FACT CHECK: ನಾಗ್ಪುರದಲ್ಲಿ 59 ಕೊರೊನಾ ಕೇಸ್, ಆ ಆಡಿಯೋ ಸತ್ಯವೇನು?
ಮುಂಬೈ, ಮಾರ್ಚ್ 26: ನಾಗ್ಪುರದಲ್ಲಿ ಇದುವರೆಗೂ ಒಟ್ಟು 59 ಕೊರೊನಾ ಕೇಸ್ಗಳು ದೃಢಪಟ್ಟಿದೆ. ಅದರಲ್ಲಿ ಮೂರು ಜನ ವೈದ್ಯರು ಸೇರಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ. ಈ ಕುರಿತು ಆಡಿಯೋ ಕ್ಲಿಪ್ವೊಂದು ಹರಿದಾಡುತ್ತಿದೆ.
ಆದರೆ, ಈ ಸುದ್ದಿ ಸುಳ್ಳು ಎಂದು ಪಿಐಬಿ ( Press Information Bureau) ಖಚಿತ ಪಡಿಸಿದೆ. ನಾಗ್ಪುರದಲ್ಲಿ 59 ಕೇಸ್ ಪಾಸಿಟಿವ್ ಆಗಿದೆ ಎಂದು ಆಡಿಯೋವೊಂದು ವೈರಲ್ ಆಗಿದೆ. ಅದು ಸುಳ್ಳು ಸುದ್ದಿ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಇಂತಹ ಆಡಿಯೋಗಳನ್ನು ಹರಿಡಿಸಬೇಡಿ ಎಂದು ಪಿಐಬಿ ಮನವಿ ಮಾಡಿದೆ.
An audio clip is circulating on social media claiming that Nagpur has tested 59 positive coronavirus cases including 3 doctors
— PIB Fact Check (@PIBFactCheck) March 26, 2020
The assertion made in the audio is #FAKE.
Please DO NOT forward such fake audio clips. pic.twitter.com/u29ROXWaf0
ನಾಗ್ಪುರದಲ್ಲಿ ಕೊರೊನಾ ವಿರುದ್ಧ ಜಾಗೃತಿ ಮೂಡಿಸಲು ಡೋರ್ ಟು ಡೋರ್ ಸಮೀಕ್ಷೆ ಮಾಡಲು ಮುಂದಾಗಿದೆ. ಮಾರ್ಚ್ 26 ರಿಂದ ಮನೆ ಮನೆಯ ಬಳಿ ಹೋಗಿ ಯಾರಾದರೂ ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಸಮೀಕ್ಷೆ ಮಾಡಲಾಗುವುದು. ಒಂದು ವೇಳೆ ಹೋಮ್ ಕ್ವಾರೆಂಟೈನ್ನಲ್ಲಿ ಯಾರಾದರೂ ಇದ್ದರೆ, ಅವರಿಗೆ ಸೂಕ್ತ ಸಲಹೆಗಳನ್ನು ನೀಡಲು ಸರ್ಕಾರದ ವತಿಯಿಂದ ಕೈಗೊಳ್ಳಲಾಗುತ್ತಿದೆ.
ಇದುವರೆಗೂ ನಾಗ್ಪುರದಲ್ಲಿ ನಾಲ್ಕು ಕೊರೊನಾ ಪಾಸಿಟಿವ್ ಕೇಸ್ ದೃಢಪಟ್ಟಿದೆ. 162 ಜನರು ಐಸೋಲೇಶನ್ ವಾರ್ಡ್ನಲ್ಲಿದ್ದು, ಅವರ ಮೇಲೆ ತೀವ್ರ ನಿಗಾವಹಿಸಲಾಗಿದೆ. ಇನ್ನು 658 ಜನರ ಮೇಲೆ ನಿಗಾವಹಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಒಟ್ಟು 125 ಜನರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಭಾರತದಲ್ಲಿ 693 ಜನರಲ್ಲೊ ಕೋವಿಡ್ 19 ಪತ್ತೆಯಾಗಿದೆ. ಒಟ್ಟು 13 ಜನರು ಸಾವನ್ನಪ್ಪಿದ್ದಾರೆ.
-
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ? -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್












Click it and Unblock the Notifications