ಐಸಿಐಸಿಐ ಮಾಜಿ ಸಿಇಒ ಚಂದಾ ಕೊಚ್ಚಾರ್ ಮನೆ ಮೇಲೆ 'ಇಡಿ' ದಾಳಿ
ಮುಂಬೈ, ಮಾರ್ಚ್ 01: ಐಸಿಐಸಿಐ ಬ್ಯಾಂಕ್-ವಿಡಿಯೋಕಾನ್ ಹಗರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಿನ ಮಾಜಿ ಎಂಡಿ ಮತ್ತು ಸಿಇಒ ಚಂದಾ ಕೊಚ್ಚಾರ್ ಅವರ ಮನೆ ಹಾಗೂ ಕಚೇರಿ ಮೇಲೆ ಶುಕ್ರವಾರದಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಚಂದಾ ಕೊಚ್ಚಾರ್ ವಿರುದ್ಧ ಈಗಾಗಲೇ ಲುಕ್ ಔಟ್ ನೋಟಿಸ್(LOC) ಹೊರಡಿಸಲಾಗಿದೆ. ಚಂದಾ ಕೊಚ್ಚಾರ್, ಅವರ ಪತಿ ದೀಪಕ್ ಕೊಚ್ಚಾರ್ ಹಾಗೂ ವಿಡಿಯೋಕಾನ್ ವ್ಯವಸ್ಥಾಪಕ ನಿರ್ದೇಶಕ ವೇಣುಗೋಪಾಲ್ ಧೂತ್ ವಿರುದ್ಧ ಸಿಬಿಐನಿಂದ ಲುಕ್ ಔಟ್ ಸರ್ಕ್ಯುಲರ್ ನೀಡಲಾಗಿದೆ ಎಂದು ಎಎನ್ಐ ವರದಿ ಮಾಡಿದೆ.
ವೇಣುಗೋಪಾಲ್ ಧೂತ್,ದೀಪಕ್ ಕೊಚ್ಚಾರ್ ಹಾಗೂ ಇನ್ನಿತರರ ವಿರುದ್ಧ ಕಳೆದ ವರ್ಷ ಮಾರ್ಚ್ ತಿಂಗಳಿನಲ್ಲಿ ತನಿಖಾ ಸಂಸ್ಥೆಯು ಪ್ರಕರಣ ದಾಖಲಿಸಿಕೊಂಡಿತ್ತು. ಇದೀಗ ಎಲ್ಲರ ಮನೆ ಹಾಗೂ ಕಚೇರಿ ಮೇಲೆ ಜಾರಿ ನಿರ್ದೇಶನಾಲಯವು ದಾಳಿ ನಡೆಸಿದೆ. ಇನ್ನೊಂದೆಡೆ ಈ ಎಲ್ಲಾ ಆರೋಪಿಗಳ ವಿರುದ್ಧ ಎಫ್ಐಆರ್ ಹಾಕಿರುವ ಸಿಬಿಐ, ತನಿಖೆಯನ್ನು ಚುರುಕುಗೊಳಿಸಿತ್ತು.

ಈ ಹಿಂದೆ ವಿಡಿಯೋಕಾನ್ ನ ಮುಂಬೈ ಹಾಗೂ ಔರಂಗಾಬಾದ್ ನ ಕಚೇರಿ ಹಾಗೂ ಐಸಿಐಸಿಐನ ಮಾಜಿ ಸಿಇಒ ಚಂದಾ ಕೊಚ್ಚರ್ ಅವರ ಪತಿ ದೀಪಕ್ ಕೊಚರ್ ಅವರ ನುಪವರ್ ಕಚೇರಿ ಮೇಲೂ ದಾಳಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ
ಚಂದಾ ಕೊಚ್ಚಾರ್ ಅಧಿಕಾರದಲ್ಲಿ ಇದ್ದ ಸಮುಯದಲ್ಲಿ ಐಸಿಐಸಿಐ ಬ್ಯಾಂಕ್ ಮೂಲಕ ಅವ್ಯವಹಾರ ನಡೆದಿದೆ ಎಂದು ಕಳೆದ ಮಾರ್ಚ್ ನಲ್ಲಿ ಮೊದಲ ಬಾರಿಗೆ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಚಂದಾ ಕೊಚ್ಚರ್, 2018 ರ ಅಕ್ಟೋಬರ್ನಲ್ಲಿ ಸಿಇಒ ಹುದ್ದೆಯಿಂದ ಕೆಳಗಿಳಿದಿದ್ದರು. ಬ್ಯಾಂಕ್ ನ ನಿಯಮಗಳನ್ನು ಉಲ್ಲಂಘಿಸಿ ವಿಡಿಯೋಕಾನ್ ಗ್ರೂಪ್ ಗೆ ಸುಮಾರು 3250 ಕೋಟಿ ರೂ.ಸಾಲ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಅವ್ಯವಹಾರದ ಹಗರಣ ಇದಾಗಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications