ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅರ್ನಬ್ ಗೋಸ್ವಾಮಿ ವಿರುದ್ಧ 200 ಕೋಟಿ ರು ಮಾನನಷ್ಟ ಮೊಕದ್ದಮೆ

|
Google Oneindia Kannada News

ನವದೆಹಲಿ, ಅಕ್ಟೋಬರ್.15: ಡ್ರಗ್ಸ್ ಮಾಫಿಯಾ ಪ್ರಕರಣದ ಬಗ್ಗೆ ವರದಿ ಪ್ರಸಾರದ ಭರಾಟೆಯಲ್ಲಿ ಬಾಲಿವುಡ್ ಬಗ್ಗೆ ಅವಹೇಳನಕಾರಿ ಸುದ್ದಿ ಮಾಡಿರುವ ಆರೋಪದಡಿ ರಿಪಬ್ಲಿಕ್ ಸುದ್ದಿ ವಾಹಿನಿಯ ವಿರುದ್ಧ ನಿರ್ಮಾಪಕ ಸಂದೀಪ್ ಸಿಂಗ್ 200 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಕಳೆದ 15 ದಿನಗಳಲ್ಲಿ ಪತ್ರಕರ್ತರ ನೀತಿ ನಿಯಮಗಳನ್ನು ಉಲ್ಲಂಘಿಸಿದ ಅರ್ನಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಸುದ್ದಿ ವಾಹಿನಿಯು ಅದಕ್ಕೆ ತಕ್ಕ ದಂಡವನ್ನು ತೆರಬೇಕಾದ ಸಮಯ ಬಂದಿದೆ ಎಂದು ನೋಟಿಸ್ ನಲ್ಲಿ ಉಲ್ಲೇಖಿಸಿದ್ದಾರೆ.

Filmmaker Sandip Ssingh files A 200 Crore Defamation Suit against Arnab Goswami

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿಗೆ ಮುಂಬೈ ಪೊಲೀಸರಿಂದ ಸಮನ್ಸ್ ಜಾರಿ

"ನಿಮ್ಮ ಮೇಲಿನ ಹೇಳಿಕೆಗಳು, ಚರ್ಚೆಗಳು, ಕಾರ್ಯಕ್ರಮಗಳು, ನಿಮ್ಮ ಟಿವಿ ಚಾನೆಲ್ ಮತ್ತು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ನಡೆಸಲಾದ ಸುದ್ದಿ ಲೇಖನಗಳು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499ರ ಅಡಿಯಲ್ಲಿ ನಾಗರಿಕ ಮತ್ತು ಅಪರಾಧಿ ಇಬ್ಬರಿಗೂ ಮಾನಹಾನಿಯಾಗಿದೆ ಎಂದು ಪ್ರಮುಖ ಅಂಶಗಳಲ್ಲಿ ಉಲ್ಲೇಖಿಸಲಾಗಿದೆ.

View this post on Instagram

It's Payback time @republicworld #Defamation #EnoughIsEnough

A post shared by Sandip Ssingh (@officialsandipssingh) on

ಬೇಜವಾಬ್ದಾರಿ, ಅವಹೇಳನಕಾರಿ ಮತ್ತು ಮಾನಹಾನಿಕರ ಹೇಳಿಕೆಗಳಿಂದ ನಮ್ಮ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಪತ್ರಕರ್ತರ ವಿರುದ್ಧ ಬಾಲಿವುಡ್‌ನ 38 ಜನ ಖ್ಯಾತ ನಿರ್ಮಾಪಕರು ದೆಹಲಿ ಹೈ ಕೋರ್ಟ್‌ನಲ್ಲಿ ಮೊಕದ್ದಮೆ ಹಾಕಿದ್ದಾರೆ. ಈ ಬೆಳವಣಿಗೆಯ ನಂತರ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಬಾಲಿವುಡ್ ವಿರುದ್ಧ ಸಾರ್ವಜನಿಕರು ಕೇಸ್ ದಾಖಲಿಸಬಹುದೇ ಎಂದು ಹೇಳಿರುವ ಟ್ವೀಟ್ ಈಗ ಭಾರಿ ಚರ್ಚೆಗೆ ಕಾರಣವಾಗಿದೆ.

English summary
Filmmaker Sandip Ssingh files A 200 Crore Defamation Suit against Arnab Goswami. Sandip has posted pictures of the notice he has sent to Arnab Goswami and Republic channel
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X