ಸರ್ಜಿಕಲ್ ಸ್ಟ್ರೈಕ್ ಮಾತ್ರವಲ್ಲ; ಇಡೀ ಮೋದಿ ಸರ್ಕಾರವೇ ಫೇಕು: ನಿರುಪಮ್
ಮುಂಬೈ, ಜೂನ್ 28: ಸರ್ಜಿಕಲ್ ಸ್ಟ್ರೈಕ್‌ನ ವಿಡಿಯೋ ಬಿಡುಗಡೆಯಾಗುತ್ತಿದ್ದಂತೆಯೇ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್, ಸರ್ಜಿಕಲ್ ಸ್ಟ್ರೈಕ್ ಮಾತ್ರವಲ್ಲ, ಸಂಪೂರ್ಣ ಎನ್‌ಡಿಎ ಸರ್ಕಾರವೇ ನಕಲಿಯಾಗಿದೆ ಎಂದು ಆರೋಪಿಸಿದ್ದಾರೆ.
ಮುಂಬೈನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿರುಪಮ್, ಸರ್ಜಿಕಲ್ ಸ್ಟ್ರೈಕ್ ಮಾತ್ರವಲ್ಲ, ಇಡೀ ಮೋದಿ ಸರ್ಕಾರವೇ ನಕಲಿ. ಪ್ರಧಾನಿ ಮೋದಿ ಅವರು ಅತ್ಯಂತ ದೊಡ್ಡ ನಕಲಿ ವ್ಯಕ್ತಿ ಎಂದು ಟೀಕಿಸಿದ್ದಾರೆ.
2018ರಲ್ಲಿ ಮುಂಬೈಗೆ ಬರುವ ಮೋದಿ ಅವರು 1975ರ ತುರ್ತು ಪರಿಸ್ಥಿತಿ ಬಗ್ಗೆ ಮಾತನಾಡುತ್ತಾರೆ, ಆದರೆ 2018ರ ಕುರಿತು ಮಾತನಾಡುವುದಿಲ್ಲ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದಲ್ಲಿ ಭಾಗಿಯಾದ ಆರೋಪಿಗಳಾದ ನೀರವ್ ಮೋದಿ ಹಾಗೂ ಮೆಹುಲ್ ಚೋಕ್ಸಿ ಅವರ ಕುರಿತು ಪ್ರಧಾನಿ ಸೊಲ್ಲೆತ್ತದ ಬಗ್ಗೆ ಅವರು ಕಿಡಿಕಾರಿದ್ದಾರೆ.
ಅವರು ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ಕುರಿತು ತುಟಿಬಿಚ್ಚುವುದಿಲ್ಲ. ಅವರ ಆಡಳಿತಾವಧಿಯಲ್ಲಿ ಸೈನಿಕರು, ರೈತರನ್ನು ಕೊಲ್ಲಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಅವರ ವಿದ್ಯಾರ್ಥಿವೇತನ ಸಿಗುತ್ತಿಲ್ಲ. ಅವುಗಳ ಬಗ್ಗೆ ಅವರು ಮಾತನಾಡುತ್ತಿಲ್ಲ ಎಂದು ಆರೋಪಿಸಿದರು.












Click it and Unblock the Notifications