ಮುಂಬೈನಲ್ಲಿ ಬಾಲಿವುಡ್ ಸ್ಟಾರ್ ಶಾರೂಖ್ ಖಾನ್ ಬಂಗಲೆ ಪಕ್ಕದಲ್ಲೇ ಅಗ್ನಿ ಅನಾಹುತ
ಮುಂಬೈ, ಮೇ 10: ಮುಂಬೈನ ಬಾಂದ್ರಾ ಬ್ಯಾಂಡ್‌ಸ್ಟ್ಯಾಂಡ್ ಪ್ರದೇಶದಲ್ಲಿರುವ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಬಂಗಲೆ 'ಮನ್ನತ್' ಬಳಿ ಇರುವ 21 ಅಂತಸ್ತಿನ ವಸತಿ ಕಟ್ಟಡದಲ್ಲಿ ಸೋಮವಾರ ಸಂಜೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಗ್ನಿಶಾಮಕ ಅಧಿಕಾರಿಯ ಪ್ರಕಾರ, "ನೆಲದ ಜೊತೆಗೆ 21 ಅಂತಸ್ತಿನ ಕಟ್ಟಡದ 14ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಹಂತ-II ಬೆಂಕಿ ಎಂದು ವರ್ಗೀಕರಿಸಲಾಗಿದೆ. ಸೋಮವಾರ ರಾತ್ರಿ 7.45ರ ಸುಮಾರಿಗೆ ಅಗ್ನಿಶಾಮಕ ದಳಕ್ಕೆ ಈ ಸಂಬಂಧ ಮಾಹಿತಿ ನೀಡಲಾಗಿತ್ತು" ಎಂದು ಹೇಳಿದ್ದಾರೆ.
ಸೋಮವಾರ ಅಗ್ನಿ ಅನಾಹುತದ ನಡೆದ ನಂತರದಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸುವ ಉದ್ದೇಶದಿಂದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿತ್ತು. ಇದರಿಂದಾಗಿ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿತ್ತು ಎಂದು ವರದಿಯಾಗಿದೆ.

ಬೆಂಕಿ ನಂದಿಸುವ ಕಾರ್ಯಾಚರಣೆ: 8 ಅಗ್ನಿಶಾಮಕ ವಾಹನಗಳು, 7 ಜಂಬೋ ಟ್ಯಾಂಕರ್‌ಗಳು ಮತ್ತು ಆಂಬ್ಯುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿ ಬಂದವು. ಮುಂಬೈ ನಾಗರಿಕ ಸಂಸ್ಥೆ, ಅದಾನಿ ವಿದ್ಯುತ್ ಇಲಾಖೆಯ ಅಧಿಕಾರಿಗಳು ಕೂಡ ಸ್ಥಳಕ್ಕೆ ಬಂದು, ಬೆಂಕಿ ನಂದಿಸುವ ಕಾರ್ಯದಲ್ಲಿ ಪಾಲ್ಗೊಂಡರು.












Click it and Unblock the Notifications