ಕೊರೊನಾ ಸೋಂಕಿತನ ಮೇಲೆ ವೈದ್ಯನಿಂದ ಲೈಂಗಿಕ ದೌರ್ಜನ್ಯ!
ಮುಂಬೈ, ಮೇ 4: ಕೊರೊನಾ ವೈರಸ್ ವಿರುದ್ಧ ತಮ್ಮ ಪ್ರಾಣವನ್ನೆ ಲೆಕ್ಕಕ್ಕಿಟ್ಟು ಹೋರಾಡುತ್ತಿರುವ ವೈದ್ಯರು ಒಂದು ಕಡೆಯಾದರೆ, ಕರ್ತವ್ಯನಿರತ ಸಂದರ್ಭದಲ್ಲಿ ರೋಗಿಯ ಮೇಲೆ ದೌರ್ಜನ್ಯವೆಸಗಿದ ವೈದ್ಯ ಮತ್ತೊಂದು ಕಡೆ.
ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ರೋಗಿ ಮೇಲೆ ನೂತನವಾಗಿ ಕೆಲಸಕ್ಕೆ ಸೇರಿದ್ದ 34 ವರ್ಷದ ವೈದ್ಯ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಈ ಸಂಬಂಧ ವೈದ್ಯನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ವೈದ್ಯನನ್ನು ಬಂಧಿಸುವ ಬದಲು ಕ್ವಾರೆಂಟೈನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

44 ವರ್ಷದ ವ್ಯಕ್ತಿಗೆ ಕೊವಿಡ್ ಸೋಂಕು ಖಚಿತವಾಗಿತ್ತು. ಆತನನ್ನು ಆಸ್ಪತ್ರೆಯ ಪ್ರತ್ಯೇಕ ಕೊಠಡಿಯಲ್ಲಿರಿಸಿ ಚಿಕಿತ್ಸೆ ನೀಡಲಾಗಿದೆ. ಈ ವೇಳೆ ವೈದ್ಯನು ಆತನನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಮುಂದಾಗಿದ್ದಾನೆ ಎಂಬ ವಿಷಯ ಬಹಿರಂಗವಾಗಿದೆ.
ವೈದ್ಯನಿಂದ ಇಂತಹ ಕೃತ್ಯ ನಡೆದಿದೆ ಎಂಬ ಮಾಹಿತಿ ಸಿಕ್ಕ ಕೂಡಲೇ ಆಸ್ಪತ್ರೆ ನಿರ್ವಹಣೆ ಮಂಡಳಿ, ವೈದ್ಯನನ್ನು ವಜಾಗೊಳಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಸ್ವೀಕರಿಸಿರುವ ಪೊಲೀಸರು ಎಫ್ ಐ ಆರ್ ಹಾಕಿದ್ದಾರೆ.
ಇನ್ನು ಮಹಾರಾಷ್ಟ್ರದಲ್ಲಿ ಈವರೆಗೂ ಅತಿ ಹೆಚ್ಚು ಕೊರೊನಾ ಕೇಸ್‌ಗಳು ದಾಖಲಾಗಿದೆ. 12,974 ಜನರಿಗೆ ಸೋಂಕು ತಗುಲಿದೆ. 2115 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೂ 548 ಜನರು ಮೃತಪಟ್ಟಿದ್ದಾರೆ.












Click it and Unblock the Notifications