• search
  • Live TV
ಮುಂಬೈ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಾರ್ಖಾನೆಯಲ್ಲಿ ಭಾರಿ ಸ್ಫೋಟ: 20 ಮಂದಿ ದುರ್ಮರಣ

|

ಮುಂಬೈ, ಆಗಸ್ಟ್ 31: ಮಹಾರಾಷ್ಟ್ರದ ಧುಲೆ ಸಮೀಪದ ಶಿರಾಪುರದಲ್ಲಿ ರಾಸಾಯನಿಕ ಕಾರ್ಖಾನೆಯಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ 20 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಘಟನೆಯಲ್ಲಿ 22ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.

ಸ್ಫೋಟದೊಂದಿಗೆ ಬೆಂಕಿಯ ಜ್ವಾಲೆ ಇಡೀ ಕಾರ್ಖಾನೆಯನ್ನು ಆವರಿಸಿದೆ. ಕಾರ್ಖಾನೆಯೊಳಗೆ ಇನ್ನೂ 70ಕ್ಕೂ ಅಧಿಕ ಮಂದಿ ಸಿಲುಕಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಸಾವು ನೋವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ.

ವಾಘಾಡಿ ಗ್ರಾಮದ ರಾಸಾಯನಿಕ ಕಾರ್ಖಾನೆಯಲ್ಲಿ ಬೆಳಿಗ್ಗೆ 9.45ರ ಸುಮಾರಿಗೆ ಸಿಲಿಂಡರ್‌ಗಳು ಸ್ಫೋಟಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ಖಾನೆಯಲ್ಲಿ ಕನಿಷ್ಠ 100 ಮಂದಿ ಕೆಲಸಗಾರರು ಇದ್ದರು ಎನ್ನಲಾಗಿದೆ. ಸಿಲಿಂಡರ್‌ಒಂದು ಸ್ಫೋಟಗೊಂಡ ಪರಿಣಾಮ ಉಳಿದ ಸಿಲಿಂಡರ್‌ಗಳೂ ಸರಣಿ ಸ್ಫೋಟಗೊಂಡು ಈ ಘಟನೆ ಸಂಭವಿಸಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿರುವುದಾಗಿ ಪೊಲೀಸರು ಹೇಳಿದ್ದಾರೆ.

English summary
Many people were dead and injured in an explosion in Chemical factory near Dhule, Maharashtra on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X