ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅತ್ಯಾಚಾರವಾಗಿದೆ ಎಂದು ಸುಳ್ಳು ದೂರು: ಮಹಿಳೆಗೆ 25 ಸಾವಿರ ರೂ ದಂಡ

|
Google Oneindia Kannada News

ಮುಂಬೈ, ಆಗಸ್ಟ್ 26: ತನ್ನ ಮೇಲೆ ಅತ್ಯಾಚಾರವಾಗಿದೆ ಎಂದು ಸುಳ್ಳು ದೂರು ನೀಡಿದ್ದ ಮಹಿಳೆಗೆ ಬಾಂಬೆ ಹೈಕೋರ್ಟ್ 25 ಸಾವಿರ ರೂ ದಂಡ ವಿಧಿಸಿದೆ.

ಒಂದೊಮ್ಮೆ ಮಹಿಳೆ ದಂಡ ಪಾವತಿಸದಿದ್ದರೆ ಗೆಳೆಯನ ವಿರುದ್ಧ ಎಫ್‌ಐಆರ್ ರದ್ದುಪಡಿಸಬೇಕೆಂದು ಕೋರಿ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಲಾಗುವುದು ಎಂದೂ ಕೋರ್ಟ್ ಹೇಳಿದೆ.

10 ದಿನಗಳ ಅಂತರದಲ್ಲಿ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ, ಕೊಲೆ 10 ದಿನಗಳ ಅಂತರದಲ್ಲಿ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ, ಕೊಲೆ

ನ್ಯಾಯಮೂರ್ತಿಗಳಾದ ಆರ್‌.ಡಿ. ಧನುಕಾ ಮತ್ತು ವಿ.ಜಿ. ಬಿಶ್ತ್ ಅವರನ್ನೊಳಗೊಂಡ ವಿಭಾಗೀಯ ಪೀಠವು, ಸುಳ್ಳು ದೂರು ನೀಡಿದ್ದ ಮಹಿಳೆಯು ಮಹಾರಾಷ್ಟ್ರ ಪೊಲೀಸ್ ಕಲ್ಯಾಣನಿಧಿಗೆ ನಾಲ್ಕು ವಾರದೊಳಗೆ 25 ಸಾವಿರ ರೂ ದಂಡ ದಂಡ ವಿಧಿಸಿದೆ.

False Rape Complaint: Bombay Hugh Court Fines Woman Rs 25,000

ಪಾಲ್ಗರ್ ಜಿಲ್ಲೆಯ ನಾಲಾಸೊಪರಾ ಪೊಲೀಸ್ ಠಾಣೆಯಲ್ಲಿ ಮಾರ್ಚ್ 16ರಂದು ಮಹಿಳೆಯೊಬ್ಬರು ತನ್ನ ಗೆಳೆಯ ಮಾದಕವಸ್ತು ಸೇವಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಎಫ್‌ಐಆರ್ ದಾಖಲಿಸಿದ್ದರು.

ಆದರೆ, ಜುಲೈ ತಿಂಗಳಲ್ಲಿ ದೂರುದಾರ ಮಹಿಳೆಯು ತನ್ನ ಕುಟುಂಬ ಸದಸ್ಯರ ಒತ್ತಡಕ್ಕೆ ಮಣಿದು, ಗೆಳೆಯನ ವಿರುದ್ಧ ಅತ್ಯಾಚಾರದ ದೂರು ದಾಖಲಿಸಿದ್ದೆ. ಹಾಗಾಗಿ, ಎಫ್‌ಐಆರ್ ಅನ್ನು ರದ್ದುಪಡಿಸಬೇಕೆಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ತಾನು ಗೆಳೆಯನೊಂದಿಗೆ ಸಂಬಂಧ ಹೊಂದಿದ್ದೆ. ಈ ವಿಷಯ ತನ್ನ ಕುಟುಂಬಕ್ಕೆ ತಿಳಿಯುತ್ತಿದ್ದಂತೆಯೇ ತಾನೇ ಗೆಳೆಯನ ವಿರುದ್ಧ ಸುಳ್ಳು ಕಥೆ ಕಟ್ಟಿ, ಅತ್ಯಾಚಾರದ ಆರೋಪ ಹೊರಿಸಿದ್ದೆ ಎಂದು ಮಹಿಳೆ ಅರ್ಜಿಯಲ್ಲಿ ತಿಳಿಸಿದ್ದರು.

ಆದರೆ, ಇದನ್ನು ವಿರೋಧಿಸಿ ಹೆಚ್ಚುವರಿ ಸರ್ಕಾರಿ ಅಭಿಯೋಜಕರಾದ ಅರುಣಾ ಕಾಮತ್ ಪೈ ಅವರು, ಪೊಲೀಸರು ಈ ಸಂಬಂಧ ತನಿಖೆ ನಡೆಸುತ್ತಿದ್ದಾರೆ ಮತ್ತು ಆರೋಪ ಪಟ್ಟಿ ಕೂಡ ಸಲ್ಲಿಸಲಿದ್ದಾರೆ ಎಂದು ಪ್ರತಿಪಾದಿಸಿದರು.

ಒಂದು ವೇಳೆ ಕೋರ್ಟ್ ಎಫ್‌ಐಆರ್ ರದ್ದುಪಡಿಸಲು ಒಲವು ತೋರಿದಲ್ಲಿ ಮಹಿಳೆಗೆ ಭಾರಿ ಮೊತ್ತದ ದಂಡ ವಿಧಿಸಬೇಕೆಂದು ಮನವಿ ಮಾಡಿದ್ದರು. ದೂರುದಾರ ಮಹಿಳೆಯು ಮಹಾರಾಷ್ಟ್ರ ಪೊಲೀಸ್ ಕಲ್ಯಾಣಸಮಿತಿಗೆ ನಾಲ್ಕು ವಾರದೊಳಗೆ 25 ಸಾವಿರ ರೂ. ದಂಡ ಪಾವತಿಸಬೇಕು ಎಂದು ನೀಡಿದೆ.

English summary
The Bombay High Court Imposed a fine of Rs 25 Thousand on a woman for filing a false rape complaint against her boyfrind.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X