ಬಿಟ್ ಕಾಯಿನ್ ಹಗರಣ : ರಾಜ್ ಕುಂದ್ರಾಗೆ 'ಇಡಿ' ಸಮನ್ಸ್
ಮುಂಬೈ, ಜೂನ್ 05: ಉದ್ಯಮಿ, ನಟಿ ಶಿಲಾಶೆಟ್ಟಿ ಪತಿ ರಾಜ್ ಕುಂದ್ರಾ ಅವರಿಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ಜಾರಿಗೊಳಿಸಲಾಗಿದೆ. ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಮಂಗಳವಾರದಂದು ಸಮನ್ಸ್ ನೀಡಲಾಗಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಭ್ರಷ್ಟಾಚಾರದ ಆರೋಪ ಹೊತ್ತು ಎರಡು ವರ್ಷಗಳ ಕಾಲ ನಿಷೇಧಕ್ಕೊಳಗಾಗಿದ್ದ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿಯ ಮಾಲೀಕರಾದ ರಾಜ್ ಕುಂದ್ರಾ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಪ್ರಶ್ನಿಸಲು ಮುಂದಾಗಿದ್ದಾರೆ.

ಅಕ್ರಮ ಬೆಟ್ಟಿಂಗ್ ದಂಧೆ ಆರೋಪ ಹೊತ್ತಿದ್ದ ರಾಜ್ ಕುಂದ್ರಾ ಅವರು ಈಗ ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೊಳಪಡುವ ಸಾಧ್ಯತೆಯಿದೆ.












Click it and Unblock the Notifications