ದಿಲೀಪ್ ಕುಮಾರ್ ಆರೋಗ್ಯ ಸ್ಥಿರ: ಲೀಲಾವತಿ ಆಸ್ಪತ್ರೆ ಸ್ಪಷ್ಟನೆ

Posted By:
Subscribe to Oneindia Kannada

ಮುಂಬೈ, ಆಗಸ್ಟ್ 4: ಅನಾರೋಗ್ಯದಿಂದಾಗಿ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿರುವ ಹಿಂದಿ ಚಿತ್ರರಂಗದ ಹಿರಿಯ ತಾರೆ ದಿಲೀಪ್ ಕುಮಾರ್ ಅವರ ಪರಿಸ್ಥಿತಿ ಸ್ಥಿರವಾಗಿದ್ದು, ಚಿಕಿತ್ಸೆಗೆ ನಿಧಾನವಾಗಿ ಸ್ಪಂದಿಸುತ್ತಿದ್ದಾರೆಂದು ಆಸ್ಪತ್ರೆಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಆಸ್ಪತ್ರೆಗೆ ದಾಖಲು

ಜ್ವರ ಹಾಗೂ ನಿರ್ಜಲೀಕರಣದಿಂದಾಗಿ ಅವರು ಆಸ್ಪತ್ರೆಗೆ ದಾಖಲಾಗಿರುವುದಾಗಿ ಆಸ್ಪತ್ರೆಯ ಮೂಲಗಳು ತಿಳಿಸಿದ್ದವು. ಆದರೆ, ಇದರ ಜತೆಯಲ್ಲೇ ದಿಲೀಪ್ ಕುಮಾರ್ ಅವರು ಕಿಡ್ನಿ ಕಲ್ಲುಗಳ ಸಮಸ್ಯೆಯಿಂದ ಬಳಲುತ್ತಿದ್ದಾರೆಂದು ವೈದ್ಯರು ಹೇಳಿದ್ದಾರೆ.

Dilip Kumar is stable: Doctors

ಪರಿಸ್ಥಿತಿ ಗಂಭೀರವಾಗಿರುವುದರಿಂದ ಕೆಲ ಗಂಟೆಗಳ ಕಾಲ ಅವರನ್ನು ವೆಂಟಿಲೇಟರ್ ನಲ್ಲಿ ಇಡಲಾಗಿತ್ತು. ಇದೀಗ, ವೆಂಟಿಲೇಟರ್ ತೆರವುಗೊಳಿಸಲಾಗಿದ್ದು ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಆಸ್ಪತ್ರೆಯಿಂದ ಬಾಲಿವುಡ್ ನಟ ದಿಲೀಪ್ ಕುಮಾರ್ ಬಿಡುಗಡೆ

ಈ ಬಗ್ಗೆ ಪ್ರತಿಕ್ರಿಯಿಸಿರುವ ದಿಲೀಪ್ ಕುಮಾರ್ ಅವರ ಪತ್ನಿ ಹಾಗೂ ಮಾಜಿ ನಟಿ ಸೈರಬಾನು, ಇನ್ನೆರಡು ದಿನಗಳಲ್ಲೇ ಅವರು (ದಿಲೀಪ್) ಚೇತರಿಸಿಕೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Legendary Bollywood actor Dilip Kumar gave a scare to his fans after news of him being hospitalised broke out on Wednesday evening. He was admitted to the ICU at Lilavati hospital in Mumbai after suffering from a kidney ailment and dehydration.
Please Wait while comments are loading...