Breaking; ಮುಂಬೈನ ಎಲ್‌ಐಸಿ ಕಟ್ಟಡದಲ್ಲಿ ಬೆಂಕಿ
ಮುಂಬೈ, ಮೇ 07; ಮುಂಬೈನ ಸಾಂತಾಕ್ರೂಜ್ ಪ್ರದೇಶದಲ್ಲಿನ ಎಲ್‌ಐಸಿ ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. 8 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿವೆ.
ಶನಿವಾರ ಮುಂಜಾನೆ ಕಚೇರಿಯ 2ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಯಾಲರಿ ಸೇವಿಂಗ್ಸ್ ರೂಂನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಕಿಟಕಿಯಿಂದ ಹೊರಗೆ ಸಹ ಬೆಂಕಿಯ ಕೆನ್ನಾಲಿಗೆ ಕಾಣಿಸಿದ್ದು, ದಟ್ಟ ಹೊಗೆ ಆವರಿಸಿತು.

ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ 8 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ. ದಾಖಲೆಗಳು ಸುಟ್ಟು ಕರಕಲಾಗಿವೆ. ಬೆಂಕಿಯನ್ನು ಹತೋಟಿಗೆ ತರುವ ಕಾರ್ಯ ನಡೆಯುತ್ತಿದೆ.
2ನೇ ಮಹಡಿಯಲ್ಲಿರುವ ಸಂಬಳ ಉಳಿತಾಯ ಯೋಜನೆ ವಿಭಾಗದಲ್ಲಿನ ವಿದ್ಯುತ್ ವೈರಿಂಗ್ ಪ್ರದೇಶದಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಕಂಪ್ಯೂಟರ್, ದಾಖಲೆ, ಮರದ ಪೀಠೋಪಕರಣಗಳು ಇತ್ಯಾದಿಗಳಿಗೆ ಬೆಂಕಿ ಹೊತ್ತಿಕೊಂಡಿದೆ.

8 ಮೋಟಾರ್ ಪಂಪ್‌ಗಳ ಮೂರು ಬೆಂಕಿ ನಂದಿಸಲು ಪ್ರಯತ್ನ ನಡೆಸಲಾಗುತ್ತಿದೆ ಎಂದು ಮುಂಬೈ ಅಗ್ನಿಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ. ಮುಂಜಾನೆ ಕಚೇರಿಯಲ್ಲಿ ಯಾವುದೇ ಸಿಬ್ಬಂದಿ ಇಲ್ಲದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ.












Click it and Unblock the Notifications