Get Updates
Get notified of breaking news, exclusive insights, and must-see stories!

ಎಲ್ಗಾರ್‌ ಪರಿಷತ್‌ ಪ್ರಕರಣ: ಸ್ಟಾನ್‌ ಸ್ವಾಮಿ ವೆಂಟಿಲೇಟರ್‌ ನೆರವಿನಿಂದ ಉಸಿರಾಟ

ಮುಂಬೈ, ಜು.05: ಭೀಮಾ ಕೋರೆಗಾಂವ್ ಪ್ರಕರಣ ಹಾಗೂ ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ 84 ವರ್ಷದ ಪಾದ್ರಿ, ಬುಡಕಟ್ಟು ಹಕ್ಕುಗಳ ಹೋರಾಟಗಾರ ಸ್ಟಾನ್ ಸ್ವಾಮಿ ಆರೋಗ್ಯ ಸ್ಥಿತಿಯು ಭಾನುವಾರ ಮುಂಜಾನೆ ಮತ್ತಷ್ಟು ಹದಗೆಟ್ಟಿದ್ದು ಈ ಹಿನ್ನೆಲೆ ''ಪ್ರಸ್ತುತ ಸ್ಟಾನ್ ಸ್ವಾಮಿಯನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ,'' ಎಂದು ಸ್ಟಾನ್‌ ಪರ ವಕೀಲರು ತಿಳಿಸಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಸ್ಟಾನ್‌ ಸ್ವಾಮಿಯನ್ನು ಬಾಂಬೆ ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಮೇ 30 ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ, ಸ್ಟಾನ್ ಸ್ವಾಮಿ ಪರ ವಕೀಲ ಮಿಹಿರ್ ದೇಸಾಯಿ ಸ್ಟಾನ್ ಸ್ವಾಮಿಯ ಜಾಮೀನು ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್‌ಗೆ, ''ಸ್ಟಾನ್‌ ಸ್ವಾಮಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇದ್ದಾರೆ,'' ಎಂದು ಹೇಳಿದ್ದರು.

ಭಾನುವಾರ ಮಿಹಿರ್ ದೇಸಾಯಿ, "ಮಧ್ಯರಾತ್ರಿಯ ನಂತರ ಸ್ಟಾನ್‌ ಸ್ವಾಮಿಯ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಪ್ರಸ್ತುತ ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ. ಆಮ್ಲಜನಕದ ಮಟ್ಟವು ಏರಿಳಿತಗೊಂಡಿರುವುದರಿಂದ ಅವರಿಗೆ ಉಸಿರಾಡಲು ತೊಂದರೆಯಾಗಿದೆ. ಇದು ಕೋವಿಡ್‌ ನಂತರದ ದೀರ್ಘಕಾಲದ ಸಮಸ್ಯೆಯಾಗಿರಬಹುದು," ಎಂದು ಮಾಹಿತಿ ನೀಡಿದ್ದಾರೆ.

Elgaar Parishad case: Stan Swamys health deteriorates, put on ventilator support

ನ್ಯಾಯಮೂರ್ತಿಗಳಾದ ಎಸ್ ಎಸ್ ಶಿಂಧೆ ಮತ್ತು ಎನ್ ಜೆ ಜಮಾದರ್‌ನ ವಿಭಾಗೀಯ ನ್ಯಾಯಪೀಠವು ವೈದ್ಯಕೀಯ ಆಧಾರದ ಮೇಲೆ ಹಾಗೂ ಸಮಯದ ಕೊರತೆಯಿಂದಾಗಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ವಿಶೇಷ ನ್ಯಾಯಾಲಯದ ಆದೇಶದ ವಿರುದ್ಧ ಸ್ವಾಮಿಯ ಮೇಲ್ಮನವಿಯ ವಿಚಾರಣೆಯನ್ನು ಜುಲೈ 6 ಕ್ಕೆ ವಿಚಾರಣೆ ನಡೆಸಲಿದೆ. ಹೈಕೋರ್ಟ್ ಹೋಲಿ ಪ್ಯಾಮಿಲಿ ಆಸ್ಪತ್ರೆಗೆ ಸ್ಟಾನ್‌ ಸ್ವಾಮಿಯನ್ನು ದಾಖಲಿಸಲು ನಿರ್ದೇಶನ ನೀಡಿತ್ತು.

ಹಿಂದಿನ ವಿಚಾರಣೆಗಳಲ್ಲಿ, ಸ್ವಾಮಿಯ ಬಗ್ಗೆ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರ ವರದಿಗಳನ್ನು ಪರಿಶೀಲಿಸಿದ ನಂತರ "ಗಂಭೀರ ವೈದ್ಯಕೀಯ ಸಮಸ್ಯೆಗಳಿವೆ," ಎಂದು ನ್ಯಾಯಾಲಯವು ಗಮನಿಸಿತ್ತು. ಹೋಲಿ ಫ್ಯಾಮಿಲಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಇಯಾನ್ ಡಿಸೋಜ ಸ್ವಾಮಿಯ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. "ನಾವು ರೋಗಿಗಳ ಗೌಪ್ಯತೆಯನ್ನು ಗೌರವಿಸಬೇಕು. ಈ ಸಮಯದಲ್ಲಿ ಅವರ ಚಿಕಿತ್ಸೆ ಮತ್ತು ಆರೋಗ್ಯದ ಬಗ್ಗೆ ನಾನು ಏನನ್ನೂ ಬಹಿರಂಗಪಡಿಸಲು ಸಾಧ್ಯವಿಲ್ಲ," ಎಂದು ಹೇಳಿದ್ದಾರೆ. ಇನ್ನು ಹೃದ್ರೋಗ ತಜ್ಞ ಡಾ ಜೆ ಪಿ ಜಡ್ವಾನಿ ಕೂಡ ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

ಈ ನಡುವೆ ಅಸೋಸಿಯೇಷನ್ ​​ಆಫ್ ಕನ್ಸರ್ನ್ಡ್ ಕ್ಯಾಥೊಲಿಕರ ಮೆಲ್ವಿನ್ ಫರ್ನಾಂಡಿಸ್, ಭಾನುವಾರ ಸಂಜೆ ಸ್ವಾಮಿಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದರು. "ಫಾದರ್ ಸ್ಟಾನ್ ಸ್ವಾಮಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಪ್ರಸ್ತುತ ವೆಂಟಿಲೇಟರ್‌ನಲ್ಲಿದ್ದಾರೆ. ಇದನ್ನು ಕೇಳಿ ತುಂಬಾ ನೋವುಂಟಾಗಿದೆ. ಸರ್ಕಾರವನ್ನು ಪ್ರಶ್ನಿಸಿದ ಕಾರಣಕ್ಕೆ ಅವರನ್ನು ಅನ್ಯಾಯವಾಗಿ ಬಂಧಿಸಲಾಗಿದೆ," ಎಂದು ದುಃಖ ವ್ಯಕ್ತಪಡಿಸಿದರು.

ಸ್ವಾಮಿಯನ್ನು ಕಳೆದ ವರ್ಷ ಅಕ್ಟೋಬರ್ 8 ರಂದು ರಾಂಚಿಯಿಂದ ಬಂಧಿಸಲಾಗಿತ್ತು. ಮರುದಿನ ಮುಂಬೈಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕರೆತಂದಿತು.

ಪಾರ್ಕಿನ್ಸನ್ ಕಾಯಿಲೆ ಸೇರಿದಂತೆ ಅವರ ವಿವಿಧ ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ಸಾಂಕ್ರಾಮಿಕ ರೋಗದ ಕಾರಣದಿಂದ ಸ್ವಾಮಿ ಮಧ್ಯಂತರ ಜಾಮೀನು ಕೋರಿದ್ದರು. ಈ ಅರ್ಜಿ ವಿಚಾರಣೆ ನಡೆಸುವ ಸಂದರ್ಭ ನ್ಯಾಯಮೂರ್ತಿಗಳಾದ ಎಸ್ ಜೆ ಕತವಲ್ಲ ಹಾಗೂ ಎಸ್ ಪಿ ತವಡೆ ಪೀಠದ ಮುಂದೆ ಸ್ಟಾನ್‌ ಸ್ವಾಮಿ ತಲೋಜ ಜೈಲಿನಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ.

ಈ ವೇಳೆ ನ್ಯಾಯಾಲಯವು ನಿಮ್ಮನ್ನು ಆಸ್ಪತ್ರೆಗೆ ದಾಖಲಿಸಬೇಕೇ ಎಂದು ಸ್ಟಾನ್‌ ಸ್ವಾಮಿ ಬಳಿ ಕೇಳಿದಾಗ ಸ್ಟಾನ್‌ ಸ್ವಾಮಿ, ಆಸ್ಪತ್ರೆಗೆ ದಾಖಲಾಗುವುದಕ್ಕೆ ನಿರಾಕರಿಸಿದ್ದು, "ಪರಿಸ್ಥಿತಿ ಹೀಗೆಯೇ ಮುಂದುವರಿದರೆ ನಾನು ಇಲ್ಲಿಯೇ ಸಾಯಬಹುದು. ಜೆಜೆ ಆಸ್ಪತ್ರೆಗೆ ದಾಖಲಾಗುವ ಬದಲು ನಾನು ಇಲ್ಲಿಯೇ ಇರುತ್ತೇನೆ," ಎಂದು ಹೇಳಿದ್ದಾರೆ. ಹಾಗೆಯೇ ಮಧ್ಯಂತರ ಜಾಮೀನು ನೀಡುವಂತೆ ಬಾಂಬೆ ಹೈಕೋರ್ಟ್‌ಗೆ ಮನವಿ ಮಾಡಿದ್ದರು.

''ನಾನು ನನ್ನ ಕೊನೆಯ ಸಂದರ್ಭದಲ್ಲಿ ರಾಂಚಿಯಲ್ಲಿರಲು ಬಯಸುತ್ತೇನೆ. ಈಗ ನನ್ನನ್ನು ಆಸ್ಪತ್ರೆಗೆ ದಾಖಲು ಮಾಡುವುದರಿಂದ ಏನೂ ಪ್ರಯೋಜನವಾಗದು ಎಂದು ನನಗನಿಸುತ್ತಿದೆ. ನಿಧಾನವಾಗಿ ನನ್ನ ಸ್ಥಿತಿ ಶೋಚನೀಯವಾಗುತ್ತಿದೆ. ಎಂಟು ತಿಂಗಳ ಹಿಂದೆ ನಾನು ನನ್ನ ಕೆಲವು ಕೆಲಸಗಳನ್ನಾದರೂ ಮಾಡುತ್ತಿದೆ. ಊಟ ಮಾಡುತ್ತಿದ್ದೆ, ಸ್ವಲ್ಪ ಬರೆಯುತ್ತಿದ್ದೆ, ನಡೆದಾಡುತ್ತಿದ್ದೆ, ಯಾರ ಸಹಾಯ ಪಡೆಯದೆಯೇ ಸ್ನಾನ ಮಾಡುತ್ತಿದ್ದೆ, ಆದರೆ ಈಗ ಪರಿಸ್ಥಿತಿ ಬಿಗಾಡಯಿಸಿದೆ. ನನಗೆ ಬರೆಯಲು ನಡೆದಾಡಲು ಕೂಡ ಸಾಧ್ಯವಿಲ್ಲದ ಸ್ಥಿತಿಯಲ್ಲಿ ನಾನು ಇದ್ದೇನೆ. ಆಹಾರವನ್ನೂ ಯಾರಾದರು ತಿನ್ನಿಸಬೇಕಾಗಿದೆ. ಹೀಗಿರುವಾಗ ನಾನು ರಾಂಚಿಯಲ್ಲಿರಲು ಬಯಸುತ್ತೇನೆ. ನನಗೆ ಜಾಮೀನು ನೀಡಿ,'' ಎಂದು ಮನವಿ ಮಾಡಿದ್ದರು.

(ಒನ್‌ಇಂಡಿಯಾ ಸುದ್ದಿ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+