Breaking News: ಡ್ರಗ್ಸ್ ಪ್ರಕರಣದಲ್ಲಿ ಶಾರೂಕ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ವಜಾ

ಮುಂಬೈ, ಅಕ್ಟೋಬರ್ 20: ಕ್ರೂಸ್ ಹಡಗು ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ಸ್ಟಾರ್ ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿಯನ್ನು ಮುಂಬೈನ ವಿಶೇಷ NDPS ಕೋರ್ಟ್ ತಿರಸ್ಕರಿಸಿದೆ. ಆರ್ಯನ್ ಖಾನೆ ಜೊತೆಗೆ ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಅವರ ಜಾಮೀನು ಅರ್ಜಿಗಳನ್ನೂ ಕೋರ್ಟ್ ತಿರಸ್ಕರಿಸಿದೆ.

"ಮುಂಬೈ NDPS ಕೋರ್ಟ್ ನೀಡಿದ ಆದೇಶ ಪ್ರತಿಗಾಗಿ ಅರ್ಜಿ ಸಲ್ಲಿಸಿದ್ದು, ಇಂದೇ ಹೈಕೋರ್ಟ್ ಮೊರೆ ಹೋಗಲಾಗುವುದು. ಒಂದು ವೇಳೆ ಇಂದು ಆದೇಶ ಪ್ರತಿ ಸಿಗದಿದ್ದರೆ ಗುರುವಾರ ಉಚ್ಛ ನ್ಯಾಯಾಲಯಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗುವುದು," ಎಂದು ಆರ್ಯನ್ ಖಾನ್ ಪರ ವಕೀಲರು ತಿಳಿಸಿದ್ದಾರೆ.

Drugs on cruise ship case: Mumbai’s Special NDPS Court rejects bail applications of Aryan Khan

ಆರ್ಯನ್ ಖಾನ್ ಪರ ವಕೀಲರು ಹೈಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ ನಂತರದಲ್ಲಿ ಎನ್ ಸಿಪಿ ಪರ ವಕೀಲರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸುತ್ತದೆ. ಎನ್ ಸಿಬಿ ಆಕ್ಷೇಪಣೆ ಸಲ್ಲಿಸಿದ ನಂತರದಲ್ಲಿ ವಿಚಾರಣೆ ನಡೆಸಲಿರುವ ಹೈಕೋರ್ಟ್ ಮುಂದಿನ ಕ್ರಮ ತೆಗೆದುಕೊಳ್ಳುವ ಸಾಧ್ಯತೆಗಳಿವೆ.

ಆರ್ಯನ್ ಖಾನ್ ಬಂಧನದ ಬಗ್ಗೆ ಪ್ರಶ್ನೆ:
ಕಳೆದ ಅಕ್ಟೋಬರ್ 14ರಂದು ಮುಂಬೈನ ವಿಶೇಷ NDPS ಕೋರ್ಟ್ ಪ್ರಕರಣರಕ್ಕೆ ಸಂಬಂಧಿಸಿದಂತೆ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ನಡೆಸಿತ್ತು. ಈ ಹಿಂದೆ ಆರ್ಯನ್ ಖಾನ್ ಪರ ಹಿರಿಯ ವಕೀಲ ಅಮಿತ್ ದೇಸಾಯಿ, 'ಅರಬ್ಬಿ ಸಮುದ್ರದಲ್ಲಿ ತೇಲುತ್ತಿದ್ದ ಕ್ರೂಸರ್ ಶಿಪ್‌ನಲ್ಲಿ ನಿಗದಿತ ಕಾರ್ಯಕ್ರಮಕ್ಕೆ ಅತಿಥಿಯಾಗಿ ಹೋಗಿದ್ದ ಆರ್ಯನ್ ಖಾನ್ ಡ್ರಗ್ ಸಾಗಿಸಿಲ್ಲ, ಡ್ರಗ್ಸ್ ಹೊಂದಿರಲಿಲ್ಲ, ವಿದೇಶಿ ಕರೆನ್ಸಿ ಜಪ್ತಿಯಾಗಿಲ್ಲ, ಹೀಗಿದ್ದು, ನನ್ನ ಕಕ್ಷಿದಾರರ ಬಂಧನವೇಕೆ?,'' ಎಂದು ವಾದಿಸಿದ್ದರು.

ಅಕ್ಟೋಬರ್‌ 4ರಿಂದ ಬಂಧನದಲ್ಲಿ ಆರ್ಯನ್:
ಕಳೆದ ಅಕ್ಟೋಬರ್‌ 4ರಂದು ಶಾರೂಕ್ ಖಾನ್ ಪುತ್ರ ಆರ್ಯನ್‌ ಖಾನ್‌ ಮತ್ತು ಇತರೆ ಆರೋಪಿಗಳನ್ನು ಬಂಧಿಸಲಾಗಿದ್ದು, ನ್ಯಾಯಾಲಯವು ಅಕ್ಟೋಬರ್‌ 7ರವರೆಗೆ ಆರೋಪಿಗಳನ್ನು ಮೊದಲಿಗೆ ಎನ್‌ಸಿಬಿ ಕಸ್ಟಡಿಗೆ ನೀಡಿತ್ತು. ಅಕ್ಟೋಬರ್ 8ರಂದು ಆರ್ಯನ್ ಖಾನ್ ರನ್ನು ಅರ್ಥರ್ ರಸ್ತೆಯ ಜೈಲಿನಲ್ಲಿ ಕೊವಿಡ್-19 ಮಾರ್ಗಸೂಚಿಯಂತೆ ಇರಿಸಲು ಕೋರ್ಟ್ ಸೂಚನೆ ನೀಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+