ಮುಂಬೈ: ಮಾರಕಾಸ್ತ್ರಗಳಿಂದ ಇರಿದು ಶಿವಸೇನೆ ಮುಖ್ಯಸ್ಥನ ಹತ್ಯೆ
ಮುಂಬೈ, ಜನವರಿ 8: ಶಿವಸೇನೆ ಮುಖ್ಯಸ್ಥ, ಮಾಜಿ ಕಾರ್ಪೋರೇಟರ್ ಅಶೋಕ್ ಸಾವಂತ್(62) ಅವರನ್ನು ಇಬ್ಬರು ದುಷ್ಕರ್ಮಿಗಳು ಅವರ ಮನೆಯ ಮುಂದೆಯೇ ಇರಿದು ಸಾಯಿಸಿದ ಘಟನೆ ಮಹಾರಾಷ್ಟ್ರದ ಕಾಂಡಿವಾಲಿ ಎಂಬಲ್ಲಿ ನಡೆದಿದೆ.
ಜನವರಿ 7 ರಂದು ರಾತ್ರಿ ಸ್ನೇಹಿತನನ್ನು ಭೇಟಿ ಮಾಡಿ ಅವರು ಮನೆಗೆ ವಾಪಸಾಗುತ್ತಿದ್ದ ವೇಳೆಯಲ್ಲಿ ಘಟನೆ ಸಂಭವಿಸಿದೆ.
ಶಿವಸೇನೆಯಿಂದ ಎರಡು ಬಾರಿ ಸಮ್ತಾ ನಗರದ ಕಾರ್ಪೋರೇಟರ್ ಆಗಿ ಆಯ್ಕೆಯಾಗಿದ್ದ ಅಶೋಕ್ ಅವರ ಕೊಲೆಗೆ ರಾಜಕೀಯ ದ್ವೇಷವೇ ಕಾರಣವಿದ್ದೀತು ಎಂದು ಶಂಕಿಸಲಾಗಿದೆ.

ದುಷ್ಕರ್ಮಿಗಳ ಗುರುತು ಪತ್ತೆಯಾಗಿಲ್ಲ. ಅವರನ್ನು ಮಾರಕಾಸ್ತ್ರಗಳಿಂದ ಚುಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು ನಾಪತ್ತೆಯಾಗಿದ್ದಾರೆ. ಘಟನೆಯ ನಂತರ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಶೋಕ್ ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಸೇರಿಸಲಾಯಿತಾದರೂ, ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆಂದು ವೈದ್ಯರು ಹೇಳಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.












Click it and Unblock the Notifications