ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಕ್ರಮ ಹಣ ವರ್ಗಾವಣೆ: ಮಾಜಿ ಸಚಿವ ಅನಿಲ್ ದೇಶ್‌ಮುಖ್ ಬಂಧನ ಸಾಧ್ಯತೆ

|
Google Oneindia Kannada News

ಮುಂಬೈ, ಜೂನ್ 26: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮಾಜಿ ಸಚಿವ ಅನಿಲ್ ದೇಶಮುಖ್ ಅವರಿಗೆ ಜಾರಿ ನಿರ್ದೇಶನಾಲಯ ಈಗಾಗಲೇ ಸಮನ್ಸ್ ಜಾರಿ ಮಾಡಲಾಗಿದ್ದು, ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್ ಅವರ ಇಬ್ಬರು ಆಪ್ತರನ್ನ ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿದೆ.

ಇಬ್ಬರನ್ನು ಮುಂಬೈನ ಬಲ್ಲಾರ್ಡ್ ಎಸ್ಟೇಟ್‌ನಲ್ಲಿರುವ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಲಾಗಿತ್ತು. ಇಬ್ಬರೂ ತನಿಖಾಧಿಕಾರಿಗಳ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿರಲಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ED Summons Maharashtra Former Minister Anil Deshmukh

ದೇಶಮುಖ್ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಪಲಾಂಡೆ ಮತ್ತು ಆಪ್ತ ಸಹಾಯಕ ಕುಂದನ್ ಶಿಂದೆ ಅವರನ್ನು ಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಬಳಿಕ ಇವರಿಬ್ಬರನ್ನು ಜಾರಿ ನಿರ್ದೇಶನಾಲಯದ ಕಚೇರಿಗೆ ವಿಚಾರಣೆಗಾಗಿ ಕರೆತರಲಾಗಿತ್ತು.

ಬಂಧಿತರನ್ನು ಪಿಎಂಎಲ್‌ಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಒಪ್ಪಿಸುವಂತೆ ಮನವಿ ಮಾಡಲಾಗುವುದು ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಹೇಳಿದ್ದಾರೆ.

'ಅಕ್ರಮ ಹಣ ವರ್ಗಾವಣೆ ನಿಯಂತ್ರ ಕಾಯ್ದೆ ಅಡಿ ಅನಿಲ್‌ ದೇಶಮುಖ್ ಅವರ ನಾಗಪುರದ ನಿವಾಸ ಸೇರಿದಂತೆ ವಿವಿಧ ಕಡೆಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿ, ಶೋಧ ನಡೆಸಿದ್ದರು.

ಹಾಗೆಯೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿಲ್ ದೇಶಮುಖ್ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ.

English summary
The Enforcement Directorate has summoned former Maharashtra Home Minister Anil Deshmukh to appear before it in connection with a Prevention of Money Laundering Case The ED has also arrested two aides of Deshmukh in connection with the same case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X