ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರದ ತೈಲ ತಯಾರಿಕಾ ಘಟಕದಲ್ಲಿ ಭಾರಿ ಅಗ್ನಿ ಅವಘಡ

|
Google Oneindia Kannada News

ಅಕೋಲಾ, ಮೇ 20: ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿರುವ ತೈಲಾ ಕಾರ್ಖಾನೆ ಘಟಕದಲ್ಲಿ ಭಾರಿ ಪ್ರಮಾಣದ ಬೆಂಕಿ ಅವಘಡ ಸಂಭವಿಸಿದೆ ಎಂದು ಅಗ್ನಿಶಾಮಕ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಅದೃಷ್ಟವಶಾತ್ ಈ ದುರಂತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಅಕೋಲಾದ ಕೈಗಾರಿಕಾ ಅಭಿವೃದ್ಧಿ ನಿಗಮ (ಎಂಐಡಿಸಿ) ಪ್ರದೇಶದಲ್ಲಿರುವ ಖಾಸಗಿ ಘಟಕದಲ್ಲಿ ಮಂಗಳವಾರ ರಾತ್ರಿ ಸುಮಾರು 8 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದಿದೆ.

ಲಾಕ್ ಡೌನ್ ನಡುವೆ ಮಾಂಸಕ್ಕಾಗಿ ಚಾಮರಾಜನಗರದಲ್ಲಿ ಕಾಡಿಗೆ ಬೆಂಕಿ ಹಚ್ಚಿ ಕಳ್ಳಬೇಟೆಲಾಕ್ ಡೌನ್ ನಡುವೆ ಮಾಂಸಕ್ಕಾಗಿ ಚಾಮರಾಜನಗರದಲ್ಲಿ ಕಾಡಿಗೆ ಬೆಂಕಿ ಹಚ್ಚಿ ಕಳ್ಳಬೇಟೆ

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ, ಒಂದು ಗಂಟೆಯಲ್ಲಿ ಬೆಂಕಿ ನಂದಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Fire Accident At Oil Factory In Maharashtra

ಆಟೋಮೊಬೈಲ್ ಕ್ಷೇತ್ರದಲ್ಲಿ ಬಳಕೆಯಾಗುವ ತೈಲ ತಯಾರಿಸುವ ಘಟಕ ಇದಾಗಿದೆ ಎಂದು ಹೇಳಲಾಗಿದೆ. ಅಂದಾಜು ಈ ದುರಂತದಿಂದ ಎಷ್ಟು ನಷ್ಟವಾಗಿದೆ ಎಂದು ತಿಳಿದು ಬಂದಿಲ್ಲ. ಆದರೆ, ಆವರಣದಲ್ಲಿ ಇರಿಸಿದ್ದ ತೈಲ ಮತ್ತು ಇತರ ವಸ್ತುಗಳು ಸಂಪೂರ್ಣವಾಗಿ ನಾಶವಾಗಿದೆ.

English summary
Fire breaks out in an auto spare parts company in Akola. 15 fire tenders have rushed to the spot.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X