ಇಡೀ ದೇಶದ ರೈತರೂ ಸಮಸ್ಯೆ ಎದುರಿಸುತ್ತಿದ್ದಾರೆ: ರಾಹುಲ್ ಗಾಂಧಿ
ಮುಂಬೈ, ಮಾರ್ಚ್ 12: "ಕೇವಲ ಮಹಾರಾಷ್ಟ್ರದಲ್ಲಿ ಮಾತ್ರವಲ್ಲ, ಭಾರತದ ಎಲ್ಲಾ ಕಡೆಗಳಲ್ಲೂ ರೈತರು ಸಮಸ್ಯೆ ಎದುರಿಸುತ್ತಿದ್ದಾರೆ" ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಮಹಾರಾಷ್ಟ್ರದ ನಾಸಿಕ್ ನಲ್ಲಿ ಮಾ.5 ರಿಂದ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಸುಮಾರು 30,000 ಕ್ಕೂ ಹೆಚ್ಚು ಜನ ಭಾಗವಹಿಸಿದ್ದು, ಸಂಪೂರ್ಣ ಸಾಲಮನ್ನಾ ಮಾಡುವಂತೆ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ.
ಸಾಲಮನ್ನಕ್ಕೆ ಪರಿಶಿಷ್ಟ ವರ್ಗದವರ ಹಣ ಬಳಕೆ: ಬಿಎಸ್ ವೈ ಆರೋಪ
ಈ ಕುರಿತು ಮಾತನಾಡಿದ ರಾಹುಲ್ ಗಾಂಧಿ, "ಇಡೀ ದೇಶದಲ್ಲೂ ರೈತರು ಪರಿತಪಿಸುತ್ತಿದ್ದಾರೆ, ಇದು ಮಹಾರಾಷ್ಟ್ರವೊಂದರ ಕತೆಯಲ್ಲ. ಇದು ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ" ಎಂದಿದ್ದಾರೆ.

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಕಳೆದ ವರ್ಷ ದೇವೇಂದ್ರ ಫಡ್ನವೀಸ್ ನೇತೃತ್ವದ ಮಹಾರಾಷ್ಟ್ರ ಸರ್ಕಾರ ರೈತರ ಸಾಲಮನ್ನಾಕ್ಕಾಗಿ 4000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿತ್ತು. ಇದೀಗ ಸಾಲಮನ್ನಾ, ವಿದ್ಯುತ್ ಬಿಲ್ ಮನ್ನಾ, ಸ್ವಾಮಿನಾಥನ್ ಆಯೋಗದ ಶಿಫಾರಸ್ಸುಗಳ ಜಾರಿ, ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ, ರೈತರಿಗೆ ಪಿಂಚಣಿ ವ್ಯವಸ್ಥೆ ಇತ್ಯಾದಿ ಬೇಡಿಕೆಗಳನ್ನಿಟ್ಟುಕೊಂಡು ಪ್ರತಿಭಟನೆ ನಡೆಯುತ್ತಿದೆ.
ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !