ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಐಸಿಐಸಿಐ ಮಾಜಿ ಸಿಇಒ ಚಂದಾ ಕೊಚ್ಚಾರ್ ಮನೆ ಮೇಲೆ 'ಇಡಿ' ದಾಳಿ

|
Google Oneindia Kannada News

ಮುಂಬೈ, ಮಾರ್ಚ್ 01: ಐಸಿಐಸಿಐ ಬ್ಯಾಂಕ್-ವಿಡಿಯೋಕಾನ್ ಹಗರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಿನ ಮಾಜಿ ಎಂಡಿ ಮತ್ತು ಸಿಇಒ ಚಂದಾ ಕೊಚ್ಚಾರ್ ಅವರ ಮನೆ ಹಾಗೂ ಕಚೇರಿ ಮೇಲೆ ಶುಕ್ರವಾರದಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಐಸಿಐಸಿಐ-ವಿಡಿಯೋಕಾನ್ ಕೇಸ್ : ಚಂದಾ ಕೊಚ್ಚರ್ ಗೆ ಲುಕ್ ಔಟ್ ನೋಟಿಸ್ಐಸಿಐಸಿಐ-ವಿಡಿಯೋಕಾನ್ ಕೇಸ್ : ಚಂದಾ ಕೊಚ್ಚರ್ ಗೆ ಲುಕ್ ಔಟ್ ನೋಟಿಸ್

ಚಂದಾ ಕೊಚ್ಚಾರ್ ವಿರುದ್ಧ ಈಗಾಗಲೇ ಲುಕ್ ಔಟ್ ನೋಟಿಸ್(LOC) ಹೊರಡಿಸಲಾಗಿದೆ. ಚಂದಾ ಕೊಚ್ಚಾರ್, ಅವರ ಪತಿ ದೀಪಕ್ ಕೊಚ್ಚಾರ್ ಹಾಗೂ ವಿಡಿಯೋಕಾನ್ ವ್ಯವಸ್ಥಾಪಕ ನಿರ್ದೇಶಕ ವೇಣುಗೋಪಾಲ್ ಧೂತ್ ವಿರುದ್ಧ ಸಿಬಿಐನಿಂದ ಲುಕ್ ಔಟ್ ಸರ್ಕ್ಯುಲರ್ ನೀಡಲಾಗಿದೆ ಎಂದು ಎಎನ್ಐ ವರದಿ ಮಾಡಿದೆ.

ಐಸಿಐಸಿಐ-ವಿಡಿಯೋಕಾನ್ ವಿವಾದ: ಸೇವೆಯಿಂದ ಚಂದಾ ಕೊಚ್ಚಾರ್ ವಜಾಐಸಿಐಸಿಐ-ವಿಡಿಯೋಕಾನ್ ವಿವಾದ: ಸೇವೆಯಿಂದ ಚಂದಾ ಕೊಚ್ಚಾರ್ ವಜಾ

ವೇಣುಗೋಪಾಲ್ ಧೂತ್,ದೀಪಕ್ ಕೊಚ್ಚಾರ್ ಹಾಗೂ ಇನ್ನಿತರರ ವಿರುದ್ಧ ಕಳೆದ ವರ್ಷ ಮಾರ್ಚ್ ತಿಂಗಳಿನಲ್ಲಿ ತನಿಖಾ ಸಂಸ್ಥೆಯು ಪ್ರಕರಣ ದಾಖಲಿಸಿಕೊಂಡಿತ್ತು. ಇದೀಗ ಎಲ್ಲರ ಮನೆ ಹಾಗೂ ಕಚೇರಿ ಮೇಲೆ ಜಾರಿ ನಿರ್ದೇಶನಾಲಯವು ದಾಳಿ ನಡೆಸಿದೆ. ಇನ್ನೊಂದೆಡೆ ಈ ಎಲ್ಲಾ ಆರೋಪಿಗಳ ವಿರುದ್ಧ ಎಫ್ಐಆರ್ ಹಾಕಿರುವ ಸಿಬಿಐ, ತನಿಖೆಯನ್ನು ಚುರುಕುಗೊಳಿಸಿತ್ತು.

Enforcement Directorate raid ICICI-Videocon case accused

ಈ ಹಿಂದೆ ವಿಡಿಯೋಕಾನ್ ನ ಮುಂಬೈ ಹಾಗೂ ಔರಂಗಾಬಾದ್ ನ ಕಚೇರಿ ಹಾಗೂ ಐಸಿಐಸಿಐನ ಮಾಜಿ ಸಿಇಒ ಚಂದಾ ಕೊಚ್ಚರ್ ಅವರ ಪತಿ ದೀಪಕ್ ಕೊಚರ್ ಅವರ ನುಪವರ್ ಕಚೇರಿ ಮೇಲೂ ದಾಳಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ

ಚಂದಾ ಕೊಚ್ಚರ್ ಮೇಲೆ ಎಫ್ಐಆರ್ ಹಾಕಿದ ಸಿಬಿಐ ಅಧಿಕಾರಿ ವರ್ಗ ಚಂದಾ ಕೊಚ್ಚರ್ ಮೇಲೆ ಎಫ್ಐಆರ್ ಹಾಕಿದ ಸಿಬಿಐ ಅಧಿಕಾರಿ ವರ್ಗ

ಚಂದಾ ಕೊಚ್ಚಾರ್ ಅಧಿಕಾರದಲ್ಲಿ ಇದ್ದ ಸಮುಯದಲ್ಲಿ ಐಸಿಐಸಿಐ ಬ್ಯಾಂಕ್ ಮೂಲಕ ಅವ್ಯವಹಾರ ನಡೆದಿದೆ ಎಂದು ಕಳೆದ ಮಾರ್ಚ್ ನಲ್ಲಿ ಮೊದಲ ಬಾರಿಗೆ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಚಂದಾ ಕೊಚ್ಚರ್, 2018 ರ ಅಕ್ಟೋಬರ್‌ನಲ್ಲಿ ಸಿಇಒ ಹುದ್ದೆಯಿಂದ ಕೆಳಗಿಳಿದಿದ್ದರು. ಬ್ಯಾಂಕ್ ನ ನಿಯಮಗಳನ್ನು ಉಲ್ಲಂಘಿಸಿ ವಿಡಿಯೋಕಾನ್ ಗ್ರೂಪ್ ಗೆ ಸುಮಾರು 3250 ಕೋಟಿ ರೂ.ಸಾಲ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಅವ್ಯವಹಾರದ ಹಗರಣ ಇದಾಗಿದೆ.

English summary
Mumbai: An Enforcement Directorate raid is underway at the premises of the suspect and accused of ICICI-Videocon case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X