ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನನ್ನನ್ನು ಮಹಾರಾಷ್ಟ್ರ ಸಿಎಂ ಮಾಡಿ: ರಾಜ್ಯಪಾಲರಿಗೆ ರೈತನ ಪತ್ರ

|
Google Oneindia Kannada News

ಮುಂಬೈ, ನವೆಂಬರ್ 1: ಬಿಜೆಪಿ-ಶಿವಸೇನೆ ನಡುವಿನ ವೈಮನಸ್ಸು ಸರಿ ಹೋಗುವವರೆಗೆ ನನ್ನನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಮಾಡಿ ಎಂದು ರೈತರೊಬ್ಬರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಇತ್ತೀಚಿಗೆ ವಿಧಾನಸಭೆ ಚುನಾವಣೆ ನಡೆದಿದ್ದು, ಬಿಜೆಪಿ ಮತ್ತು ಶಿವಸೇನೆ ಮೈತ್ರಿಕೂಟವು ಜಯಗಳಿಸಿದೆ. ಆದರೆ ಚುನಾವಣೆ ಮುಗಿದು ಎರಡು ವಾರಗಳು ಕಳೆದರೂ ಸರ್ಕಾರ ರಚನೆ ಮಾಡುವಲ್ಲಿ ಯಾರೂ ಕೂಡ ಆಸಕ್ತಿ ತೋರುತ್ತಿಲ್ಲ.

ಮಹಾರಾಷ್ಟ್ರ ಸಿಎಂ ಹುದ್ದೆಗೆ ಫಡ್ನವಿಸ್, ಠಾಕ್ರೆ ಬಿಟ್ಟು ಹೊಸ ಹೆಸರು!ಮಹಾರಾಷ್ಟ್ರ ಸಿಎಂ ಹುದ್ದೆಗೆ ಫಡ್ನವಿಸ್, ಠಾಕ್ರೆ ಬಿಟ್ಟು ಹೊಸ ಹೆಸರು!

ಈ ಎರಡು ಪಕ್ಷಗಳ ನಡುವೆ ಮುಖ್ಯಮಂತ್ರಿ ಸ್ಥಾನಕ್ಕೆ ಜಟಾಪಟಿ ಆರಂಭವಾಗಿದೆ. ರಾಜ್ಯದಲ್ಲಿ ಪ್ರಕೃತಿ ವಿಕೋಪ, ತೀವ್ರ ಮಳೆಯಿಂದ ರೈತರು ಕಂಗಾಲಾಗಿದ್ದಾರೆ. ರಾಜ್ಯದಲ್ಲಿ ಪರಿಸ್ಥಿತಿ ಹದಗೆಟ್ಟ ಸಮಯದಲ್ಲಿ ಮಿತ್ರಪಕ್ಷಗಳು ಅಧಿಕಾರಕ್ಕಾಗಿ ಕಿತ್ತಾಟ ಮಾಡುತ್ತಿವೆ. ಆದ್ದರಿಂದ ನೀವು ನನಗೆ ಮುಖ್ಯಮಂತ್ರಿ ಸ್ಥಾನವನ್ನು ನೀಡಬೇಕು ಎಂದು ಬರೆಯಲಾಗಿದೆ.

Farmer Asks Governor To Make Him CM Until BJP-Shiv Sena Sort Out

ಕಳೆದ ತಿಂಗಳು ನಡೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಕೂಟ ಬಹುಮತ ಪಡೆದಿದೆ. ಆದರೆ ಈ ಎರಡು ಪಕ್ಷದಲ್ಲೂ ಸಿಎಂ ಗಾದಿಗೆ ಜಟಾಪಟಿ ನಡೆಯುತ್ತಿದ್ದು, ಅವರ ಒಳಜಗಳ ಮುಗಿಯುವ ತನಕ ನಾನೇ ಸಿಎಂ ಆಗುತ್ತೇನೆ ಎಂದು ರೈತರೊಬ್ಬರು ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿಗೆ ಪತ್ರ ಬರೆದಿದ್ದಾರೆ.

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಜ್ ತಾಲೂಕಿನ ವಡಮೌಳಿ ಎಂಬ ಗ್ರಾಮದ ಶ್ರೀಕಂಠ ವಿಷ್ಣು ಗಡಲೆ ರಾಜ್ಯಪಾಲರಿಗೆ ಪತ್ರ ಬರೆದ ರೈತ. ಮೈತ್ರಿಪಕ್ಷಗಳು ಸಿಎಂ ಗಾದಿಗೆ ಕಿತ್ತಾಟ ನಡೆಸುತ್ತಿವೆ.

ಅವರು ಯಾರು ಸಿಎಂ ಆಗಬೇಕು ಎಂದು ತೀರ್ಮಾನ ಮಾಡುವರೆಗೂ ನಾನು ಸಿಎಂ ಆಗುತ್ತೇನೆ ಎಂದು ಪತ್ರ ಬರೆದು ಬೀಡ್ ಜಿಲ್ಲೆಯ ಜಿಲ್ಲಾಧಿಕಾರಿಗೆ ನೀಡಿ ಇದನ್ನು ರಾಜ್ಯಪಾಲರಿಗೆ ತಲುಪಿಸುವಂತೆ ಕೋರಿದ್ದಾರೆ.

ಇದರ ಜೊತೆ ನಾನು ಸಿಎಂ ಆದರೆ ರಾಜ್ಯದ ರೈತರ ಸಮಸ್ಯೆಗಳನ್ನು ಬಗೆಹರಿಸುತ್ತೇನೆ. ಅವರಿಗೆ ನ್ಯಾಯ ಕೊಡಿಸುತ್ತೇನೆ. ಹಾಗಾಗಿ ನನಗೆ ಸಿಎಂ ಸ್ಥಾನ ನೀಡಬೇಕು ಎಂದು ಬರೆದಿದ್ದಾರೆ. ನಮ್ಮ ಪತ್ರವನ್ನು ಗಣನೆಗೆ ತೆಗೆದುಕೊಳ್ಳದೇ ಇದ್ದರೆ, ನಾನು ಇದರ ವಿರುದ್ಧ ಹೋರಾಟ ಮಾಡುತ್ತೇನೆ ಎಂದು ಎಚ್ಚರಿಕೆಯನ್ನು ನೀಡಲಾಗಿದೆ.

English summary
A farmer from Beed district wrote a letter to Governor Bhagat Singh Koshyar, urging to make him the chief minister till the differences are sorted out between the two parties.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X