Breaking; ಶಿವಸೇನೆ ನಾಯಕ ಸಂಜಯ್ ರಾವತ್ ಮನೆ ಮೇಲೆ ಇಡಿ ದಾಳಿ

ಮುಂಬೈ, ಜುಲೈ 31; ಶಿವಸೇನೆ ನಾಯಕ ಸಂಜಯ್ ರಾವತ್‌ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈಗಾಗಲೇ ಪತ್ರಾ ಚಾಲ್ ಭೂ ಹಗರಣ ಪ್ರಕರಣದಲ್ಲಿ ಇಡಿ ಅವರ ವಿಚಾರಣೆ ನಡೆಸಿತ್ತು.

ಭಾನುವಾರ ಬೆಳಗ್ಗೆ ಮುಂಬೈನಲ್ಲಿರುವ ಸಂಜಯ್ ರಾವತ್ ಮನೆ ಮೇಲೆ ಇಡಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಪತ್ರಾ ಚಾಲ್ ಭೂ ಹಗರಣ ಪ್ರಕರಣದ ಸಂಬಂಧ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ಈ ಪ್ರಕರಣದ ತನಿಖೆ ನಡೆಸುತ್ತಿರುವ ಇಡಿ ಸಂಜಯ್‌ ರಾವತ್‌ಗೆ ಸೇರಿದ 1034 ಕೋಟಿ ರೂ. ಮೊತ್ತದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಈಗ ಮತ್ತೆ ದಾಳಿ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ed raid

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಇಡಿ ಸಂಜಯ ರಾವತ್‌ಗೆ ಸಮನ್ಸ್ ನೀಡಿತ್ತು. ಎರಡು ಬಾರಿ ಅವರು ವಿಚಾರಣೆಗೆ ಗೈರಾಗಿದ್ದರು. ಜುಲೈ 27ರಂದು ಸಹ ಅವರು ಇಡಿ ಮುಂದೆ ಹಾಜರಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಇಡಿ ದಾಳಿ ನಡೆಸಿದೆ ಎಂದು ಅಂದಾಜಿಸಲಾಗಿದೆ.

ಭಾನುವಾರ ಮುಂಜಾನೆ ಇಡಿ ಅಧಿಕಾರಿಗಳು ಸಂಜಯ್ ರಾವತ್ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ಭದ್ರತೆಗಾಗಿ ಸಿಆರ್‌ಪಿಎಫ್ ಯೋಧರನ್ನು ಅಧಿಕಾರಿಗಳು ಕರೆತಂದಿದ್ದಾರೆ. ಸಂಜಯ್ ರಾವತ್ ಶಿವಸೇನೆಯ ಪ್ರಭಾವಿ ನಾಯಕರು. ಆದ್ದರಿಂದ ಶಿವಸೇನೆ ಕಾರ್ಯಕರ್ತರು ಅವರ ನಿವಾಸದ ಮುಂದೆ ಇಡಿ ದಾಳಿ ಖಂಡಿಸಿ ಪ್ರತಿಭಟನೆ ನಡೆಸುವ ಸಾಧ್ಯತೆ ಇದ್ದು, ಭದ್ರತೆ ಹೆಚ್ಚಿಸಲಾಗಿದೆ.

ಪತ್ರಾ ಚಾಲ್ ಭೂ ಹಗರಣ ಸಂಬಂಧ ಇಡಿ ವಿಚಾರಣೆಗೆ ನೋಟಿಸ್ ನೀಡಿದಾಗಲೇ ಸಂಜಯ್ ರಾವತ್ ಇದು ರಾಜಕೀಯ ಪ್ರೇರಿತ ಎಂದು ಹೇಳಿಕೆ ನೀಡಿದ್ದರು. ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದ್ದರು.

ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ, ಎನ್‌ಸಿಪಿ, ಕಾಂಗ್ರೆಸ್ ಮೈತ್ರಿ ಸರ್ಕಾರ ಪತನಗೊಂಡು ಬಿಜೆಪಿ, ಶಿವಸೇನೆ ನೇತೃತ್ವದ ಸರ್ಕಾರ ಆಸ್ತಿತ್ವಕ್ಕೆ ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+