ನಾಗ್ಪುರ್ ಕೊವಿಡ್-19 ಆಸ್ಪತ್ರೆ ಅಗ್ನಿ ದುರಂತದಲ್ಲಿ 4 ಮಂದಿ ಸಾವು

ನಾಗ್ಪುರ್, ಏಪ್ರಿಲ್ 09: ಮಹಾರಾಷ್ಟ್ರದ ನಾಗ್ಪುರದಲ್ಲಿ ಇರುವ ಖಾಸಗಿ ಕೊವಿಡ್-19 ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆ ಆಸ್ಪತ್ರೆಯಲ್ಲಿ ದಾಖಲಾಗಿದ್ದ 27 ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಅವರ ಆರೋಗ್ಯ ಸ್ಥಿತಿಯ ಬಗ್ಗೆ ಈಗಲೇ ಏನನ್ನೂ ಹೇಳಲು ಆಗುವುದಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ದೃಷ್ಟಿಯಿಂದ ವಾರಾಂತ್ಯದಲ್ಲಿ ಲಾಕ್‌ಡೌನ್‌ ಜಾರಿಗೊಳಿಸಲಾಗಿದೆ. ಶುಕ್ರವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆವರೆಗೂ ಲಾಕ್‌ಡೌನ್‌ ಜಾರಿಯಲ್ಲಿ ಇರಲಿದೆ. ಈ ಅವಧಿಯಲ್ಲಿ ಖಾಸಗಿ ಕೊವಿಡ್-19 ಲಸಿಕೆ ಕೇಂದ್ರಗಳನ್ನು ಬಂದ್ ಮಾಡಲಾಗುತ್ತಿದ್ದು, ಸರ್ಕಾರಿ ಲಸಿಕೆ ಕೇಂದ್ರಗಳು ಎಂದಿನಂತೆ ತೆರೆದಿರುತ್ತವೆ.

Fire Broke Out At Private Hospital In Nagpur, 4 Dead And Several Injured

ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಪ್ರಕರಣ:

ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆಗೆ ಕಡಿವಾಣವೇ ಇಲ್ಲದಂತಾಗಿದೆ. ರಾಜ್ಯದಲ್ಲಿ ಒಂದೇ ದಿನ 58993 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 45,391 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಒಂದೇ ದಿನ 301 ಮಂದಿ ಪ್ರಾಣ ಬಿಟ್ಟಿದ್ದಾರೆ. ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 32,88,540ಕ್ಕೆ ಏರಿಕೆಯಾಗಿದೆ. ಈವರೆಗೂ 26,95,148 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಒಟ್ಟು 57,329 ಮಂದಿ ಪ್ರಾಣ ಬಿಟ್ಟಿದ್ದಾರೆ. ಉಳಿದಂತೆ ರಾಜ್ಯದಲ್ಲಿ 5,34,603 ಸಕ್ರಿಯ ಪ್ರಕರಣಗಳಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+