ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಮಹಾರಾಷ್ಟ್ರ ಸಚಿವರ ಮನೆ ಮೇಲೆ ಇಡಿ ದಾಳಿ

|
Google Oneindia Kannada News

ಮುಂಬೈ, ಮೇ 26: ಭೂ ವ್ಯವಹಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇಡಿ) ಮಹಾರಾಷ್ಟ್ರದ ಸಾರಿಗೆ ಸಚಿವ ಅನಿಲ್ ಪರಬ್‌ಗೆ ಸಂಬಂಧಿಸಿದ ಅನೇಕ ಸ್ಥಳಗಳ ಮೇಲೆ ದಾಳಿ ನಡೆಸಿದೆ.

ಗುರುವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸುಮಾರು 7 ಕಡೆಗಳಲ್ಲಿ ದಾಳಿ ಮಾಡಿದ್ದಾರೆ. ಶಿವಸೇನಾ ನಾಯಕ ಅನಿಲ್ ಪರಬ್‌ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಅಡಿಯಲ್ಲಿ ಹೊಸ ಪ್ರಕರಣ ದಾಖಲಿಸಿದ ನಂತರ ಪುಣೆ, ಮುಂಬೈ ಮತ್ತು ದಾಪೋಲಿಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.

2017ರಲ್ಲಿ ರತ್ನಗಿರಿ ಜಿಲ್ಲೆಯ ದಾಪೋಲಿಯಲ್ಲಿ ಶ್ರೀ ಪರಬ್ 1 ಕೋಟಿಗೆ ಭೂಮಿಯನ್ನು ಖರೀದಿಸಿದ್ದಾರೆ. ಆದರೆ ಇದು 2019ರಲ್ಲಿ ನೋಂದಾಯಿಸಲ್ಪಟ್ಟಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಚಿವರ ವಿರುದ್ಧ ಇಡಿ ಕ್ರಮಕ್ಕೆ ಮುಂದಾಗಿದೆ.

ED Search At Maharashtra Minister Anil Parab House

ನಂತರ 2020ರಲ್ಲಿ ಮುಂಬೈ ಮೂಲದ ಕೇಬಲ್ ಆಪರೇಟರ್ ಸದಾನಂದ್ ಕದಂ ಎಂಬುವವರಿಗೆ 1.10 ಕೋಟಿಗೆ ಭೂಮಿಯನ್ನು ಮಾರಾಟ ಮಾಡಲಾಗಿದ್ದು, 2017-2020ರ ನಡುವೆ ಆ ಜಾಗದಲ್ಲಿ ರೆಸಾರ್ಟ್ ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿದೆ.

ED Search At Maharashtra Minister Anil Parab House

ಆದಾಯ ತೆರಿಗೆ ಇಲಾಖೆಯು 2017 ರಲ್ಲಿ ರೆಸಾರ್ಟ್ ನಿರ್ಮಾಣದ ಬಗ್ಗೆ ತನಿಖೆ ಪ್ರಾರಂಭಿಸಿತ್ತು. ಅದಕ್ಕೆ 6 ಕೋಟಿಗೂ ಹೆಚ್ಚು ಖರ್ಚು ಮಾಡಲಾಗಿದೆ ಎಂಬ ಆರೋಪವಿದೆ.

English summary
The Directorate of Enforcement (ED) raided several places belongs to Maharashtra transport minister Anil Parab as part of an illegal money transfer investigation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X