• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಾನನಷ್ಟ ಮೊಕದ್ದಮೆ; ಸೆಷನ್ ಕೋರ್ಟ್ ಮೊರೆ ಹೋದ ಕಂಗನಾ

|
Google Oneindia Kannada News

ಮುಂಬೈ, ಮಾರ್ಚ್ 11: ಹಿರಿಯ ಚಿತ್ರ ಸಾಹಿತಿ ಜಾವೇದ್ ಅಖ್ತರ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಹೊರಡಿಸಿದ್ದ ಜಾಮೀನು ಸಹಿತ ವಾರಂಟ್ ಪ್ರಶ್ನಿಸಿ ನಟಿ ಕಂಗನಾ ರನೌತ್ ಸೆಷನ್ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್‌ ಟಿ.ವಿಗೆ ನೀಡಿದ ಸಂದರ್ಶನದಲ್ಲಿ ಕಂಗನಾ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಚಿತ್ರ ಸಾಹಿತಿ ಜಾವೇದ್ ಅಖ್ತರ್ ಆರೋಪಿಸಿದ್ದು, ಈ ಕುರಿತಂತೆ ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಮುಂಬೈ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ವಿಚಾರಣೆಗೆ ಕಂಗನಾ ಅವರು ಹಾಜರಾಗದ ಹಿನ್ನೆಲೆಯಲ್ಲಿ ಮಾರ್ಚ್ 1ರಂದು ಜಾಮೀನು ಸಹಿತ ವಾರೆಂಟ್ ಹೊರಡಿಸಿತ್ತು.

ನಟಿ ಕಂಗನಾ ರನೌತ್ ವಿರುದ್ಧ ವಾರೆಂಟ್ ಹೊರಡಿಸಿದ ಕೋರ್ಟ್ನಟಿ ಕಂಗನಾ ರನೌತ್ ವಿರುದ್ಧ ವಾರೆಂಟ್ ಹೊರಡಿಸಿದ ಕೋರ್ಟ್

ಈ ಮಾನನಷ್ಟ ಮೊಕದ್ದಮೆ ಅರ್ಜಿ ವಿಚಾರಣೆಗೆ ಫೆಬ್ರವರಿ 1ರಂದು ಹಾಜರಾಗುವಂತೆ ಕಂಗನಾಗೆ ಅಂಧೇರಿಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಸಮನ್ಸ್ ನೀಡಿತ್ತು. ಆದರೆ, ಕಂಗನಾ ಕೋರ್ಟಿಗೆ ಹಾಜರಾಗಿರಲಿಲ್ಲ. ಸೋಮವಾರವೂ ನ್ಯಾಯಾಲಯಕ್ಕೆ ಗೈರಾದ ಹಿನ್ನೆಲೆಯಲ್ಲಿ ಜಾಮೀನು ಸಹಿತ ವಾರೆಂಟ್‌ ಹೊರಡಿಸಿ ವಿಚಾರಣೆಯನ್ನು ಮಾರ್ಚ್ 26ಕ್ಕೆ ಮುಂದೂಡಲಾಗಿತ್ತು.

ಈ ವಾರಂಟ್ ಪ್ರಶ್ನಿಸಿ ಬುಧವಾರ ಸೆಷನ್ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಮಾರ್ಚ್ 15ರಂದು ವಿಚಾರಣೆ ನಡೆಯಲಿರುವುದಾಗಿ ತಿಳಿದುಬಂದಿದೆ.

English summary
Actress Kangana Ranaut has challenges bailable warrant issued by megistrate in defamation complaint filed against her by Javed Akhtar,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X