Breaking News: ಭೂ ಹಗರಣ: ಸಂಸದ ಸಂಜಯ್ ರಾವತ್‌ಗೆ ಇಡಿ ಸಮನ್ಸ್
ಮುಂಬೈ, ಜೂನ್ 27: ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ವಿಕಾಸ್ ಅಘಾಡಿ ಸರ್ಕಾರದ ಬುಡ ಅಲ್ಲಾಡುತ್ತಿರುವ ವೇಳೆಯಲ್ಲಿ ಉದ್ಧವ್ ಜೊತೆ ನಿಂತಿರುವ ಸಂಸದ ಸಂಜಯ್ ರಾವತ್‌ಗೆ ಆಘಾತ ಎದುರಾಗಿದೆ. ಎಚ್‌ಡಿಐಎಲ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ರಾವತ್‌ಗೆ ಸಮನ್ಸ್ ನೀಡಲಾಗಿದೆ. ರಾವತ್‌ಗೆ ಮಂಗಳವಾರ ಸಮನ್ಸ್ ನೀಡಲಾಗಿದೆ.
ಭೂ ಹಗರಣ ಪ್ರಕರಣದಲ್ಲಿ ಶಿವಸೇನೆ ಮುಖಂಡ ಸಂಜಯ್ ರಾವತ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದೆ. ಮಂಗಳವಾರ ಏಜೆನ್ಸಿಯ ಮುಂಬೈ ಕಚೇರಿಗೆ ಬೆಳಗ್ಗೆ 11ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಶಿವಸೇನೆಯ ರಾಜ್ಯಸಭಾ ಸಂಸದರಿಗೆ ಸಮನ್ಸ್ ನೀಡಲಾಗಿರುವ ಸುದ್ದಿಯನ್ನು ಇಡಿ ಜಂಟಿ ನಿರ್ದೇಶಕ ಸತ್ಯವ್ರತ್ ಕುಮಾರ್ ಖಚಿತಪಡಿಸಿದ್ದಾರೆ.
ಪತ್ರಾ ಚಾಲ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ಪ್ರವೀಣ್ ರಾವತ್ ಅವರಿಗೂ ಸಮನ್ಸ್ ಜಾರಿ ಮಾಡಲಾಗಿದೆ. ರಾವತ್ ಮತ್ತು ಅವರ ಕುಟುಂಬ ಸದಸ್ಯರಿಗೆ ಸಂಬಂಧಿಸಿದ ಕೆಲವು ಆಸ್ತಿಗಳನ್ನು ಸಂಸ್ಥೆಯು ಈ ಹಿಂದೆ ಜಪ್ತಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.
ಸಂಜಯ್ ಟ್ವೀಟ್ ಪ್ರತಿಕ್ರಿಯೆ: ಇಡಿ ನನಗೆ ಸಮನ್ಸ್ ಕಳುಹಿಸಿದೆ. ನಾವೆಲ್ಲರೂ ಬಾಳಾಸಾಹೇಬರ ಶಿವಸೈನಿಕರು, ಬಂಡಾಯಗಾರರ ಬಳಿಗೆ ಹೋಗಿ ಅವರನ್ನು ಕರೆ ತರಲು ಯತ್ನಿಸಲಿಲ್ಲ, ಸಂಧಾನ ಸಾಧ್ಯವಾಗದಿದ್ದಾಗ ಈ ರೀತಿ ಮಾರ್ಗ ನಿರೀಕ್ಷಿತ ಎಂಬರ್ಥದಲ್ಲಿ ಟ್ವೀಟ್ ಮಾಡಿ ಜೈ ಮಹಾರಾಷ್ಟ್ರ! ಎಂದಿದ್ದಾರೆ. ಜೊತೆಗೆ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಟ್ವೀಟ್ ಖಾತೆಗೆ ಟ್ಯಾಗ್ ಮಾಡಿದ್ದಾರೆ.

ಏನಿದು ಹಗರಣ?: ಪತ್ರಾ ಚಾವ್ಲ್ ಭೂ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ, ಪ್ರವೀಣ್ ರಾವತ್ ಅವರು 55 ಕೋಟಿ ರೂ ಮೊತ್ತದ ಹಣವನ್ನು ತಮ್ಮ ಪತ್ನಿಯ ಖಾತೆಯಿಂದ ಸಂಜಯ್ ರಾವತ್ ಅವರ ಪತ್ನಿ ವರ್ಷಾ ಖಾತೆಗೆ ವರ್ಗಾವಣೆ ಮಾಡಿದ್ದನ್ನು ಪತ್ತೆ ಹಚ್ಚಿತ್ತು. ಈ ಹಣ ವರ್ಗಾವಣೆ ಮೂಲಕ ಅಲಿಬಾಗ್‌ನಲ್ಲಿ ಭೂಮಿ ಖರೀದಿ ಮಾಡಲಾಗಿದೆ. 2010 ಮತ್ತು 2012ರ ನಡುವೆ ಭಾರಿ ಪ್ರಮಾಣದಲ್ಲಿ ನಗದು ಪಾವತಿಗಳನ್ನು ನಡೆಸಲಾಗಿದೆ ಎಂದು ಇ.ಡಿ ಹೇಳಿದೆ. ಸಂಜಯ್ ರಾವತ್ ಪತ್ನಿಗೆ ಪ್ರವೀಣ್ ರಾವತ್ ಪತ್ನಿ 55 ಲಕ್ಷ ರೂ ಸಾಲ ಕೂಡ ನೀಡಿದ್ದಾರೆ ಎಂದು ಆರೋಪಿಸಿದೆ.
मला आताचा समजले ED ने मला समन्स पाठवले आहे.छान.महाराष्ट्रात मोठ्या घडामोडी सुरू आहेत. आम्ही सगळे बाळासाहेबांचे शिवसैनिक मोठ्या लढाईत उतरलो आहोतमला रोखण्यासाठी..हे कारस्थान सुरू आहे.माझी मान कापली तरी मी गुहातीचा मार्ग स्विकारणार नाही.या..मला अटक करा!
— Sanjay Raut (@rautsanjay61) June 27, 2022
जय महाराष्ट्र!@Dev_Fadnavis pic.twitter.com/jA1QcvzP7a
ಪ್ರವೀಣ್ ರಾವತ್ ಜತೆಗೆ ಎಚ್‌ಡಿಐಎಲ್‌ನ ಸಾರಂಗ್ ವಧಾವನ್ ಮತ್ತು ರಾಕೇಶ್ ವಧಾವನ್, ಗುರು ಆಶಿಶ್ ಕನ್‌ಸ್ಟ್ರಕ್ಷನ್ ರಿಯಲ್ ಎಸ್ಟೇಟ್ ಸಂಸ್ಥೆ ಹಾಗೂ ಇತರರನ್ನು ಕೂಡ ಆರೋಪಪಟ್ಟಿಯಲ್ಲಿ ಇ.ಡಿ ಹೆಸರಿಸಿದೆ. ಪ್ರವೀಣ್ ಅವರನ್ನು ಫೆಬ್ರವರಿ 2ರಂದು ಇ.ಡಿ ಬಂಧಿಸಿತ್ತು. ಗೋರೆಗಾಂವ್‌ನಲ್ಲಿನ ಪತ್ರಾ ಚಾವ್ಲ್‌ನಲ್ಲಿ 11.15 ಕೋಟಿ ರೂ ಮೊತ್ತದ ಫ್ಲೂರ್ ಸ್ಪೇಸ್ ಇಂಡೆಕ್ಸ್ (ಎಫ್‌ಎಸ್‌ಐ) ನಿರ್ಮಾಣದಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು.
ಮಹಾರಾಷ್ಟ್ರ ಹೌಸಿಂಗ್ ಆಂಡ್ ಏರಿಯಾ ಡೆವಲಪ್‌ಮೆಂಟ್ ಅಥಾರಿಟಿ ಕೆಲವು ವರ್ಷಗಳ ಹಿಂದೆ ಮುಂಬಯಿಯ ಉಪ ನಗರ ಗೋರೆಗಾಂವ್ ಪಶ್ಚಿಮದಲ್ಲಿನ ಪತ್ರಾ ಚಾವ್ಲ್ ಎಂಬಲ್ಲಿ ಮರು ಅಭಿವೃದ್ಧಿಗೆ ಗುರು ಆಶಿಶ್ ಕನ್‌ಸ್ಟ್ರಕ್ಷನ್ ಸಂಸ್ಥೆಗೆ ಗುತ್ತಿಗೆ ನೀಡಿತ್ತು.
ಎಂಎಚ್‌ಎಡಿಎ ಮತ್ತು ಎಚ್‌ಡಿಐಎಲ್ ನಡುವಿನ ವ್ಯವಹಾರದಲ್ಲಿ ಪ್ರವೀಣ್ ರಾವತ್ ಮಧ್ಯಸ್ಥಿಕೆ ವಹಿಸಿದ್ದರು. ಚಾವ್ಲ್‌ನಲ್ಲಿ ವಾಸಿಸುವ ಜನರಿಗೆ ಕಡ್ಡಾಯ ವಠಾರಗಳನ್ನು ನಿರ್ಮಿಸದೆಯೇ 11.15 ಕೋಟಿ ರೂಪಾಯಿ ಮೌಲ್ಯದ ಎಫ್‌ಎಸ್‌ಐ ಅನ್ನು ಕಂಪೆನಿಯು ಮಾರಾಟ ಮಾಡಿ ವಂಚಿಸಿದೆ ಎಂದು ಇ.ಡಿ ಆರೋಪ ಮಾಡಿದೆ.
ತಮ್ಮ ಆಸ್ತಿಗಳ ಮುಟ್ಟುಗೋಲು ಕ್ರಮದ ಬಗ್ಗೆ ಮಾಹಿತಿ ಹೊರಬೀಳುತ್ತಿದ್ದಂತೆಯೇ ಸಂಜಯ್ ರಾವತ್ ಅವರು, 'ಅಸತ್ಯಮೇವ ಜಯತೇ' ಎಂದು ಟ್ವೀಟ್ ಮಾಡುವ ಮೂಲಕ ಜಾರಿ ನಿರ್ದೇಶನಾಲಯದ ವಿರುದ್ಧ ಕಿಡಿಕಾರಿದ್ದರು. ಜಾರಿ ನಿರ್ದೇಶನಾಲಯ, ಸಿಬಿಐ ಸೇರಿದಂತೆ ಕೇಂದ್ರ ಸಂಸ್ಥೆಗಳನ್ನು ಆಡಳಿತಾರೂಢ ಬಿಜೆಪಿ ಸರ್ಕಾರ, ತನ್ನ ವಿರುದ್ಧ ಧ್ವನಿ ಎತ್ತುವವರ ಮೇಲೆ ಬಳಸಿಕೊಳ್ಳುತ್ತಿದೆ ಎಂದು ನಿರಂತರವಾಗಿ ಆರೋಪಿಸುತ್ತಾ ಬಂದಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications