕ್ಕೆ ರಾಜ್ಯದಲ್ಲಿ 1200 ಎಂಟಿ ಲಭ್ಯವಿದ್ದು, ತಿಂಗಳ ಕೊನೆಗೆ ಈ ಬೇಡಿಕೆ 2000ರವರೆಗೂ ಮುಟ್ಟುತ್ತದೆ. ಕೇಂದ್ರ ನೆರವಾಗಬೇಕು ಎಂದು ಕೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಒಂದೇ ದಿನ 58952 ಮಂದಿಗೆ ಕೊರೊನಾವೈರಸ್!ಮಹಾರಾಷ್ಟ್ರದಲ್ಲಿ ಒಂದೇ ದಿನ 58952 ಮಂದಿಗೆ ಕೊರೊನಾವೈರಸ್!

 ಮಹಾರಾಷ್ಟ್ರದಲ್ಲಿನ ಕೊರೊನಾ ಪ್ರಕರಣಗಳು

ಮಹಾರಾಷ್ಟ್ರದಲ್ಲಿನ ಕೊರೊನಾ ಪ್ರಕರಣಗಳು

ಮಹಾರಾಷ್ಟ್ರದಲ್ಲಿ ಬುಧವಾರ ಒಂದೇ ದಿನ 58952 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. 39,624 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, ಸೋಂಕಿಗೆ ಒಂದೇ ದಿನ 278 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.ಬುಧವಾರದ ಅಂಕಿ-ಅಂಶಗಳ ಪ್ರಕಾರ, ಮಹಾರಾಷ್ಟ್ರದಲ್ಲಿ ಒಟ್ಟು ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ 35,78,160ಕ್ಕೆ ಏರಿಕೆಯಾಗಿದೆ. ಈವರೆಗೂ 29,05,721 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 58,804 ಮಂದಿ ಪ್ರಾಣ ಬಿಟ್ಟಿದ್ದಾರೆ. ಉಳಿದಂತೆ ರಾಜ್ಯದಲ್ಲಿ 6,12,070 ಸಕ್ರಿಯ ಪ್ರಕರಣಗಳಿವೆ.

English summary
Maharashtra CM Uddhav Thackeray writes letter to PM Narendra Modi and requested to declare corona pandemic as natural calamity
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X