ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಮಹಾರಾಷ್ಟ್ರ ಸಿಎಂ ಆಗಿ ಏಕನಾಥ್ ಶಿಂಧೆ: ದೇವೇಂದ್ರ ಫಡ್ನವೀಸ್

|
Google Oneindia Kannada News

ಮುಂಬೈ, ಜೂನ್ 30: ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಸರ್ಕಾರ ಪತನದ ಬೆನ್ನಲ್ಲೇ ಗುರುವಾರವೇ ರಾಜ್ಯದ ಮುಖ್ಯಮಂತ್ರಿ ಆಗಿ ಏಕನಾಥ್ ಶಿಂಧೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಘೋಷಿಸಿದ್ದಾರೆ.

Recommended Video

ಕೊನೇಕ್ಷಣದಲ್ಲಿ ಮಹಾ ಬದಲಾವಣೆ: ಏಕನಾಥ್ ಶಿಂದೆಗೆ CM ಪಟ್ಟ ಬಿಟ್ಕೊಟ್ಟ ದೇವೇಂದ್ರ ಫಡ್ನವಿಸ್ | Oneindia Kannada

ಗುರುವಾರ ಸಂಜೆ 7.30 ಗಂಟೆಗೆ ನಡೆಯಲಿರುವ ಸರಳ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿ ಆಗಿ ಬಿಜೆಪಿಯ ಏಕನಾಥ್ ಶಿಂಧೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ದೇವೇಂದ್ರ ಫಡ್ನವೀಸ್ ಸುದ್ದಿಗೋಷ್ಠಿ ನಡೆಸಿ ಅಚ್ಚರಿಯ ಘೋಷಣೆ ಮಾಡಿದರು.

ಉದ್ಧವ್ ಠಾಕ್ರೆ ಸರ್ಕಾರದ ವಿರುದ್ಧ ಬಂಡಾಯದ ಬಾವುಟ ಹಾರಿಸಿದ ಶಿವಸೇನೆಯ ಏಕನಾಥ್ ಶಿಂಧೆ ಈ ವೇಳೆ ರಾಜ್ಯದ ಉಪ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

Eknath Shinde to be CM of Maharashtra, says Devendra Fadnavis

ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಬಲಾಬಲ: (ಜೂನ್ 30)
ಒಟ್ಟು ಸ್ಥಾನ: 287
ಮ್ಯಾಜಿಕ್ ನಂಬರ್: 144
ಶಿವಸೇನಾ: 16
ಎನ್ ಸಿ ಪಿ: 53
ಕಾಂಗ್ರೆಸ್: 44
ಬಿಜೆಪಿ: 106
ಬಂಡಾಯ ಶಾಸಕರು: 49

ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಏಕನಾಥ ಯಾರು?ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಏಕನಾಥ ಯಾರು?

ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಒಟ್ಟು 288 ಸ್ಥಾನಗಳಿದ್ದು, ಒಬ್ಬ ಶಾಸಕರು ವಿಧಿವಶವಾದ ಹಿನ್ನೆಲೆ ಈ ಸಂಖ್ಯೆಯು 287ಕ್ಕೆ ತಗ್ಗಿದೆ. ಹೀಗಾಗಿ ಸರ್ಕಾರದ ಬಹುಮತಕ್ಕೆ ಕನಿಷ್ಠ 144 ಸ್ಥಾನಗಳು ಬೇಕಾಗುತ್ತದೆ. ಬಿಜೆಪಿಯು 106 ಶಾಸಕರನ್ನು ಹೊಂದುವ ಮೂಲಕ ಅತಿದೊಡ್ಡ ಪಕ್ಷವಾಗಿದೆ. ಆದರೆ 55 ಶಾಸಕರನ್ನು ಹೊಂದಿರುವ ಶಿವಸೇನೆ, 53 ಶಾಸಕರನ್ನು ಹೊಂದಿರುವ ಎನ್ ಸಿಪಿ ಮತ್ತು 44 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಜೊತೆ ಮೂವರು ಶಾಸಕರನ್ನು ಹೊಂದಿರುವ ಬಹುಜನ ವಿಕಾಸ ಅಘಾಡಿ ಪಕ್ಷಗಳು ಒಟ್ಟಾಗಿ ಸೇರಿಕೊಂಡು ಮಹಾ ವಿಕಾಸ ಅಘಾಡಿ ಎಂದ ಸಮ್ಮಿಶ್ರ ಸರ್ಕಾರವನ್ನು ರಚಿಸಿವೆ. 49ಕ್ಕೂ ಅಧಿಕ ಶಾಸಕರನ್ನು ತಮ್ಮ ಬಳಿ ಹೊಂದಿರುವುದಾಗಿ ಏಕನಾಥ್ ಶಿಂಧೆ ಹೇಳಿಕೊಂಡಿದ್ದಾರೆ. ಬಹುತೇಕ ಎನ್ಡಿಎ ಬಳಿ 155 ಕ್ಕೂ ಅಧಿಕ ಶಾಸಕರ ಬಲ ಇರಲಿದೆ. ಮಹಾ ವಿಕಾಸ ಅಘಾಡಿ ಒಕ್ಕೂಟವು 169 ಶಾಸಕರ ಬೆಂಬಲವನ್ನು ಹೊಂದಿತ್ತು.

ಮಹಾರಾಷ್ಟ್ರ ಅಘಾಡಿ ಸರ್ಕಾರ ಪತನ:
ಮಹಾರಾಷ್ಟ್ರದಲ್ಲಿ ಸದ್ಯ ಸಮ್ಮಿಶ್ರ ಸರ್ಕಾರ ಆಡಳಿತದಲ್ಲಿತ್ತು. ಉದ್ದವ್ ಠಾಕ್ರೆ ನೇತೃತ್ವದ ಶಿವಸೇನಾ ಸರ್ಕಾರಕ್ಕೆ ಎನ್ ಸಿಪಿ ಹಾಗೂ ಕಾಂಗ್ರೆಸ್ ಬೆಂಬಲ ನೀಡಿವೆ. ಮಹಾರಾಷ್ಟ್ರ ಅಘಾಡಿಯ ಬುಡವನ್ನು ಅಲ್ಲಾಡಿಸುವಂಥ ಕೃತ್ಯಕ್ಕೆ ಏಕನಾಥ್ ಕೈ ಹಾಕಿದರು. ಶಿವಸೇನಾ ಬಂಡಾಯ ಶಾಸಕರನ್ನು ಕರೆದುಕೊಂಡು ಗುಜರಾತಿನ ಸೂರತ್ ನಂತರ ಗುವಾಹಟಿಗೆ ಕರೆದೊಯ್ದರು. ಉದ್ಧವ್ ಠಾಕ್ರೆಗೆ ವಿಶ್ವಾಸಮತ ಯಾಚನೆಗೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಸೂಚಿಸಿದರು. ಅಷ್ಟರಲ್ಲಿ ಸುಪ್ರೀಂಕೋರ್ಟ್ ಕೂಡಾ ಬಹುಮತ ಸಾಬೀತುಪಡಿಸಲು ಸೂಚನೆ ನೀಡಿತ್ತು.

ಹೀಗಾಗಿ, ಅನಿವಾರ್ಯವಾಗಿ ವಿಶ್ವಾಸಮತ ಯಾಚನೆಗೂ ಮುನ್ನ ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ಜೂನ್ 29ರಂದು ರಾಜೀನಾಮೆ ನೀಡಿದರು. ಇದಾದ ಬಳಿಕ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ನಾಲ್ಕನೇ ಬಾರಿ ಸಿಎಂ ಆಗುತ್ತಾರೆ ಎಂದೆನಿಸಲಾಗಿತ್ತು. ಆದರೆ,ಅಚ್ಚರಿಯ ಬೆಳವಣಿಗೆಯಲ್ಲಿ ಏಕನಾಥ್ ಶಿಂಧೆ ಮುಂದಿನ ಮುಖ್ಯಮಂತ್ರಿ ಎಂದು ದೇವೇಂದ್ರ ಫಡ್ನವೀಸ್ ಘೋಷಿಸಿದರು.

ಮಾಸ್ ಲೀಡರ್ ಶಿಂಧೆ:

ಏಕನಾಥ್ ಶಿಂಧೆ ಅವರ ಪುತ್ರ ಶ್ರೀಕಾಂತ್ ಶಿಂಧೆ, ಕಲ್ಯಾಣ್ ಕ್ಷೇತ್ರದ ಸಂಸದರಾಗಿದ್ದಾರೆ. ಏಕನಾಥ್ ಶಿಂಧೆ 2004, 2009, 2014 ಹಾಗೂ 2019ರಲ್ಲಿ ಮಹಾರಾಷ್ಟ್ರ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. 2014ರಲ್ಲಿ ಬಿಜೆಪಿ ಹಾಗೂ ಶಿವಸೇನಾ ಸಖ್ಯ ಮುರಿದ ಬಳಿಕ ಶಿವಸೇನಾದಿಂದ ಶಾಸಕಾಂಗ ಪಕ್ಷದ ನಾಯಕರಾಗಿ ಏಕನಾಥ್ ಶಿಂಧೆ ಕಾರ್ಯನಿರ್ವಹಿದ್ದಾರೆ.

ಮಹಾ ವಿಕಾಸ್ ಅಘಾಡಿ ಆರಂಭಿಸಿ, ಹೊಸ ಸರ್ಕಾರ ಉದಯವಾದ ಬಳಿಕ ಶಿಂಧೆಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ದೊರೆಕಿದೆ. ನಗರಾಭಿವೃದ್ಧಿ ಹಾಗೂ ಮೂಲ ಸೌಕರ್ಯ ಇಲಾಖೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ.

English summary
Eknath Shinde to be CM of Maharashtra, says Devendra Fadnavis
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X